ರಷ್ಯಾ | ಭಯೋತ್ಪಾದಕರಿಂದ ಭೀಕರ ಗುಂಡಿನ ದಾಳಿ: 40ಕ್ಕೂ ಅಧಿಕ ಮಂದಿ ಮೃತ್ಯು; 100ಕ್ಕೂ ಹೆಚ್ಚು ಜನರಿಗೆ ಗಾಯ

Date:

Advertisements

ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ಕನ್ಸರ್ಟ್ ಹಾಲ್ ಮೇಲೆ ನಾಲ್ಕೈದು ಮಂದಿ ಭಯೋತ್ಪಾದಕರು ನುಗ್ಗಿ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 100ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವುದಾಗಿ ವರದಿಯಾಗಿದೆ.

ರಷ್ಯಾದಲ್ಲಿ ಪುಟಿನ್ ಮರು ಆಯ್ಕೆಯಾದ ಬೆನ್ನಲ್ಲೇ ಈ ದಾಳಿ ನಡೆದಿದೆ. ಈ ದಾಳಿಗೆ ಭಯೋತ್ಪಾದಕ ಸಂಘಟನೆ ಐಸಿಸ್ ಹೊಣೆ ಹೊತ್ತುಕೊಂಡಿರುವುದಾಗಿ ವರದಿಯಾಗಿದೆ.

ರಷ್ಯಾದ ಇತಿಹಾಸದಲ್ಲಿ ಎರಡು ದಶಕಗಳಲ್ಲೇ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ. ಇದೊಂದು ಬೃಹತ್ ಭಯೋತ್ಪಾದಕ ದಾಳಿ ಎಂದು ಮಾಸ್ಕೋ ಮೇಯರ್ ಸೆರ್ಗೆಯ್ ಸೋಬಯಾನಿನ್ ಹೇಳಿಕೆ ನೀಡಿದ್ದಾರೆ.

Advertisements

ರಷ್ಯಾದ ಉನ್ನತ ದೇಶೀಯ ಭದ್ರತಾ ಸಂಸ್ಥೆ ‘ಫೆಡರಲ್ ಸೆಕ್ಯುರಿಟಿ ಸರ್ವಿಸ್’, “ಪ್ರಾಣಹಾನಿಯಾಗಿದೆ. ಹಲವರು ಗಾಯಗೊಂಡಿದ್ದಾರೆ” ಎಂದಷ್ಟೇ ಹೇಳಿಕೆ ನೀಡಿದೆ. ಆದರೆ ಮೃತಪಟ್ಟವರ ಅಧಿಕೃತ ಸಂಖ್ಯೆಯನ್ನು ಪ್ರಕಟಿಸಿಲ್ಲ..

ದಾಳಿಕೋರರು ದಾಳಿಯ ವೇಳೆ ಸ್ಫೋಟಕಗಳನ್ನು ಎಸೆದಿದ್ದು, ಇದರಿಂದಾಗಿ ಸಭಾಂಗಣದಲ್ಲಿ ಬೆಂಕಿ ಹೊತ್ತುಕೊಂಡಿರುವುದಾಗಿ ವರದಿಗಳು ತಿಳಿಸಿವೆ.

ಸುಮಾರು 6,000ಕ್ಕೂ ಹೆಚ್ಚು ಜನರಿಗೆ ಅವಕಾಶ ಕಲ್ಪಿಸಬಹುದಾದ ಸಭಾಂಗಣದಲ್ಲಿ ರಷ್ಯಾದ ಪ್ರಸಿದ್ಧ ರಾಕ್ ಬ್ಯಾಂಡ್ ಪಿಕ್ನಿಕ್ ಸಂಗೀತ ಕಾರ್ಯಕ್ರಮಕ್ಕಾಗಿ ಜನರು ಜಮಾಯಿಸುತ್ತಿದ್ದಾಗಲೇ ಈ ದಾಳಿ ನಡೆದಿದೆ.

images 1 5

ಸೈನಿಕರ ರೀತಿಯ ಬಟ್ಟೆ ಧರಿಸಿದ್ದ ನಾಲ್ಕೈದು ಮಂದಿ ಪುರುಷರು ಕನ್ಸರ್ಟ್ ಹಾಲ್‌ಗೆ ಪ್ರವೇಶಿಸಿ, ಎದುರಿಗೆ ಸಿಕ್ಕ ಎಲ್ಲರ ಮೇಲೆ ಮನಬಂದಂತೆ ಗುಂಡು ಹಾರಿಸಿದರು ಎಂದು ಪ್ರಾಸಿಕ್ಯೂಟರ್ ಕಚೇರಿ ಹೇಳಿದೆ.

ರಷ್ಯಾದ ಮಾಧ್ಯಮಗಳು ಮತ್ತು ಟೆಲಿಗ್ರಾಮ್ ಚಾನೆಲ್‌ಗಳು ಪೋಸ್ಟ್ ಮಾಡಿದ ಹಲವು ವೀಡಿಯೋಗಳಲ್ಲಿ ಹಲವು ಸುತ್ತು ಗುಂಡು ಹಾರಿಸಿರುವುದು ಸ್ಪಷ್ಟವಾಗಿದೆ.

ಈ ತಿಂಗಳ ಆರಂಭದಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದ ಯುಎಸ್ ರಾಯಭಾರ ಕಚೇರಿ, ರಷ್ಯಾ ರಾಜಧಾನಿಯಲ್ಲಿ ದಾಳಿ ನಡೆಯುವ ಸಾಧ್ಯತೆ ಇದೆ. ಆದ್ದರಿಂದ ರಾಜಧಾನಿಯಲ್ಲಿ ಜನನಿಬಿಡ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಲು ಅಮೆರಿಕನ್ನರಿಗೆ ಒತ್ತಾಯಿಸಿತ್ತು. ಇದನ್ನು ಹಲವಾರು ಇತರ ಪಾಶ್ಚಿಮಾತ್ಯ ರಾಯಭಾರ ಕಚೇರಿಗಳು ಕೂಡ ತಿಳಿಸಿದ್ದವು. ಈ ಮಾಹಿತಿಯ ಬೆನ್ನಲ್ಲೇ ಈ ಭೀಕರ ದಾಳಿ ನಡೆದಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

Download Eedina App Android / iOS

X