50 ಜನರಿದ್ದ ರಷ್ಯಾ ವಿಮಾನ ಪತನ; 50 ಮಂದಿ ಸಾವು

Date:

ಸುಮಾರು 50 ಪ್ರಯಾಣಿಕರಿದ್ದ ರಷ್ಯಾದ AN-24 ವಿಮಾನ ರಾಡಾರ್‌ನಿಂದ ಕಣ್ಮರೆಯಾಗಿದ್ದು, ವಿಮಾನ ಹೊತ್ತಿ ಉರಿಯುತ್ತಿರುವುದನ್ನು ರಕ್ಷಣಾ ಹೆಲಿಕಾಪ್ಟರ್ ಪತ್ತೆ ಮಾಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

- Advertisement -

ಅಂಗಾರ ಏರ್‌ಲೈನ್ಸ್ ನಿರ್ವಹಿಸುತ್ತಿದ್ದ ಪ್ರಯಾಣಿಕರ ವಿಮಾನದಲ್ಲಿ ಮಕ್ಕಳು ಸೇರಿದಂತೆ ಸುಮಾರು 50 ಮಂದಿ ಪ್ರಯಾಣಿಸುತ್ತಿದ್ದರು. ರಷ್ಯಾದ ಪೂರ್ವದ ಅಮುರ್ ಪ್ರದೇಶದಲ್ಲಿ ಹಾರಾಟ ನಡೆಸುತ್ತಿದ್ದಾಗ ಸಂಪರ್ಕ ಕಡಿತಗೊಂಡಿತು. ವಿಮಾನದಲ್ಲಿ ಐದು ಮಕ್ಕಳು, ಆರು ಸಿಬ್ಬಂದಿ ಸೇರಿದಂತೆ 43 ಪ್ರಯಾಣಿಕರಿದ್ದರು. ವಿಮಾನದಲ್ಲಿದ್ದವರೆಲ್ಲ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಚೀನಾದ ಗಡಿಯ ಬಳಿ ರಷ್ಯಾದ ಪೂರ್ವ ಭಾಗದಲ್ಲಿ ಸಂಪರ್ಕ ಕಳೆದುಕೊಂಡಿತು ಎಂದು ರಕ್ಷಣಾ ತಂಡದ ಮಾಹಿತಿ ಉಲ್ಲೇಖಿಸಿ ಸುದ್ದಿ ಸಂಸ್ಥೆಗಳು ವರದಿ ಮಾಡಿದೆ. ವಿಮಾನದ ಹಾರಾಟ ನಡೆಸುವಾಗ ವಾಯು ಸಂಚಾರ ನಿಯಂತ್ರಕರು ಸಂಪರ್ಕ ಕಳೆದುಕೊಂಡ ಕೆಲವೇ ನಿಮಿಷಗಳ ನಂತರ ವಿಮಾನದ ಹೊತ್ತಿ ಉರಿಯುತ್ತಿರುವುದನ್ನು ರಕ್ಷಣಾ ಹೆಲಿಕಾಪ್ಟರ್ ಪತ್ತೆಹಚ್ಚಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋಶಾ ಕಂಪನಿಯ ಮತ್ತೊಂದು ನಿಗೂಢ ನಾಟಕ!

ಸೈಬೀರಿಯಾ ಮೂಲದ ಅಂಗಾರ ವಿಮಾನಯಾನ ಸಂಸ್ಥೆ ನಿರ್ವಹಿಸುತ್ತಿದ್ದ AN-24 ವಿಮಾನವು ಅಮುರ್ ಪ್ರದೇಶದ ಟಿಂಡಾ ಪಟ್ಟಣವನ್ನು ಸಮೀಪಿಸುತ್ತಿದ್ದಾಗ ರಾಡಾರ್‌ನಿಂದ ಕಣ್ಮರೆಯಾಯಿತು. ರಷ್ಯಾದ ಸುದ್ದಿ ಸಂಸ್ಥೆ ಇಂಟರ್‌ಫ್ಯಾಕ್ಸ್ ಪ್ರಕಾರ, ಟಿಂಡಾ ವಿಮಾನ ನಿಲ್ದಾಣದಲ್ಲಿ ಆರಂಭಿಕ ಲ್ಯಾಂಡಿಂಗ್ ಪ್ರಯತ್ನ ವಿಫಲವಾದ ನಂತರ, ಎರಡನೇ ಲ್ಯಾಂಡಿಂಗ್ ಪ್ರಯತ್ನದ ಸಮಯದಲ್ಲಿ ವಿಮಾನ ಕಣ್ಮರೆಯಾಗಿದೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ, ಮೂರು ಜನರನ್ನು ಹೊತ್ತೊಯ್ಯುತ್ತಿದ್ದ ರಾಬಿನ್ಸನ್ R66 ಹೆಲಿಕಾಪ್ಟರ್ ಇದೇ ಅಮುರ್ ಪ್ರದೇಶದಲ್ಲಿ ಹಾರಾಟದ ಸಮಯದಲ್ಲಿ ಕಾಣೆಯಾಗಿತ್ತು. ಈ ಪ್ರದೇಶವು ಮಾಸ್ಕೋದಿಂದ ಪೂರ್ವಕ್ಕೆ ಸರಿಸುಮಾರು 6,600 ಕಿ.ಮೀ ದೂರದಲ್ಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...