ಇರಾನ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ: 35 ಮಂದಿ ಸಾವು; 1,200 ಮಂದಿ ಬಂಧನ

Date:

ಇರಾನ್-ಇಸ್ರೇಲ್ ಸಂಘರ್ಷದ ಬಳಿಕ, ಇರಾನ್‌ ಮೇಲೆ ಪಾಶ್ಚಿಮಾತ್ಯ ರಾಷ್ಟ್ರಗಳು ಆರ್ಥಿಕ ನಿರ್ಬಂಧ ಹೇರಿವೆ. ಪರಿಣಾಮ, ಇರಾನ್‌ನಲ್ಲಿ ಹಣದುಬ್ಬರ ಹೆಚ್ಚಾಗಿದೆ. ಆರ್ಥಿಕ ಅಸ್ಥಿರತೆ ಉಂಟಾಗಿದೆ. ಆಹಾರ ಬೆಲೆಗಳು 40%ರಿಂದ 72%ವರೆಗೆ ಏರಿಕೆಯಾಗಿವೆ. ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಜನರು ಕಳೆದ ವಾರದಿಂದ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಗಳು ಹಿಂಸಾಚಾರದ ಸ್ವರೂಪ ಪಡೆದುಕೊಂಡಿವೆ. ಈವರೆಗೆ ಕನಿಷ್ಠ 35 ಮಂದಿ ಪ್ರತಿಭಟನಾನಿರತರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

- Advertisement -

ಡಿಸೆಂಬರ್ 28ರಂದು ಪ್ರಾರಂಭವಾದ ಪ್ರತಿಭಟನೆಗಳು ಇನ್ನೂ ಮುಂದುವರೆದಿವೆ. ಇರಾನ್‌ನ 31 ಪ್ರಾಂತ್ಯಗಳ ಪೈಕಿ 27 ಪ್ರಾಂತ್ಯಗಳಿಗೆ ಪ್ರತಿಭಟನೆಗಳು ವಿಸ್ತರಿಸಿವೆ. ಈವರೆಗೆ ಸುಮಾರು 1,200ಕ್ಕೂ ಹೆಚ್ಚು ಮಂದಿಯನ್ನು ಭದ್ರತಾ ಪಡೆಗಳು ಬಂಧಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸಾವನ್ನಪ್ಪಿರುವ 35 ಮಂದಿಯಲ್ಲಿ 29 ಪ್ರತಿಭಟನಾಕಾರರು, 4 ಮಕ್ಕಳು ಹಾಗೂ ಇಬ್ಬರು ಇರಾನ್‌ ಭದ್ರತಾ ಪಡೆಗಳ ಸದಸ್ಯರು ಸೇರಿದ್ದಾರೆ ಎಂದು ತಿಳಿದುಬಂದಿದೆ.

ಈ ಲೇಖನ ಓದಿದ್ದೀರಾ?: ವೆನೆಜುವೆಲಾದ ಮೇಲೆ ಡೊನಾಲ್ಡ್ ಟ್ರಂಪ್ ಬಾಂಬ್ ಹಾಕಿದ್ದು ಯಾಕೆ?

ಇರಾನ್‌ನಲ್ಲಿ ಹೆಚ್ಚುತ್ತಿರುವ ಸಾವಿನ ಸಂಖ್ಯೆಯು ಇರಾನ್‌ ಮೇಲೆ ಅಮೆರಿಕದ ಅಸ್ತಕ್ಷೇಪಕ್ಕೆ ಅವಕಾಶವಾಗಬಹುದು ಎಂದು ಹೇಳಲಾಗುತ್ತಿದೆ. ಈಗಾಗಲೇ, ಇರಾನ್‌ಗೆ ಟ್ರಂಪ್ ಬೆದರಿಕೆ ಹಾಕಿದ್ದು, ‘ಪ್ರತಿಭಟನಾಕಾರರನ್ನು ಹಿಂಸಾತ್ಮಕವಾಗಿ ಕೊಂದರೆ, ಅವರ ರಕ್ಷಣೆಗೆ ಅಮೆರಿಕ ಬರುತ್ತದೆ’ ಎಂದು ಹೇಳಿದ್ದಾರೆ. ಆದಾಗ್ಯೂ, ವೆನೆಜುವೆಲಾ ಮೇಲೆ ದಾಳಿ ನಡೆಸಿ, ಅಲ್ಲಿನ ಅಧ್ಯಕ್ಷರನ್ನು ಅಮೆರಿಕ ಅಪಹರಿಸಿದೆ. ಇದು, ಅಮೆರಿಕ ಮತ್ತು ವೆನೆಜುವೆಲಾ ನಡುವೆ ಉದ್ವಿಗ್ನತೆಯನ್ನು ಸೃಷ್ಟಿಸಿದೆ.

ಇರಾನ್‌ನಲ್ಲಿ 2022ರಲ್ಲಿಯೂ ಇಂತಹದ್ದೇ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿದ್ದವು. ಆಗ, ಅಧಿಕಾರಿಗಳ ಸೂಚನೆಯಂತೆ ಹಿಜಾಬ್ ಧರಿಸಲು ನಿರಾಕರಿಸಿದ್ದ 22 ವರ್ಷದ ಮಹ್ಸಾ ಅಮಿನಿಯ ಅವರನ್ನು ಪೊಲೀಸರು ಬಂಧಿಸಿದ್ದರು. ಅವರು ಪೊಲೀಸ್‌ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು. ಅವರನ್ನು ಪೊಲೀಸರೇ ಕೊಂದಿದ್ದಾರೆಂದು ಆರೋಪಿಸಿ ಬೃಹತ್ ಪ್ರತಿಭಟನೆಗಳು ನಡೆದಿದ್ದವು. ಇದೀಗ, ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2026ರ ನೊಬೆಲ್ ಸಾಹಿತ್ಯ ಪ್ರಶಸ್ತಿ: ಕೆನಡಾದ ಖ್ಯಾತ ಕವಯಿತ್ರಿ ‘ಆನ್ ಕಾರ್ಸನ್’ ಮುಡಿಗೇರಿದ ಗರಿ

ಸಾಹಿತ್ಯ ಲೋಕದ ಅತ್ಯಂತ ಪ್ರತಿಷ್ಠಿತ ಗೌರವವಾದ 2026ನೇ ಸಾಲಿನ 'ನೊಬೆಲ್ ಸಾಹಿತ್ಯ...

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...