ಪಾಕಿಸ್ತಾನದಲ್ಲಿ ರಾಜಕೀಯ ಹಿಂಸಾಚಾರ; ‘ಕಂಡಲ್ಲಿ ಗುಂಡು’ ಆದೇಶ

Date:

ಪಾಕಿಸ್ತಾನದಲ್ಲಿ ರಾಜಕೀಯ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬಿಡುಗಡೆ ಆಗ್ರಹಿಸಿ ಪಾಕಿಸ್ತಾನ್ ತೆಹ್ರೀಕ್ ಎ ಇನ್ಸಾಫ್‌ (ಪಿಟಿಐ) ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಘರ್ಷಣೆಗಳು ನಡೆಯುತ್ತಿವೆ. ಈವರೆಗೆ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದಾರೆ.

- Advertisement -

ಇಮ್ರಾನ್‌ ಖಾನ್ ಬಿಡುಗಡೆಗೆ ಆಗ್ರಹಿಸಿ ಅವರ ಬೆಂಬಲಿಗರು ಪಾಕಿಸ್ತಾನದಾದ್ಯಂತ ಪ್ರತಿಭಟನೆ ನಡೆಸಿದ್ದು, ಸೋಮವಾರ ತಡರಾತ್ರಿ ರಾಜಧಾನಿ ಇಸ್ಲಾಮಾಬಾದ್‌ಗೆ ಪ್ರವೇಶಿಸಿದ್ದಾರೆ. ಈ ವೇಳೆ, ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದೆ. ಪೊಲೀಸರು ಮತ್ತು ಪಿಟಿಐ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ನಾಲ್ವರು ಸೈನಿಕರು ಮತ್ತು ಓರ್ವ ಪ್ರತಿಭಟನಾಕಾರ ಸಾವನ್ನಪ್ಪಿದ್ದಾರೆ. 119ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಹಿಂಸಾಚಾರ ತೀವ್ರಗೊಂಡಿದ್ದರಿಂದ ಪಾಕಿಸ್ತಾನ ಸೇನೆಯು ಇಸ್ಲಾಮಾಬಾದ್‌ನಲ್ಲಿ ‘ಶೂಟ್ ಅಟ್ ಸೈಟ್’ (ಗಂಡಲ್ಲಿ ಗುಂಡು) ಆದೇಶ ಹೊರಡಿಸಿದೆ. ರಾಷ್ಟ್ರವ್ಯಾಪಿ ನಡೆಯುತ್ತಿರುವ ಪ್ರತಿಭಟನೆಗಳನ್ನು ನಿಗ್ರಹಿಸಲು ಪ್ರಧಾನಿ ಶೆಹಬಾಜ್ ಷರೀಫ್ ಅವರ ಸರ್ಕಾರ ನಿರಂತರ ಪ್ರಯತ್ನ ನಡೆಸಿದೆ.

‘ಜನಾದೇಶ’ ತಿರುಚಿವಿಕೆ, ಇಮ್ರಾನ್ ಖಾನ್ ಅನ್ಯಾಯದ ಬಂಧನ ಮತ್ತು 26ನೇ ತಿದ್ದುಪಡಿಯ ಅಂಗೀಕಾರವನ್ನು ಖಂಡಿಸಿ ಇಮ್ರಾನ್ ಖಾನ್ ಬೆಂಬಲಿಗರು ನವೆಂಬರ್ 24 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗಳಿಗೆ ಕರೆ ನೀಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಮೆನ್ ರಾಷ್ಟ್ರಪತಿ ಭವನದ ಮೇಲೆ ಹೂತಿಗಳ ಕ್ಷಿಪಣಿ ದಾಳಿ: ಐವರ ಸಾವು

ಯಮೆನ್‌ನ ದಕ್ಷಿಣ ಭಾಗದ ಪ್ರಮುಖ ನಗರವಾದ ಅದನ್‌ನಲ್ಲಿರುವ ಅಲ್-ಮಾಶಿಕ್ ರಾಷ್ಟ್ರಪತಿ ಭವನದ...

ಭಾರತದ ಮೇಲೆ ಶೇ.100 ಸುಂಕ: 10 ದಿನಗಳಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅಂತಿಮ ತೀರ್ಮಾನ!

ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಶೇ. 100ರಷ್ಟು ಭಾರಿ ಆಮದು...

ರಾತ್ರಿ ವೇಳೆಯಲ್ಲೂ ರವಿ; ಸೂರ್ಯನ ಬೆಳಕು ಮಾರಾಟ ಮಾಡಲು ಅಮೆರಿಕ-ಭಾರತ ಸಹಭಾಗಿತ್ವ: ಏನಿದು ಯೋಜನೆ?

ವಿಜ್ಞಾನ ಕಲ್ಪನೆಗಳಿಗಿಂತಲೂ ಮಿಗಿಲಾದ ಅಪರೂಪದ ಯೋಜನೆಯೊಂದು ಈಗ ಜಾಗತಿಕ ಇಂಧನ ಕ್ಷೇತ್ರದಲ್ಲಿ...

ಸೌದಿ ಅರಾಮ್ಕೊ ಪ್ರಧಾನ ಕಚೇರಿ ಮೇಲೆ ದಾಳಿ: ಮತ್ತೆ ಪುಟಿದೆದ್ದರೇ ಹೂತಿ ಬಂಡುಕೋರರು?

ಯೆಮನ್‌ನ ಹೂತಿ ಬಂಡುಕೋರರು ಸೌದಿ ಅರೇಬಿಯಾದ ಧಹ್ರಾನ್‌ನಲ್ಲಿರುವ ತೈಲ ದೈತ್ಯ ಕಂಪನಿ...