ಆರ್‌ಎಸ್‌ಎಸ್ ಮುಖ್ಯಸ್ಥರ ಅಮೆರಿಕದ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ಜೊಹ್ರಾನ್ ಮಮ್ದಾನಿ ವಿರೋಧ

Date:

ಆರ್‌ಎಸ್‌ಎಸ್ (ರಾಷ್ಟ್ರೀಯ ಸ್ವಯಂಸೇವಕ ಸಂಘ) ಮುಖ್ಯಸ್ಥ ಮೋಹನ್ ಭಾಗವತ್ ಅವರು ಅಮೆರಿಕದ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಉದ್ದೇಶಿಸಿ ಮಾತನಾಡಲಿರುವ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ನಗರದ ಮೇಯರ್ ಜೊಹ್ರಾನ್ ಮಮ್ದಾನಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ, ಆಗಸ್ಟ್ 29ರಂದು ನಡೆಯಲಿರುವ ಈ ‘ಖಾಸಗಿ’ ಕಾರ್ಯಕ್ರಮವನ್ನು ರದ್ದುಗೊಳಿಸುವ ಅಧಿಕಾರ ನಗರದ ಆಡಳಿತಕ್ಕೆ ಇಲ್ಲದಿರಬಹುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

- Advertisement -

​ಆರ್‌ಎಸ್‌ಎಸ್‌ನ ಶತಮಾನೋತ್ಸವದ ಜಾಗತಿಕ ಸಂಪರ್ಕ ಕಾರ್ಯಕ್ರಮದ ಭಾಗವಾಗಿ ಮೋಹನ್ ಭಾಗವತ್ ಅವರು ಮಂಗಳವಾರ ಅಮೆರಿಕಕ್ಕೆ ಆಗಮಿಸಿದ್ದಾರೆ. ತಮ್ಮ ನ್ಯೂಯಾರ್ಕ್ ಭೇಟಿಯ ವೇಳೆ ಅವರು ‘ಯೂನಿವರ್ಸಲ್ ಒನ್‌ನೆಸ್’ (ವಿಶ್ವ ಏಕತೆ) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಶನಿವಾರ ಪ್ರಖ್ಯಾತ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಸುಮಾರು 5,000 ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

​ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತೀಯ ಮೂಲದ ಮೊದಲ ನ್ಯೂಯಾರ್ಕ್ ಮೇಯರ್ ಜೊಹ್ರಾನ್ ಮಮ್ದಾನಿ, “ನಾನು ಈ ಕಾರ್ಯಕ್ರಮವನ್ನು ಬೆಂಬಲಿಸುವುದಿಲ್ಲ. ಆದರೆ, ಖಾಸಗಿ ಕಾರ್ಯಕ್ರಮವೊಂದನ್ನು ರದ್ದುಗೊಳಿಸುವ ಅಧಿಕಾರ ನಗರದ ಆಡಳಿತಕ್ಕೆ ಇದೆಯೇ ಎಂಬುದು ನನಗೆ ತಿಳಿದಿಲ್ಲ,” ಎಂದರು. “ನನ್ನ ತಾಯಿಯ ಕುಟುಂಬದವರೆಲ್ಲರೂ ಇನ್ನೂ ಭಾರತದಲ್ಲೇ ಇದ್ದಾರೆ. ಪ್ರತಿಯೊಬ್ಬರಿಗೂ ಸೇರಿದ ಬಹುತ್ವದ, ಜಾತ್ಯತೀತ ಗಣರಾಜ್ಯದ ಭಾರತವನ್ನು ನಾನು ನೋಡಿಕೊಂಡು ಬೆಳೆದಿದ್ದೇನೆ. ಆದರೆ, ದೇಶವೊಂದರ ಪ್ರತ್ಯೇಕತಾವಾದಿ ಸಿದ್ಧಾಂತಗಳ ಬೆಳವಣಿಗೆ ಆತಂಕಕಾರಿಯಾಗಿದೆ. ಧರ್ಮ, ಬಣ್ಣ, ನಂಬಿಕೆಗಳನ್ನು ಮೀರಿ ಎಲ್ಲರನ್ನೂ ಒಳಗೊಳ್ಳುವ ವ್ಯವಸ್ಥೆಯನ್ನು ನಂಬುವ ಮೇಯರ್ ಆಗಿ ನಾನು ಈ ಕಾರ್ಯಕ್ರಮವನ್ನು ತೀವ್ರವಾಗಿ ವಿರೋಧಿಸುತ್ತೇನೆ,” ಎಂದು ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು.

