ಪಶ್ಚಿಮ ಸೌದಿ ಅರೇಬಿಯಾದ ಜಿಜಾನ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂಬತ್ತು ಮಂದಿ ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ಜಿದ್ದಾದ ಭಾರತೀಯ ಮಿಷನ್ ಬುಧವಾರ ತಿಳಿಸಿದೆ.
ಮೃತರ ಕುಟುಂಬಕ್ಕೆ ಬೇಕಾದ ಅಗತ್ಯ ಸಹಾಯವನ್ನು ನೀಡಲಾಗುತ್ತಿದೆ ಮತ್ತು ಅಧಿಕಾರಿಗಳು ಮೃತರ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದೆ ಎಂದು ಭಾರತೀಯ ಮಿಷನ್ ಹೇಳಿದೆ.
ಇದನ್ನು ಓದಿದ್ದೀರಾ? ಸೌದಿ ಅರೇಬಿಯಾ | ರಿಯಾದ್ ಮೆಟ್ರೋದ ಮೊದಲ ಹಂತ ಉದ್ಘಾಟನೆ
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಭಾರತೀಯ ರಾಯಭಾರಿ ಕಚೇರಿ, “ಸೌದಿ ಅರೇಬಿಯಾದ ಪಶ್ಚಿಮ ಪ್ರದೇಶದ ಜಿಜಾನ್ ಬಳಿ ನಡೆದ ರಸ್ತೆ ಅಪಘಾತದಲ್ಲಿ 9 ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದು, ನಾವು ತೀವ್ರ ಸಂತಾಪ ಸೂಚಿಸುತ್ತೇವೆ” ಎಂದಿದೆ.
“ಸಂತ್ರಸ್ತ ಕುಟುಂಬಗಳಿಗೆ ನಾವು ಸಂತಾಪಗಳನ್ನು ಸೂಚಿಸುತ್ತೇವೆ. ಜಿದ್ದಾದ ಭಾರತೀಯ ಕಾನ್ಸುಲೇಟ್ ಜನರಲ್ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತಿದೆ. ಅಧಿಕಾರಿಗಳು ಮತ್ತು ಮೃತರ ಕುಟುಂಬಸ್ಥರು ಸಂಪರ್ಕದಲ್ಲಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂಬುದು ನಮ್ಮ ಪ್ರಾರ್ಥಿಸುತ್ತೇವೆ. ಏನೇ ಪ್ರಶ್ನೆಗಳಿದ್ದರೂ ಸಹಾಯವಾಣಿಯನ್ನು ಸಂಪರ್ಕಿಸಬಹುದು” ಎಂದು ತಿಳಿಸಿದೆ.
Grieved to learn of this accident and the loss of lives. Spoke with our Consul General in Jeddah, who is in touch with the concerned families. He is extending fullest support in this tragic situation. https://t.co/MHmntScjOT
— Dr. S. Jaishankar (@DrSJaishankar) January 29, 2025
ಇನ್ನು ಈ ಭೀಕರ ಅಪಘಾತ ಮತ್ತು ಭಾರತೀಯರ ಸಾವಿನ ಬಗ್ಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಕೂಡಾ ಸಂತಾಪ ವ್ಯಕ್ತಪಡಿಸಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
“ಜಿದ್ದಾದ ನಮ್ಮ ಕಾನ್ಸುಲ್ ಜನರಲ್ ಅವರೊಂದಿಗೆ ಮಾತನಾಡಿದ್ದೇನೆ. ಅವರು ಸಂಬಂಧಪಟ್ಟ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ಈ ದುರಂತ ಸ್ಥಿತಿಯ ಸಂದರ್ಭದಲ್ಲಿ ಸಂಪೂರ್ಣ ಬೆಂಬಲ ನೀಡುತ್ತಿದ್ದಾರೆ” ಎಂದು ಜೈಶಂಕರ್ ತಿಳಿಸಿದ್ದಾರೆ.
