ಅಮೆರಿಕದಲ್ಲಿ ಭೀಕರ ಘಟನೆ | ವ್ಯಕ್ತಿಯಿಂದ ಸಾಮೂಹಿಕ ಗುಂಡಿನ ದಾಳಿ; 22 ಜನರು ಮೃತ್ಯು

Date:

Advertisements

ಅಮೆರಿಕದಲ್ಲಿ ಮತ್ತೆ ಸಾಮೂಹಿಕ ಗುಂಡಿನ ದಾಳಿಯ ಘಟನೆ ನಡೆದಿದ್ದು, 22 ಜನರು ಸಾವನ್ನಪ್ಪಿ, 60 ಮಂದಿ ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ.

ಮೈನೆನ ಲೆವಿಸ್ಟನ್‌ನಲ್ಲಿ ಈ ಘಟನೆ ನಡೆದಿದೆ. ದಾಳಿಗೆ 22 ಜನರು ಸಾವನ್ನಪ್ಪಿದ್ದು, 60 ಮಂದಿ ಗಾಯಗೊಂಡಿದ್ದು, ಗುಂಡಿನ ದಾಳಿ ನಡೆಸಿದ ವ್ಯಕ್ತಿ ಕೃತ್ಯ ಎಸಗಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿಯನ್ನು ‘ರಾಬರ್ಟ್ ಕಾರ್ಡ್’ ಎಂದು ಗುರುತಿಸಲಾಗಿದೆ ಎಂದು ಮೈನೆ ಸ್ಟೇಟ್ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಘಟನೆ ಬುಧವಾರ ತಡರಾತ್ರಿ (ಅಮೆರಿಕದ ಸ್ಥಳೀಯ ಕಾಲಮಾನ) ನಡೆದಿದ್ದು, ಪರಾರಿಯಾಗಿರುವ ಶಂಕಿತ ರಾಬರ್ಟ್ ಕಾರ್ಡ್‌ನ ಎರಡು ಫೋಟೋಗಳನ್ನು ಹಂಚಿಕೊಂಡಿದ್ದು, ಸ್ಥಳೀಯ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ.

Advertisements

 

ಪೊಲೀಸರು ಬಿಡುಗಡೆಗೊಳಿಸಿರುವ ಚಿತ್ರದಲ್ಲಿ ಈತ ಗುಂಡಿನ ದಾಳಿ ಸ್ಥಳದಲ್ಲಿ ರೈಫಲ್ ಹಿಡಿದಿದ್ದು ಕಂಡು ಬಂದಿದೆ. ಈತ ಸದ್ಯ ತಲೆಮರೆಸಿಕೊಂಡಿದ್ದಾನೆ. ಚಿತ್ರದಲ್ಲಿರುವ ಶಂಕಿತನನ್ನು ಗುರುತಿಸಿದರೆ ಕೂಡಲೇ ಪೊಲೀಸರ ಗಮನಕ್ಕೆ ತನ್ನಿ ಎಂದು ಅಧಿಕಾರಿಗಳು ಸಾರ್ವಜನಿಕರಿಂದ ನೆರವನ್ನು ಕೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಆರೋಪಿ ರಾಬರ್ಟ್ ಕಾರ್ಡ್‌ ಹಿನ್ನೆಲೆಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದ್ದು, ಆತ ಇತ್ತೀಚೆಗೆಷ್ಟೇ ಮಾನಸಿಕ ಆರೋಗ್ಯ ಕೇಂದ್ರವೊಂದರಿಂದ ಇತ್ತೀಚೆಗಷ್ಟೇ ಬಿಡುಗಡೆ ಹೊಂದಿದ್ದ ಎಂದು ತಿಳಿದುಬಂದಿದೆ. ಅಲ್ಲದೇ, ಸಾಕೋದಲ್ಲಿರುವ ಸೇನಾ ಮೀಸಲು ಪ್ರದೇಶದಲ್ಲಿ ಬಂದೂಕು ಬಳಸುವ ಬಗ್ಗೆ ತರಬೇತಿ ಪಡೆದಿದ್ದ ಎಂದು ಮೈನೆಯ ಮಾಹಿತಿ ಮತ್ತು ವಿಶ್ಲೇಷಣಾ ಕೇಂದ್ರ ಪತ್ತೆ ಹಚ್ಚಿದೆ.

ಕೆಲವು ತಿಂಗಳುಗಳ ಹಿಂದೆ ಸ್ಯಾಕೋದಲ್ಲಿರುವ ನ್ಯಾಷನಲ್ ಗಾರ್ಡ್ ಸೇನಾ ನೆಲೆಯ ಮೇಲೆಯೇ ಗುಂಡಿನ ದಾಳಿ ನಡೆಸುವ ಬಗ್ಗೆಯೂ ಆಡಿಯೋ ಬಿಟ್ಟಿರುವುದು ಕೂಡ ಪತ್ತೆ ಹಚ್ಚಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

Download Eedina App Android / iOS

X