ಕೆಂಪು ಸಮುದ್ರದಲ್ಲಿ ಭಾರತೀಯ ನೌಕೆ ಮೇಲೆ ಕ್ಷಿಪಣಿ ದಾಳಿ: ಹಡಗು ಮುಳುಗಡೆ

Date:

ಯೆಮೆನ್ ಕರಾವಳಿಯ ಕೆಂಪು ಸಮುದ್ರದಲ್ಲಿ ಭಾರತದ ಧ್ವಜ ಹೊಂದಿದ್ದ ಸರಕು ನೌಕೆಯ ಮೇಲೆ ಕ್ಷಿಪಣಿ ದಾಳಿ ನಡೆದಿದೆ. ಹಡಗು ಮುಳುಗಡೆಯಾಗಿದೆ. ಆದಾಗ್ಯೂ, ನೌಕೆಯಲ್ಲಿದ್ದ 13 ಭಾರತೀಯ ಸಿಬ್ಬಂದಿ ಹಾಗೂ ಒಬ್ಬ ವಿದೇಶಿ ಪ್ರಜೆ ಸೇರಿದಂತೆ ಒಟ್ಟು 14 ಮಂದಿಯನ್ನು ಯೆಮೆನ್ ಕೋಸ್ಟ್ ಗಾರ್ಡ್ ಸುರಕ್ಷಿತವಾಗಿ ರಕ್ಷಿಸಿದೆ.

- Advertisement -

ದಾಳಿಗೊಳಗಾದ ಹಡಗನ್ನು ‘ಎಂಎಸ್‌ವಿ ಫೈಜ್ ನೂರ್ ಒಲಿಯಾ’ (MSV Faize Noore Oliya) ಎಂದು ಗುರುತಿಸಲಾಗಿದೆ. ಕೆಂಪು ಸಮುದ್ರದಲ್ಲಿ ಯೆಮೆನ್ ಜಲ ಗಡಿಯ ಬಳಿ ಸಾಗುತ್ತಿದ್ದಾಗ ಹಡಗಿನ ಮೇಲೆ ಪ್ರಕ್ಷೇಪಕ ವಸ್ತುವಿನಿಂದ ದಾಳಿ ನಡೆಸಲಾಗಿದ್ದು, ಪರಿಣಾಮವಾಗಿ ಹಡಗು ನಿಯಂತ್ರಣ ತಪ್ಪಿ ಸಮುದ್ರದಲ್ಲಿ ಮುಳುಗಿದೆ. ಸಕಾಲದಲ್ಲಿ ಸ್ಪಂದಿಸಿದ ಯೆಮೆನ್ ಕೋಸ್ಟ್ ಗಾರ್ಡ್ ಸಿಬ್ಬಂದಿ, ನೌಕೆಯಲ್ಲಿದ್ದ ಎಲ್ಲ 14 ನಾವಿಕರನ್ನು ರಕ್ಷಿಸಿ ಯೆಮೆನ್‌ನ ಮೋಖಾ ಬಂದರಿಗೆ (Port of Mokha) ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಘಟನೆ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವ ಸರ್ಬಾನಂದ ಸೋನೊವಾಲ್, “ನಿರಾಯುಧ ವಾಣಿಜ್ಯ ನೌಕೆಯ ಮೇಲೆ ನಡೆದಿರುವ ಈ ಪ್ರಚೋದನಾರಹಿತ ದಾಳಿಯನ್ನು ಭಾರತ ಬಲವಾಗಿ ಖಂಡಿಸುತ್ತದೆ. ನಮ್ಮ ನಾಗರಿಕರ ಸುರಕ್ಷತೆಯೇ ನಮಗೆ ಮೊದಲ ಆದ್ಯತೆ. ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಿದ ಯೆಮೆನ್ ಕೋಸ್ಟ್ ಗಾರ್ಡ್‌ಗೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರಕಟಣೆ ಹೊರಡಿಸಿದ್ದು, ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಯೆಮೆನ್ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದೆ ಎಂದು ತಿಳಿಸಿದೆ. ಅಂತರರಾಷ್ಟ್ರೀಯ ಜಲಮಾರ್ಗಗಳಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳು ಕಳವಳಕಾರಿಯಾಗಿದ್ದು, ಸುರಕ್ಷಿತ ಮತ್ತು ಅಡೆತಡೆಗಳಿಲ್ಲದ ನೌಕಾಯಾನಕ್ಕೆ ತಕ್ಷಣವೇ ವಾತಾವರಣ ನಿರ್ಮಿಸಬೇಕೆಂದು ಭಾರತ ಒತ್ತಾಯಿಸಿದೆ.

ಏಷ್ಯಾ ಮತ್ತು ಯುರೋಪ್ ನಡುವಿನ ಪ್ರಮುಖ ವ್ಯಾಪಾರ ಮಾರ್ಗವಾಗಿರುವ ಕೆಂಪು ಸಮುದ್ರ ಮತ್ತು ಬಾಬ್ ಎಲ್-ಮಂಡೆಬ್ ಜಲಸಂಧಿ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಮಧ್ಯಪ್ರಾಚ್ಯದಲ್ಲಿ ಇಸ್ರೇಲ್-ಅಮೆರಿಕ ನಡೆಸುತ್ತಿರುವ ದಾಳಿಗಳ ವಿರುದ್ಧ ಇರಾನ್ ಬೆಂಬಲಿತ ಹೌತಿ ಬಂಡುಕೋರರು ಬಾಬ್ ಎಲ್ ಮಂಡೆಲ್ ಜಲಸಂಧಿಯನ್ನು ನಿರ್ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

85ರ ಗ್ರಾನೈಟ್ ಉದ್ಯಮಿಯ ಕಾಮಕೃತ್ಯ; 20 ವರ್ಷಗಳಿಂದ ಅಪ್ರಾಪ್ತೆಯರ ಮೇಲೆ ಅತ್ಯಾಚಾರ

ತಮಿಳುನಾಡಿನ ಪ್ರಭಾವಿ, ಗ್ರಾನೈಟ್ ಉದ್ಯಮಿ 85 ವರ್ಷದ ಆರ್‌. ವೀರಮಣಿ ವಿರುದ್ಧದ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...

ವಸ್ತುವನ್ನು ಸುಡುವುದರಿಂದಷ್ಟೇ ‘ಚರಸ್’ ಎಂದು ಸಾಬೀತುಪಡಿಸಲಾಗದು: 22 ವರ್ಷಗಳ ಬಳಿಕ ಇಬ್ಬರು ಖುಲಾಸೆ

ವಶಪಡಿಸಿಕೊಂಡ ವಸ್ತುವಿನ ಒಂದು ಸಣ್ಣ ಭಾಗವನ್ನು ಸುಟ್ಟು ನೋಡುವುದರಿಂದ ಮಾತ್ರವೇ ಅದು...