ಸರ್ಬಿಯಾ | ಸಂಸತ್‌ನಲ್ಲಿ ಹೊಗೆ ಬಾಂಬ್ ಸ್ಫೋಟ; ವಿಪಕ್ಷ ನಾಯಕರಿಂದಲೇ ದಾಳಿ

Date:

Advertisements

ಸರ್ಬಿಯಾದಲ್ಲಿ ಭ್ರಷ್ಟಾಚಾರದ ವಿರುದ್ಧ ವಿದ್ಯಾರ್ಥಿಗಳ ನೇತೃತ್ವದಲ್ಲಿ ಆಂದೋಲನ ನಡೆಯುತ್ತಿದೆ. ಆ ಆಂದೋಲನಕ್ಕೆ ಅಲ್ಲಿನ ವಿರೋಧ ಪಕ್ಷಗಳು ಬೆಂಬಲ ಸೂಚಿಸಿವೆ. ವಿದ್ಯಾರ್ಥಿಗಳ ಹೋರಾಟವನ್ನು ಬೆಂಬಲಿಸಿ ಸಂಸತ್ ಕಲಾಪ ನಡೆಯುವ ವೇಳೆ, ವಿಪಕ್ಷಗಳ ನಾಯಕರು ಸಂಸತ್‌ನೊಳಗೆ ಹೊಗೆ ಬಾಂಬ್‌ಗಳನ್ನು ಸ್ಪೋಟಿಸಿದ್ದಾರೆ. ಪರಿಣಾಮ, ಸಂಸತ್‌ನಲ್ಲಿ ಗದ್ದಲ ಉಂಟಾಗಿದ್ದು, ಕೆಲವು ಶಾಸಕರಿಗೆ ಗಾಯಗಳಾಗಿವೆ.

ಸರ್ಬಿಯಾದ ರಾಜಧಾನಿ ಬೆಲ್‌ಗ್ರೇಡ್‌ನಲ್ಲಿರುವ ಸಂಸತ್‌ ಭವನದಲ್ಲಿ ಘಟನೆ ನಡೆದಿದೆ. ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ವಿಡಿಯೋದಲ್ಲಿ, ವಿಪಕ್ಷಗಳ ಶಾಸಕರು ಸಂಸತ್‌ ಒಳಗೆ ಹೊಗೆ ಬಾಂಬ್‌ಗಳನ್ನು ಸ್ಪೋಟಿಸಿದ್ದು, ಬಣ್ಣದ ಹೊಗೆ ಆವರಿಸಿಕೊಂಡಿರುವುದು ಕಂಡುಬಂದಿದೆ.

2024ರಲ್ಲಿ ರೈಲು ನಿಲ್ಧಾಣದ ಮೇಲ್ಚಾವಣಿ ಕುಸಿದು ಬಿದ್ದು, ಸುಮಾರು 15 ಮಂದಿ ಮೃತಪಟ್ಟಿದ್ದರು. ಆ ಘಟನೆಗೆ ಕಳಪೆ ಕಾಮಗಾರಿ ಮತ್ತು ಭ್ರಷ್ಟಾಚಾರವೇ ಕಾರಣವೆಂದು ಆರೋಪಿಸಲಾಗಿತ್ತು. ಸರ್ಬಿಯಾದ ವಿದ್ಯಾರ್ಥಿಗಳು ಭ್ರಷ್ಟಾಚಾರ ವಿರೋಧಿ ಆಂದೋಲನ ಆರಂಭಿಸಿದ್ದರು.

Advertisements

ವಿದ್ಯಾರ್ಥಿಗಳ ಪ್ರತಿಭಟನೆಯಿಂದಾಗಿ 2025ರ ಜನವರಿಯಲ್ಲಿ ಸರ್ಬಿಯಾ ಪ್ರಧಾನಿ ಮಿಲೋಸ್ ವುಸೆವಿಕ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯ ಕುರಿತು ಮಂಗಳವಾರ ಅಧಿವೇಶನದಲ್ಲಿ ಚರ್ಚೆ ನಡೆಯುವುದಿತ್ತು. ಅಧಿವೇಶನ ಆರಂಭವಾಗುತ್ತಿದ್ದಂತೆಯೇ, ವಿಪಕ್ಷಗಳ ಸದಸ್ಯರು ಹೊಗೆ ಬಾಂಬ್‌ ಸ್ಪೋಟಿಸಿದ್ದರಿಂದ ಗದ್ದಲ ಉಂಟಾಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ...

Download Eedina App Android / iOS

X