ಚಿಕಿತ್ಸೆಗಾಗಿ ಕೇರಳಕ್ಕೆ ಬಂದಿದ್ದ ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ ಹೃದಯಾಘಾತದಿಂದ ನಿಧನ

Date:

ಕೀನ್ಯಾದ ಮಾಜಿ ಪ್ರಧಾನಮಂತ್ರಿ ರೈಲಾ ಒಡಿಂಗಾ (80) ಅವರು ಕೇರಳದ ಎರ್ನಾಕುಲಂ ಜಿಲ್ಲೆಯ ಕೊಚ್ಚಿತುಕುಲಂನ ಖಾಸಗಿ ಆಸ್ಪತ್ರೆಯೊಂದರಲ್ಲಿ ಬುಧವಾರ ನಿಧನರಾದರು.

- Advertisement -

ಶ್ರೀಧರೀಯಂ ಆಯುರ್ವೇದ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಮುಂಜಾನೆ 8 ಗಂಟೆ ಸುಮಾರಿಗೆ ತಮ್ಮ ಬೆಳಗಿನ ವಾಯುವಿಹಾರದ ಸಮಯದಲ್ಲಿ ಹೃದಯಾಘಾತಕ್ಕೊಳಗಾದರು. ತಕ್ಷಣವೇ ಅವರನ್ನು ಕೊಚ್ಚಿತುಕುಲಂನ ದೇವಮಾತ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಬೆಳಿಗ್ಗೆ 9.52ಕ್ಕೆ ಅವರ ಮೃತಪಟ್ಟಿದ್ದಾರೆಂದು ದೃಢೀಕರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ ಅದು ಬಹುಪಾಲು ಯಶಸ್ಸನ್ನೂ ಸಾಧಿಸಿದೆ. ಬೃಹತ್ ನೀರಾವರಿ ಯೋಜನೆಗಳಿಗೆ ಕೊಡುವ ಆದ್ಯತೆ ಮತ್ತು ಮಹತ್ವವನ್ನು ಸಣ್ಣ ನೀರಾವರಿ ಯೋಜನೆಗಳಿಗೂ ನೀಡಬೇಕೆನ್ನುವುದೇ...

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

ಶ್ರೀಧರೀಯಂ ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ರೈಲಾ ಒಡಿಂಗಾ ಅವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಕಾರಣ ಮೊದಲಿಗೆ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಅವರು ತಮ್ಮ ಕಿರಿಯ ಮಗಳು ಮತ್ತು ವೈಯಕ್ತಿಕ ವೈದ್ಯರೊಂದಿಗೆ ಕೊಚ್ಚಿತುಕುಲಂಗೆ ಆಗಮಿಸಿದ್ದರು. ಆಯುರ್ವೇದ ಚಿಕಿತ್ಸೆಯಿಂದ ಚೇತರಿಕೆಯ ಲಕ್ಷಣಗಳನ್ನು ತೋರಿಸಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪಟೇಲರನ್ನು ಹೈಜಾಕ್ ಮಾಡುವುದು ಆರ್‌ಎಸ್‌ಎಸ್‌ಗೆ ಸುಲಭವಲ್ಲ!

ಅವರ ಮೃತದೇಹವನ್ನು ಅಂತಿಮಸಂಸ್ಕಾರಕ್ಕೆ ಸಿದ್ಧಪಡಿಸಲಾಗುವುದು. ಕೇಂದ್ರ ವಿದೇಶಾಂಗ ಸಚಿವಾಲಯ ಹಾಗೂ ನವದೆಹಲಿಯ ಕೀನ್ಯಾ ರಾಯಭಾರ ಕಚೇರಿಯ ಸೂಚನೆಗಳ ಪ್ರಕಾರ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

ರೈಲಾ ಒಡಿಂಗಾ ಅವರಿಗೆ ಶ್ರೀಧರೀಯಂ ಆಸ್ಪತ್ರೆಯೊಂದಿಗೆ ವಿಶೇಷ ಸಂಬಂಧವಿತ್ತು. ಅವರ ಹಿರಿಯ ಮಗಳು ರೋಸ್‌ಮೇರಿ ಒಡಿಂಗಾ 2017ರಲ್ಲಿ ಆಪ್ಟಿಕ್ ನರದ ಹಾನಿಯಿಂದ ತಮ್ಮ ದೃಷ್ಟಿಯನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದರು. 2019ರಲ್ಲಿ ಶ್ರೀಧರೀಯಂನಲ್ಲಿ ಚಿಕಿತ್ಸೆ ಆರಂಭವಾದ ಬಳಿಕ ಅವರ ದೃಷ್ಟಿ ಪುನಃ ಬಂದಿತ್ತು. ಈ ಕಾರಣಕ್ಕಾಗಿ ರೈಲಾ ಒಡಿಂಗಾ ಅವರು ಆಸ್ಪತ್ರೆಯ ವೈದ್ಯರಿಗೆ ಕೃತಜ್ಞತೆ ವ್ಯಕ್ತಪಡಿಸಿದ್ದರು.

ರೈಲಾ ಒಡಿಂಗಾ ಅವರು 2008 ರಿಂದ 2013ರವರೆಗೆ ಕೀನ್ಯಾದ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. 1992 ರಿಂದ 2013ರವರೆಗೆ ಲಂಗಾಟಾ ಕ್ಷೇತ್ರದ ಸಂಸದರಾಗಿದ್ದ ಅವರು, ಕೀನ್ಯಾದಲ್ಲಿ ವಿರೋಧ ಪಕ್ಷದ ನಾಯಕರಾಗಿಯೂ ದೀರ್ಘಕಾಲ ಸೇವೆ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದ ಮತದಾರರಿಗೆ ‘ಎಚ್ಚೆತ್ತುಕೊಳ್ಳಿ’ ಎಂದ ಇರಾನ್: ಟ್ರಂಪ್‌ರನ್ನು ತಿರಸ್ಕರಿಸುವಂತೆ 25 ಪುಟಗಳ ಪತ್ರ ಬಿಡುಗಡೆ

ಅಮೆರಿಕದ ಮಧ್ಯಂತರ ಚುನಾವಣೆಗಳು (Midterm Elections) ಸಮೀಪಿಸುತ್ತಿರುವಂತೆಯೇ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ...

ಜೀವ ಉಳಿಸುವ ಔಷಧಿಗಳ ಹೆಸರಿನಲ್ಲಿ ‘ಹಗಲು ದರೋಡೆ’: ಕೇಂದ್ರಕ್ಕೆ ಸುಪ್ರೀಂ ಚಾಟಿ

ಕ್ಯಾನ್ಸರ್ ಸೇರಿದಂತೆ ಅತ್ಯಗತ್ಯ ಔಷಧಿಗಳ ಸಗಟು ದರ (ಚಿಲ್ಲರೆ ವ್ಯಾಪಾರಿಗಳಿಗೆ ನೀಡುವ...

Instagram ʼರೀಮಿಕ್ಸ್ʼ ಫೀಚರ್‌ಗೆ ತಕರಾರು; ಕಾಪಿರೈಟ್‌ ದುರ್ಬಳಕೆ ಸಾಧ್ಯತೆ ಎಂದ ದೆಹಲಿ ಹೈಕೋರ್ಟ್‌

Instagram ನಲ್ಲಿರುವ ಕೆಲವು ಫೀಚರ್‌ಗಳನ್ನು ಬಳಸಿಕೊಂಡು ಮೂಲ ಕಂಟೆಂಟ್‌ಗಳ ಕಾಪಿರೈಟ್ ಉಲ್ಲಂಘನೆ...