ಅಮೆರಿಕ | ಡೊನಾಲ್ಡ್ ಟ್ರಂಪ್ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ: ಪ್ರಧಾನಿ ಮೋದಿ ಖಂಡನೆ

Date:

ಅಮೆರಿಕದ ವಾಷಿಂಗ್ಟನ್ ಹಿಲ್ಟನ್ ಹೋಟೆಲ್‌ನಲ್ಲಿ ಶನಿವಾರ ರಾತ್ರಿ ನಡೆದ ಶ್ವೇತಭವನದ ವರದಿಗಾರರ ಔತಣಕೂಟದ ವೇಳೆ ಗುಂಡಿನ ದಾಳಿ ನಡೆದಿದೆ. ಕೂಡಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸ್ಥಳದಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಈ ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಖಂಡಿಸಿದ್ದಾರೆ.

- Advertisement -

ಕಾರ್ಯಕ್ರಮದಲ್ಲಿ ಟ್ರಂಪ್ ಇದ್ದಾಗ, ಸರಿಸುಮಾರು 7 ರಿಂದ 8 ಬಾರಿ ಗುಂಡಿನ ಸದ್ದು ಕೇಳಿಸಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಸೀಕ್ರೆಟ್ ಸರ್ವಿಸ್ ದೃಢಪಡಿಸಿದೆ. ಹಾಗೆಯೇ ಟ್ರಂಪ್ ಮತ್ತು ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಇದನ್ನು ಓದಿದ್ದೀರಾ? ರಷ್ಯಾದಿಂದ ತೈಲ ಖರೀದಿ ಇಲ್ಲವೆಂದು ಮೋದಿ ಭರವಸೆ: ಟ್ರಂಪ್

ಇನ್ನು ಟ್ರಂಪ್ ಕಾರ್ಯಕ್ರಮದಲ್ಲಿ ಗುಂಡು ಹಾರಿಸಿದಾತನನ್ನು ಕೋಲ್ ಥಾಮಸ್ ಅಲೆನ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಸೀಕ್ರೆಟ್ ಸರ್ವಿಸ್ ಅಧಿಕಾರಿಗಳು ಈಗಾಗಲೇ ವಶಕ್ಕೆ ಪಡೆದಿದ್ದಾರೆ.

ಈ ಘಟನೆಯ ಬಗ್ಗೆ ಟ್ರೂಥ್ ಸೋಶಿಯಲ್ ಸಾಮಾಜಿಕ ಜಾಲತಾಣದಲ್ಲಿ ಟ್ರಂಪ್ ಪೋಸ್ಟ್ ಮಾಡಿದ್ದು, “ಗುಂಡಿನ ದಾಳಿ ನಡೆಸಿದಾತನನ್ನು ಬಂಧಿಸಲಾಗಿದೆ. ಅಧಿಕಾರಗಳ ಮಾರ್ಗದರ್ಶನದಂತೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಖಂಡನೆ

“ವಾಷಿಂಗ್ಟನ್ ಡಿಸಿ ಹೋಟೆಲ್‌ನಲ್ಲಿ ಇತ್ತೀಚೆಗೆ ನಡೆದ ಘಟನೆಯ ನಂತರ ಅಧ್ಯಕ್ಷ ಟ್ರಂಪ್, ಪ್ರಥಮ ಮಹಿಳೆ ಮತ್ತು ಉಪಾಧ್ಯಕ್ಷರು ಸುರಕ್ಷಿತವಾಗಿದ್ದಾರೆ ಮತ್ತು ಯಾವುದೇ ಹಾನಿಗೊಳಗಾಗಿಲ್ಲ ಎಂದು ತಿಳಿದು ಸಮಾಧಾನವಾಯಿತು. ಅವರ ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ. ಈ ಘಟನೆಯನ್ನು ನಿಸ್ಸಂದಿಗ್ಧವಾಗಿ ಖಂಡಿಸಬೇಕು” ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಪುತ್ರ ನದಿಗೆ ಚೀನಾದ ಬೃಹತ್ ಅಣೆಕಟ್ಟು: ಪ್ರವಾಹದ ಅಪಾಯ ಹೆಚ್ಚಳ, ಭಾರತಕ್ಕೂ ಆತಂಕ

ಟಿಬೆಟ್‌ನಲ್ಲಿ ಹರಿಯುವ ಬ್ರಹ್ಮಪುತ್ರ (ಯಾರ್ಲುಂಗ್ ಜಾಂಗ್ಬೋ) ನದಿಗೆ ಚೀನಾ ನಿರ್ಮಿಸುತ್ತಿರುವ ವಿಶ್ವದ...

ಸೌಜನ್ಯ ಪ್ರಕರಣ ಮರು ತನಿಖೆಗೆ ವೇಗ: ಹಿಂದಿನ ತನಿಖಾಧಿಕಾರಿಗಳಿಗೆ SIT ನೋಟಿಸ್, 15ಕ್ಕೂ ಹೆಚ್ಚು ಮಂದಿಗೆ ಬುಲಾವ್

ರಾಜ್ಯಾದ್ಯಂತ ತೀವ್ರ ಗಮನ ಸೆಳೆದಿರುವ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ...

ಪಟಾಕಿ ನಿಷೇಧ ಜಾಗೃತಿಗೆ ಹಣವೇಕೆ; ಸೆಲೆಬ್ರಿಟಿಗಳ ವಿರುದ್ಧ ಬಾಂಬೆ ಹೈಕೋರ್ಟ್ ಅಸಮಾಧಾನ

ಮುಂಬೈನಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ...

ಕರ್ನಾಟಕ SIR | ಅಂತಿಮ ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರಿದೆಯೇ ಪರಿಶೀಲಿಸಿ

ರಾಜ್ಯದಲ್ಲಿ ಗ್ಯಾನೇಶ್‌ ಕುಮಾರ್‌/ಚುನಾವಣಾ ಆಯೋಗ ಹೇರಿದ್ದ ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ...