ನೆತನ್ಯಾಹು ವಿರುದ್ಧ ಇಸ್ರೇಲ್‌ನಲ್ಲಿ ಭುಗಿಲೆದ್ದ ಜನಾಕ್ರೋಶ; ಭಾರೀ ಪ್ರತಿಭಟನೆ

Date:

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಸರ್ಕಾರದ ವಿರುದ್ಧ ಇಸ್ರೇಲ್‌ನಲ್ಲೇ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇರಾನ್ ವಿರುದ್ಧದ ಯುದ್ಧವನ್ನು ಕೂಡಲೇ ನಿಲ್ಲಿಸುವಂತೆ ಒತ್ತಾಯಿಸಿ ಇಸ್ರೇಲ್‌ ರಾಜಧಾನಿ ಟೆಲ್ ಅವಿವ್ ಸೇರಿದಂತೆ ಪ್ರಮುಖ ಪಟ್ಟಣಗಳಲ್ಲಿ ಬೃಹತ್ ಪ್ರತಿಭಟನೆಗಳು ನಡೆದಿವೆ.

- Advertisement -

ಫೆಬ್ರವರಿ 28ರಂದು ಆರಂಭವಾದ ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ವಿರುದ್ಧ ಇಸ್ರೇಲಿಗರು ಪ್ರತಿ ಶನಿವಾರ ಸಾಪ್ತಾಹಿಕ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಆರಂಭದಲ್ಲಿ ಬೆರಳೆಣಿಕೆಯಷ್ಟು ಜನರಿದ್ದ ಈ ಚಳವಳಿ, ಈಗ ಸಾವಿರಾರು ಜನರ ಪಾಲ್ಗೊಳ್ಳುವಿಕೆಯೊಂದಿಗೆ ಬೃಹತ್ ರೂಪ ಪಡೆದುಕೊಳ್ಳುತ್ತಿದೆ. ಶನಿವಾರ ನಡೆದ ಪ್ರತಿಭಟನಾ ಮೆರವಣಿಗೆಯನ್ನು ಚದುರಿಸಲು ಪೊಲೀಸರು ಲಾಠಚಾರ್ಜ್‌ಗಳನ್ನು ಮಾಡಿದ್ದು, ಸುಮಾರು 21 ಮಂದಿಯನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇಸ್ರೆಲ್‌ನಲ್ಲಿ ತುರ್ತು ಪರಿಸ್ಥಿತಿಯನ್ನು ಜಾರಿಗೊಳಿಸಲಾಗಿದೆ. ಅದರ ನಿಯಮಗಳ ಪ್ರಕಾರ, 50ಕ್ಕಿಂತ ಹೆಚ್ಚು ಜನರು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಈ ಪ್ರತಿಭಟನೆಗಳನ್ನು ‘ಅನಧಿಕೃತ’ ಎಂದು ಘೋಷಿಸಿ, ಪ್ರತಿಭಟನಾಕಾರರನ್ನು ಬಲವಂತವಾಗಿ ತೆರವುಗೊಳಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ತಳ್ಳಾಟ ನಡೆದಿದ್ದು, ಕೆಲವರನ್ನು ಕತ್ತು ಹಿಸುಕಿ ಹಿಡಿದು ಎಳೆದೊಯ್ಯುತ್ತಿರುವ ದೃಶ್ಯಗಳು ವರದಿಯಾಗಿವೆ.

ನೆತನ್ಯಾಹು ವಿರುದ್ಧದ ಹೋರಾಟಗಳನ್ನು ಪ್ರಮುಖ ಎಡಪಂಥೀಯ ಸಂಘಟನೆಗಳಾದ ‘ಸ್ಟ್ಯಾಂಡಿಂಗ್ ಟುಗೆದರ್’, ‘ಪೀಸ್ ನೌ’ ಮತ್ತು ‘ವುಮೆನ್ ವೇಜ್ ಪೀಸ್’ ಸಂಘಟಿಸುತ್ತಿವೆ. ಈ ಸಂಘಟನೆಗಳು ನೆತನ್ಯಾಹು ಅವರ ನೀತಿಗಳು ಇಸ್ರೇಲ್‌ನ ಪ್ರಜಾಪ್ರಭುತ್ವಕ್ಕೆ ಹಾನಿ ಮಾಡುತ್ತಿವೆ ಮತ್ತು ದೇಶವನ್ನು ‘ಶಾಶ್ವತ ಯುದ್ಧ’ಕ್ಕೆ ದೂಡುತ್ತಿವೆ ಎಂದು ಆರೋಪಿಸಿವೆ.

