ಪಿಒಕೆಯಲ್ಲಿ ಪಾಕ್ ಭದ್ರತಾ ಪಡೆಗಳ ದೌರ್ಜನ್ಯ; ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ, 11 ಮಂದಿ ಸಾವು​

Date:

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಪಾಕಿಸ್ತಾನ ಸರ್ಕಾರದ ನೀತಿಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನಿ ಭದ್ರತಾ ಪಡೆಗಳು ದೌರ್ಜನ್ಯ ಎಸಗಿದ್ದು, ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ. ಹಲವಾರು ಜನರು ಗಾಯಗೊಂಡಿದ್ದಾರೆ.​

- Advertisement -

‘ಜಾಯಿಂಟ್ ಅವಾಮಿ ಆಕ್ಷನ್ ಕಮಿಟಿ’ (Joint Awami Action Committee) ನೇತೃತ್ವದಲ್ಲಿ ಪಾಕ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬರ್ನಾಲಾ, ಭಿಂಬರ್, ಕೋಟ್ಲಿ ಹಾಗೂ ಮಿರ್ಪುರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ. ಮುಜಾಫರಾಬಾದ್‌ನಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಸಿಬ್ಬಂದಿ Tear Gas (ಟಿಯರ್ ಗ್ಯಾಸ್) ಪ್ರಯೋಗಿಸಿದ್ದಾರೆ.​ ಉದ್ವಿಗ್ನತೆ ಹೆಚ್ಚಾದ ಹಿನ್ನೆಲೆಯಲ್ಲಿ ಇಡೀ ಪ್ರದೇಶದ ಮಾರುಕಟ್ಟೆಗಳನ್ನು ಮುಚ್ಚಲಾಗಿದ್ದು, ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಅಷ್ಟೇ ಅಲ್ಲದೆ, ಪ್ರತಿಭಟನೆಯನ್ನು ಹತ್ತಿಕ್ಕಲು ಪಾಕಿಸ್ತಾನ ಸರ್ಕಾರವು ಆ ಭಾಗದಲ್ಲಿ ಮೊಬೈಲ್ ಮತ್ತು ಇಂಟರ್ನೆಟ್ ಸಂಪರ್ಕವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. ಹಲವು ಕಾರ್ಯಕರ್ತರನ್ನು ಬಂಧಿಸಿದೆ ಎಂದು ವರದಿಯಾಗಿದೆ.​

ಈ ಹಿಂಸಾಚಾರ ಮತ್ತು ಅಲ್ಲಿನ ಪರಿಸ್ಥಿತಿ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಬ್ರಿಟನ್ ಸಂಸತ್ತಿನ 50 ಕ್ಕೂ ಹೆಚ್ಚು ಸಂಸದರು ಅಲ್ಲಿನ ಗೃಹ ಕಾರ್ಯದರ್ಶಿ ಮತ್ತು ವಿದೇಶಾಂಗ ಕಾರ್ಯದರ್ಶಿಗೆ ಪತ್ರ ಬರೆದು ಕಳವಳ ವ್ಯಕ್ತಪಡಿಸಿದ್ದಾರೆ. ಬ್ರಿಟನ್‌ನಲ್ಲಿ ನೆಲೆಸಿರುವ ಹಲವು ಕಾಶ್ಮೀರಿಗರಿಗೆ ಪಿಒಕೆಯಲ್ಲಿರುವ ತಮ್ಮ ಸಂಬಂಧಿಕರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಕಳವಳ ವ್ಯಕ್ತಪಡಿದ್ದಾರೆ.​

ಬ್ರಿಟನ್ ಸರ್ಕಾರವು ತನ್ನ ರಾಜತಾಂತ್ರಿಕ ಮಾರ್ಗಗಳನ್ನು ಬಳಸಿ ಈ ಉದ್ವಿಗ್ನತೆಯನ್ನು ಶಾಂತಗೊಳಿಸಲು, ಇಂಟರ್ನೆಟ್ ನಿಷೇಧವನ್ನು ಹಿಂಪಡೆಯಲು ಮತ್ತು ಕಾಶ್ಮೀರಿಗರ ಮಾನವ ಹಕ್ಕುಗಳನ್ನು ಗೌರವಿಸಿ ಮಾತುಕತೆಯ ಮೂಲಕ ಶಾಂತಿಯುತ ಪರಿಹಾರ ಕಂಡುಕೊಳ್ಳಲು ಪಾಕಿಸ್ತಾನದ ಮೇಲೆ ಒತ್ತಡ ಹೇರಬೇಕು ಎಂದು ಸಂಸದ ಇಮ್ರಾನ್ ಹುಸೇನ್ ಸೇರಿದಂತೆ ಹಲವು ನಾಯಕರು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿಬೆಟ್‌ನಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ: ಜಲಪ್ರಳಯದ ಬೆನ್ನಲ್ಲೇ ಚೀನಾಗೆ ಮತ್ತೊಂದು ಆಘಾತ

ಚೀನಾದ ಟಿಬೆಟ್ ಭಾಗದಲ್ಲಿ ಗುರುವಾರ ರಾತ್ರಿ 7.0 ತೀವ್ರತೆಯ ಭಾರಿ ಭೂಕಂಪ...

ಗಾಜಾ ಯುದ್ಧದ ನೆರಳಲ್ಲಿ ನಿರ್ಣಾಯಕ ಸಮರ; ಹೇಗಿರಲಿದೆ ಗೊತ್ತೇ ಇಸ್ರೇಲ್ ಚುನಾವಣೆ?

ಇಸ್ರೇಲ್‌ನಲ್ಲಿ ಇದೇ ಅಕ್ಟೋಬರ್ 27ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ದೇಶದ 26ನೇ...

ಎಪ್‌ಸ್ಟೀನ್ ಫೋಟೊ ಬಾಂಬ್‌! ಮೋದಿ-ಪುರಿ ವಿರುದ್ಧ ವಿಪಕ್ಷಗಳ ವಾಗ್ದಾಳಿ

ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಅಮೆರಿಕದ ಕುಖ್ಯಾತ ಅಪರಾಧಿ ಜೆಫ್ರಿ ಎಪ್‌ಸ್ಟೀನ್...