ಕೆನ್ಯಾ | ವಿಮಾನ ಅಪಘಾತ: 10 ವಿದೇಶಿಯರು ಸೇರಿ 11 ಮಂದಿ ಸಾವು

Date:

ವಿಮಾನ ಅಪಘಾತ ಸಂಭವಿಸಿ 10 ವಿದೇಶಿಯರು ಸೇರಿದಂತೆ ಒಟ್ಟು 11 ಮಂದಿ ಸಾವನ್ನಪ್ಪಿರುವ ಘಟನೆ ಮಂಗಳವಾರ ಮುಂಜಾನೆ ಕೆನ್ಯಾದ ಮಸಾಯಿ ಮಾರಾ ರಾಷ್ಟ್ರೀಯ ಅಭಯಾರಣ್ಯಕ್ಕೆ ಹೋಗುವ ಮಾರ್ಗದಲ್ಲಿ ಸಂಭವಿಸಿದೆ.

- Advertisement -

ಎಂಟು ಹಂಗೇರಿಯನ್ ಮತ್ತು ಇಬ್ಬರು ಜರ್ಮನ್ ಪ್ರಯಾಣಿಕರು ವಿಮಾನದಲ್ಲಿದ್ದರು. ಉಳಿದಂತೆ ಕೆನ್ಯಾದ ಪೈಲಟ್ ಇದ್ದರು. ಎಲ್ಲಾರೂ ಸಾವನ್ನಪ್ಪಿದ್ದಾರೆ ಎಂದು ವಿಮಾನಯಾನ ಸಂಸ್ಥೆ ಮೊಂಬಾಸಾ ಏರ್ ಸಫಾರಿ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಇದನ್ನು ಓದಿದ್ದೀರಾ? ಗುಜರಾತ್ ವಿಮಾನ ದುರಂತ | ಸಿನಿಮಾ ನಿರ್ಮಾಪಕ ನಾಪತ್ತೆ: ಅಪಘಾತದಲ್ಲಿ ಮೃತಪಟ್ಟಿರುವ ಶಂಕೆ

ಡಯಾನಿ ವಾಯುನೆಲೆಯಿಂದ ಸುಮಾರು 40 ಕಿಲೋಮೀಟರ್ (25 ಮೈಲುಗಳು) ದೂರದಲ್ಲಿರುವ ಗುಡ್ಡಗಾಡು ಮತ್ತು ಅರಣ್ಯ ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದ ಕಾರಣವನ್ನು ತನಿಖಾ ಸಂಸ್ಥೆಗಳು ಪರಿಶೀಲಿಸುತ್ತಿವೆ ಎಂದು ಕ್ವಾಲೆ ಕೌಂಟಿ ಆಯುಕ್ತ ಸ್ಟೀಫನ್ ಒರಿಂಡೆ ಅಸೋಸಿಯೇಟೆಡ್ ಪ್ರೆಸ್‌ಗೆ ತಿಳಿಸಿದರು. ಸ್ಥಳೀಯ ಸಮಯ ಬೆಳಿಗ್ಗೆ 5:30 ಕ್ಕೆ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ಆರಂಭದಲ್ಲಿ ಹೇಳಿದ್ದರು. ಆದರೆ ಸಾರಿಗೆ ಸಚಿವರು ಬೆಳಿಗ್ಗೆ 8:35 ಅಪಘಾತ ಸಂಭವಿಸಿದೆ ಎಂದು ಹೇಳಿಕೆ ನೀಡಿದ್ದಾರೆ. ವಿಮಾನಯಾನ ಸಂಸ್ಥೆ ನಿಖರವಾದ ಸಮಯವನ್ನು ತಿಳಿಸಿಲ್ಲ.

ವಿಮಾನವು ಬೆಂಕಿಗಾಹುತಿಯಾಗಿದ್ದು, ಪ್ರತ್ಯಕ್ಷದರ್ಶಿಗಳು ಭಾರಿ ಸದ್ದು ಕೇಳಿದೆ ಎಂದು ತಿಳಿಸಿರುವುದಾಗಿ ಎಪಿ ವರದಿ ಮಾಡಿದೆ.

ಕೆನ್ಯಾ ಕರಾವಳಿಯ ಪಶ್ಚಿಮದಲ್ಲಿರುವ ಮಸಾಯಿ ಮಾರಾ ರಾಷ್ಟ್ರೀಯ ಮೀಸಲು ಪ್ರದೇಶವು ಹೆಸರುವಾಸಿಯಾಗಿದೆ. ಇಲ್ಲಿಗೆ ಜನಪ್ರಿಯ ಕರಾವಳಿ ಪಟ್ಟಣ ಡಯಾನಿಯಿಂದ ಎರಡು ಗಂಟೆಗಳ ನೇರ ವಿಮಾನ ಪ್ರಯಾಣದಲ್ಲಿ ಸಾಗಬಹುದಾಗಿದೆ. ಈ ಮೀಸಲು ಪ್ರದೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಆರ್ಥಿಕತೆಗೆ ಸ್ಥಿರ ಸಿದ್ಧಾಂತ ನೀಡಿದ ಇಬ್ಬರು ಅಮೆರಿಕನ್‌ ಅರ್ಥಶಾಸ್ತ್ರಜ್ಞರಿಗೆ ‌’ನೊಬೆಲ್’ ಗೌರವ

ಮೂಲ ಆರ್ಥಿಕ ನೀತಿಗಳ ಆಧಾರದ ಮೇಲೆ ಜಾಗತಿಕ ಮಾರುಕಟ್ಟೆಯ ಸ್ಥಿರತೆಯನ್ನು ಕಾಪಾಡುವಲ್ಲಿ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್...

ನಾನು ಎಷ್ಟೇ ಮೂರ್ಖತನದ ಮಾತು ಆಡಿದರೂ ನೀವು ಚಪ್ಪಾಳೆ ತಟ್ಟುತ್ತೀರಿ: ಟ್ರಂಪ್

"ನಾನು ಎಷ್ಟೇ ಮೂರ್ಖತನದ ಮಾತುಗಳನ್ನು ಆಡಿದರೂ ನೀವು ಚಪ್ಪಾಳೆ ತಟ್ಟುತ್ತೀರಿ" ಎಂದು...

ಪ್ರತಿಭಟನಾಕಾರರ ಬಂಧನ ಪ್ರಜಾಪ್ರಭುತ್ವದ ಹಕ್ಕುಗಳ ದಮನ: ದೆಹಲಿ ಪೊಲೀಸ್ ಕ್ರಮಕ್ಕೆ ವಿಶ್ವಸಂಸ್ಥೆ ಆಕ್ಷೇಪ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...