ಸೌದಿ ಅರೇಬಿಯಾ | ಭೀಕರ ರಸ್ತೆ ಅಪಘಾತ; ಒಂಬತ್ತು ಮಂದಿ ಭಾರತೀಯರ ಸಾವು

Date:

ಪಶ್ಚಿಮ ಸೌದಿ ಅರೇಬಿಯಾದ ಜಿಜಾನ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂಬತ್ತು ಮಂದಿ ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ಜಿದ್ದಾದ ಭಾರತೀಯ ಮಿಷನ್ ಬುಧವಾರ ತಿಳಿಸಿದೆ.

- Advertisement -

ಮೃತರ ಕುಟುಂಬಕ್ಕೆ ಬೇಕಾದ ಅಗತ್ಯ ಸಹಾಯವನ್ನು ನೀಡಲಾಗುತ್ತಿದೆ ಮತ್ತು ಅಧಿಕಾರಿಗಳು ಮೃತರ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದೆ ಎಂದು ಭಾರತೀಯ ಮಿಷನ್ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಇದನ್ನು ಓದಿದ್ದೀರಾ? ಸೌದಿ ಅರೇಬಿಯಾ | ರಿಯಾದ್ ಮೆಟ್ರೋದ ಮೊದಲ ಹಂತ ಉದ್ಘಾಟನೆ

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಭಾರತೀಯ ರಾಯಭಾರಿ ಕಚೇರಿ, “ಸೌದಿ ಅರೇಬಿಯಾದ ಪಶ್ಚಿಮ ಪ್ರದೇಶದ ಜಿಜಾನ್ ಬಳಿ ನಡೆದ ರಸ್ತೆ ಅಪಘಾತದಲ್ಲಿ 9 ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದು, ನಾವು ತೀವ್ರ ಸಂತಾಪ ಸೂಚಿಸುತ್ತೇವೆ” ಎಂದಿದೆ.

“ಸಂತ್ರಸ್ತ ಕುಟುಂಬಗಳಿಗೆ ನಾವು ಸಂತಾಪಗಳನ್ನು ಸೂಚಿಸುತ್ತೇವೆ. ಜಿದ್ದಾದ ಭಾರತೀಯ ಕಾನ್ಸುಲೇಟ್ ಜನರಲ್ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತಿದೆ. ಅಧಿಕಾರಿಗಳು ಮತ್ತು ಮೃತರ ಕುಟುಂಬಸ್ಥರು ಸಂಪರ್ಕದಲ್ಲಿದ್ದಾರೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂಬುದು ನಮ್ಮ ಪ್ರಾರ್ಥಿಸುತ್ತೇವೆ. ಏನೇ ಪ್ರಶ್ನೆಗಳಿದ್ದರೂ ಸಹಾಯವಾಣಿಯನ್ನು ಸಂಪರ್ಕಿಸಬಹುದು” ಎಂದು ತಿಳಿಸಿದೆ.

ಇನ್ನು ಈ ಭೀಕರ ಅಪಘಾತ ಮತ್ತು ಭಾರತೀಯರ ಸಾವಿನ ಬಗ್ಗೆ ವಿದೇಶಾಂಗ ಸಚಿವ ಎಸ್‌ ಜೈಶಂಕರ್ ಕೂಡಾ ಸಂತಾಪ ವ್ಯಕ್ತಪಡಿಸಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಜಿದ್ದಾದ ನಮ್ಮ ಕಾನ್ಸುಲ್ ಜನರಲ್ ಅವರೊಂದಿಗೆ ಮಾತನಾಡಿದ್ದೇನೆ. ಅವರು ಸಂಬಂಧಪಟ್ಟ ಕುಟುಂಬಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ಈ ದುರಂತ ಸ್ಥಿತಿಯ ಸಂದರ್ಭದಲ್ಲಿ ಸಂಪೂರ್ಣ ಬೆಂಬಲ ನೀಡುತ್ತಿದ್ದಾರೆ” ಎಂದು ಜೈಶಂಕರ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತನ್ನ ಕಾದಂಬರಿಗಳ ಪಾತ್ರಗಳಂತೆಯೇ ಜೀವಿಸಿದ್ದ ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್!

ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ,...

‘ಡಾವ್ನ್‌ ಆಫ್ ಯೆಮನ್’ ಕಾರ್ಯಾಚರಣೆ: ಅಲ್-ವಝೀಯಾ ಮರಳಿ ಪಡೆಯಲು ಯೆಮನ್ ಪಡೆಗಳ ದಾಳಿ

ಸನಾ: ಯೆಮನ್‌ನ ಅಂತಾರಾಷ್ಟ್ರೀಯವಾಗಿ ಮಾನ್ಯತೆ ಪಡೆದ ಸರ್ಕಾರದ ಪಡೆಗಳು, ಹೂತಿಗಳ ವಶದಲ್ಲಿರುವ ಪರ್ವತ...

ಈಜಿಪ್ಟ್‌ನ ಪುರಾತನ ಸೇನಾ ಕೋಟೆಯಲ್ಲಿ 3 ಸಾವಿರ ವರ್ಷಗಳ ಹಳೆಯ ಕುದುರೆಯ ಅಸ್ಥಿಪಂಜರ ಪತ್ತೆ

ಈಜಿಪ್ಟ್‌ನ ಪಶ್ಚಿಮ ನೈಲ್ ಡೆಲ್ಟಾ ಭಾಗದಲ್ಲಿರುವ ಪುರಾತನ ಸೇನಾ ಕೋಟೆಯೊಂದರಲ್ಲಿ ಸುಮಾರು...