“ಸರ್ಕಾರವು ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು ಪೊಲೀಸರನ್ನು ಬಳಸಿಕೊಳ್ಳುತ್ತಿದೆ. ಪ್ರತಿಭಟನೆಗಳು ವ್ಯಾಪಕವಾಗಿ ಹರಡುತ್ತಿರುವುದನ್ನು ಕಂಡು ಸರ್ಕಾರ ಹೆದರುತ್ತಿದೆ” ಎಂದು ‘ಸ್ಟ್ಯಾಂಡಿಂಗ್ ಟುಗೆದರ್’ ಸಂಘಟನೆಯ ಸಂಘಟಕರು ಆಕ್ರೋಶ ಹೊರಹಾಕಿದ್ದಾರೆ.

ಯುದ್ಧದ ಗುರಿ ಮತ್ತು ಭವಿಷ್ಯದ ಬಗ್ಗೆ ಇಸ್ರೇಲ್ ನಾಗರಿಕರಲ್ಲಿ ಆತಂಕ ಮನೆಮಾಡಿದೆ. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ 76 ವರ್ಷದ ಜೋನ್ ಲೆವಿನ್ ಎಂಬುವವರು, “ಈ ಯುದ್ಧವು ನೆತನ್ಯಾಹು ಅವರ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವ ತಂತ್ರದ ಭಾಗವಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ. ಯುದ್ಧ ಆರಂಭವಾಗಿ ನಾಲ್ಕು ವಾರಗಳಾಗಿದ್ದರೂ, ಇದರಿಂದ ಹೊರಬರುವುದು ಹೇಗೆ ಎಂಬ ಬಗ್ಗೆ ಸರ್ಕಾರದ ಬಳಿ ಯಾವುದೇ ಸ್ಪಷ್ಟ ಯೋಜನೆಯಿಲ್ಲ ಎಂಬುದು ಜನರ ದೂರು.

ಇಸ್ರೇಲ್‌ನಲ್ಲಿ ‘ಇಸ್ರೇಲ್ ಡೆಮಾಕ್ರಸಿ ಇನ್‌ಸ್ಟಿಟ್ಯೂಟ್’ ಇತ್ತೀಚೆಗೆ ಸಮೀಕ್ಷೆ ನಡೆಸಿದ್ದು, ಯಹೂದಿ ಇಸ್ರೇಲಿಗಳಲ್ಲಿ 78% ರಷ್ಟು ಜನರು ಯುದ್ಧವನ್ನು ಬೆಂಬಲಿಸುತ್ತಿದ್ದಾರೆ. ಆದರೆ, ಉಳಿದ ಸಮುದಾಯಗಳ 80%ಗೂ ಹೆಚ್ಚಿನವರು ಯುದ್ಧದ ವಿರುದ್ಧ ಆಕ್ರೋಶಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್; ಭೇಟಿಯ ನಿರೀಕ್ಷೆ ಏನು?

ಚೀನಾದ ಅಧ್ಯಕ್ಷ ಕ್ಷಿ ಜಿನ್‌ಪಿಂಗ್ 11 ವರ್ಷಗಳ ಬಳಿಕ ಅಮೆರಿಕಕ್ಕೆ ಅಧಿಕೃತ...

ಶರಣಾಗುವ ಪ್ರಶ್ನೆಯೇ ಇಲ್ಲ; ಟ್ರಂಪ್‌ನ ‘ಸರ್ವನಾಶ’ದ ಬೆದರಿಕೆಗೆ ಜಗ್ಗದೆ ಎದೆ ಸೆಟೆಸಿದ ಇರಾನ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ "ಇರಾನ್ ಅನ್ನು ಸಂಪೂರ್ಣವಾಗಿ ಸರ್ವನಾಶ ಮಾಡುತ್ತೇವೆ"...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಭಾತರ ಮತ್ತು ನೇಪಾಳದಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತವು ಇಂದು ಸಂಜೆ ತಡವಾಗಿ ಉತ್ತರ...