​ಭಾಗವತ್ ಅವರ ಈ ಕಾರ್ಯಕ್ರಮವನ್ನು ವಿರೋಧಿಸಿ ‘ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್’, ‘ಇಂಡಿಯನ್ ಅಮೆರಿಕನ್ ಮುಸ್ಲಿಂ ಕೌನ್ಸಿಲ್’ ಹಾಗೂ ‘ಇಂಟರ್‌ಫೇಯ್ತ್ ಸೆಂಟರ್ ಆಫ್ ನ್ಯೂಯಾರ್ಕ್’ ಸೇರಿದಂತೆ ಹಲವು ಅಂತರ್‌ಧರ್ಮೀಯ ಮತ್ತು ನಾಗರಿಕ ಹಕ್ಕುಗಳ ಸಂಘಟನೆಗಳು ನ್ಯೂಯಾರ್ಕ್ ಸಿಟಿ ಹಾಲ್ ಎದುರು ಪ್ರತಿಭಟನೆ ನಡೆಸಿವೆ. ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್ ಆಡಳಿತ ಮಂಡಳಿಯು ಭಾಗವತ್ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಬೇಕು ಎಂದು ಈ ಸಂಘಟನೆಗಳು ಒತ್ತಾಯಿಸಿವೆ.

​ಆದರೆ, ಭಾಗವತ್ ಅವರಿಗೆ ಆತಿಥ್ಯ ವಹಿಸಿರುವ ‘ಅಹೆಡ್ ಫೋರಂ’ (AHEAD Forum) ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದೆ. “ಈ ಕಾರ್ಯಕ್ರಮವು ‘ಜಗತ್ತೇ ಒಂದು ಕುಟುಂಬ’ ಎಂಬ ಸಾರ್ವತ್ರಿಕ ಸಂದೇಶವನ್ನು ಸಾರುತ್ತದೆ. ಕೃತಕ ವಿಭಜನೆಗಳನ್ನು ಮೀರಿ, ಮಾನವೀಯತೆಯನ್ನು ಒಗ್ಗೂಡಿಸುವ ಮತ್ತು ಪರಸ್ಪರ ಗೌರವ, ಸೌಹಾರ್ದತೆ ಹಾಗೂ ಏಕತೆಯನ್ನು ಅಳವಡಿಸಿಕೊಳ್ಳುವ ಉದ್ದೇಶವನ್ನು ಇದು ಹೊಂದಿದೆ,” ಎಂದು ಸಂಘಟಕರು ಸಮರ್ಥಿಸಿಕೊಂಡಿದ್ದಾರೆ.

​ಆರ್‌ಎಸ್‌ಎಸ್ ಶತಮಾನೋತ್ಸವದ ಹಿನ್ನೆಲೆಯಲ್ಲಿ ಮೋಹನ್ ಭಾಗವತ್ ಅವರು ಅಮೆರಿಕ, ಕೆನಡಾ ಮತ್ತು ಬ್ರಿಟನ್ ದೇಶಗಳಿಗೆ ಭೇಟಿ ನೀಡುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಎಲ್ ನಿನೋ’ ಎಫೆಕ್ಟ್ | ಹಿಮಾಲಯದಲ್ಲಿ ಭಾರೀ‌ ಹಿಮಪಾತ, ಪ್ರವಾಹ ಸಂಭವ: ವರದಿ

'ಎಲ್ ನಿನೋ' ಪರಿಣಾಮವಾಗಿ ಚಳಿಗಾಲದಲ್ಲಿ ಹಿಮಾಲಯದ ಹಿಂದು ಕುಶ್ ಪರ್ವತ ಶ್ರೇಣಿಯ...

ಅಮೆರಿಕ | AI ಕಂಪನಿಗಳ ಷೇರು ಕುಸಿತ: ಬೆಂಗಳೂರಿನ IT ಉದ್ಯೋಗಿಗಳ ಮೇಲೂ ಪರಿಣಾಮ?

ಅಮೆರಿಕದ ಷೇರು ಮಾರುಕಟ್ಟೆಯಲ್ಲಿ ಈಗ ದೊಡ್ಡದೊಂದು ತಲ್ಲಣ ಶುರುವಾಗಿದೆ. ಕಳೆದ ಎರಡು-ಮೂರು...

ಅರುಣಾಚಲ ಗಡಿ ವಿವಾದ: ಭಾರತ-ಚೀನಾ ಸೇನಾಧಿಕಾರಿಗಳ ಮಹತ್ವದ ಸಭೆ

ಅರುಣಾಚಲ ಪ್ರದೇಶದ ವಾಸ್ತವ ಗಡಿ ರೇಖೆಯ (LAC) ಉದ್ದಕ್ಕೂ ಉಂಟಾಗಿರುವ ಉದ್ವಿಗ್ನತೆಯನ್ನು...

ರೋಹಿಂಗ್ಯಾ ಮುಸ್ಲಿಮರ ನರಮೇಧಕ್ಕೆ ಇಸ್ರೇಲ್ ಶಸ್ತ್ರಾಸ್ತ್ರ ಪೂರೈಕೆ, ತರಬೇತಿ: ಗಂಭೀರ ಆರೋಪ

ರೋಹಿಂಗ್ಯಾ ಮುಸ್ಲಿಮರ ವಿರುದ್ಧ ಮ್ಯಾನ್ಮಾರ್ ಸೇನೆ ನಡೆಸಿದ ನರಮೇಧಕ್ಕೆ ಇಸ್ರೇಲ್ ಶಸ್ತ್ರಾಸ್ತ್ರಗಳನ್ನು...