ಅಮೆರಿಕ ಮ್ಯಾಡಿಸನ್‌ನಲ್ಲಿ ಜೂನ್ 4ಕ್ಕೆ ರಾಹುಲ್ ಗಾಂಧಿ ಸಮಾವೇಶ

Date:

  • ಅಮೆರಿಕ ನ್ಯೂಯಾರ್ಕ್‌ನಲ್ಲಿ ರಾಹುಲ್ ಗಾಂಧಿ ಸಮಾವೇಶ
  • ಜೂನ್ 22ಕ್ಕೆ ಅಮೆರಿಕಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಮಾವೇಶ ಮತ್ತು ಚರ್ಚೆಗಳಲ್ಲಿ ಭಾಗವಹಿಸಲು ಇದೇ ತಿಂಗಳ 31ರಂದು 10 ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ.

- Advertisement -

ಜೂನ್ 4ರಂದು ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಹುಲ್‌ ಅವರು ಸಮಾವೇಶ ನಡೆಸಲಿದ್ದಾರೆ ಎಂದು ಮಾಧ್ಯಮಗಳು ಮಂಗಳವಾರ (ಮೇ 16) ವರದಿ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ರಾಹುಲ್ ಗಾಂಧಿ ಸಮಾವೇಶ ಮತ್ತು ಚರ್ಚೆಯಲ್ಲಿ ಸುಮಾರು ಐದು ಸಾವಿರ ಅನಿವಾಸಿ ಭಾರತೀಯರು ಭಾಗವಹಿಸಲಿದ್ದಾರೆ. ರಾಹುಲ್‌ ಅವರು ಚರ್ಚಾಕೂಟಗಳಲ್ಲಿ ಭಾಗವಹಿಸಲು ವಾಷಿಂಗ್ಟನ್‌ ಮತ್ತು ಕ್ಯಾಲಿಫೋರ್ನಿಯಾಗೆ ಭೇಟಿ ನೀಡಲಿದ್ದಾರೆ. ಸ್ಯಾನ್‌ಫೋರ್ಡ್‌ನಲ್ಲೂ ಭಾಷಣ ಮಾಡಲಿದ್ದಾರೆ. ಈ ವೇಳೆ ಅವರು ರಾಜಕಾರಣಿಗಳು ಹಾಗೂ ಉದ್ಯಮಿಗಳನ್ನು ಭೇಟಿಯಾಗಲಿದ್ದಾರೆ.

ಜೂನ್ 22ರಂದು ಪ್ರಧಾನಿ ಮೋದಿ ಅವರೂ ಅಮೆರಿಕಗೆ ಅಧಿಕೃತ ಪ್ರವಾಸ ಕೈಗೊಳ್ಳಲಿದ್ದಾರೆ. ಅದಕ್ಕೆ ಮೊದಲು, ರಾಹುಲ್‌ ಗಾಂಧಿ ಅವರ ಅಮೆರಿಕ ಪ್ರವಾಸ ನಿರ್ಧಾರವಾಗಿದೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಗ್ಯಾರಂಟಿ | ‘ಉಚಿತ ಕೊಡುಗೆ’ ನೀಡಿದರೆ ಬೊಕ್ಕಸಕ್ಕೆ ಹೊರೆ ಆಗುತ್ತಾ? ವಾಸ್ತವ ಏನು?

ಪ್ರಧಾನಿ ಮೋದಿ ಭೇಟಿ ವೇಳೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಪತ್ನಿ ಹಾಗೂ ದೇಶದ ಪ್ರಥಮ ಮಹಿಳೆ ಜಿಲ್ ಬೈಡನ್ ಅವರು ಶ್ವೇತಭವನದಲ್ಲಿ ಆತಿಥ್ಯ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕಳೆದ ವಾರ ತಿಳಿಸಿತ್ತು.

“ಪ್ರಧಾನಿ ಮೋದಿ ಅವರ ಭೇಟಿಯು ಎರಡು ದೇಶಗಳ ನಡುವಿನ ಮುಕ್ತ, ಸಮೃದ್ಧ ಮತ್ತು ಸುರಕ್ಷಿತ ಇಂಡೋ-ಪೆಸಿಫಿಕ್‌ಗೆ ಹಂಚಿಕೆ ಬಲಪಡಿಸುತ್ತದೆ. ಭಾರತ ಹಾಗೂ ಅಮೆರಿಕ ನಡುವಿನ ಆಳವಾದ ಮತ್ತು ನಿಕಟ ಬಾಂಧವ್ಯವನ್ನು ದೃಢಪಡಿಸುತ್ತದೆ. ಅಮೆರಿಕನ್ನರು ಮತ್ತು ಭಾರತೀಯರ ಮೈತ್ರಿಯನ್ನು ವೃದ್ಧಿಸುತ್ತದೆ” ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್ ಅವರು ಪ್ರಕಟಣೆಯೊಂದರಲ್ಲಿ ತಿಳಿಸಿದ್ದರು.

ಈ ವೇಳೆ ಉಭಯ ದೇಶಗಳ ಎಲ್ಲ ರಂಗಗಳಲ್ಲಿಯ ಬಾಂಧವ್ಯ ವೃದ್ಧಿ ಕುರಿತು ಚರ್ಚಿಸಲಾಗುವುದು ಎಂದು ಕರೀನ್‌ ಜೀನ್‌ ಅವರು ಹೇಳಿದರು.

2021ರ ಸೆಪ್ಟೆಂಬರ್‌ 23ರಂದು ಪ್ರಧಾನಿ ಮೋದಿ ಅವರು ಅಮೆರಿಕ ದೇಶಕ್ಕೆ ಕೊನೆಯ ಭೇಟಿ ನೀಡಿದ್ದರು. ಬಳಿಕ ಕ್ವಾಡ್‌ ಶೃಂಗಸಭೆಯಲ್ಲಿಯೂ ಅಮೆರಿಕದ ಜೊತೆ ಮಾತುಕತೆ ನಡೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

AAP ದೇಣಿಗೆಯಲ್ಲಿ ಶೇ.68 ಕುಸಿತ; ಇತರೆ ಪ್ರಾದೇಶಿಕ ಪಕ್ಷಗಳ ದೇಣಿಗೆಯಲ್ಲೂ ಭಾರೀ ಇಳಿಕೆ

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ...

‘ಇವು ಕೇವಲ ಉಪಚುನಾವಣೆಗಳು’: ನಂದಿಗ್ರಾಮ, ರೆಜಿನಗರ ‘ಎಸ್‌ಐಆರ್’ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಉಪಚುನಾವಣೆಗೂ ಮುನ್ನ ‘ವಿಶೇಷ...

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...