ಅಮೆರಿಕದಲ್ಲಿ ಗುಂಡಿನ ದಾಳಿ; ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ

Date:

ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿರುವ ಯಹೂದಿ ವಸ್ತು ಸಂಗ್ರಹಾಲಯದ ಬಳಿ ಗುಂಡಿನ ದಾಳಿ ನಡೆದಿದ್ದು, ಇಸ್ರೇಲಿ ರಾಯಭಾರ ಕಚೇರಿಯ ಓರ್ವ ಸಿಬ್ಬಂದಿಯ ಹತ್ಯೆಯಾಗಿದೆ ಎಂದು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಹೇಳಿದೆ.

- Advertisement -

ಯಹೂದಿ ವಸ್ತುಸಂಗ್ರಹಾಲಯದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ವೇಳೆ, ಸಂಗ್ರಹಾಲಯದ ಹೊರಭಾಗದಲ್ಲಿ ಗುಂಡಿನ ದಾಳಿ ನಡೆದಿದೆ. ದಾಳಿಕೋರನೊಬ್ಬ ‘ಫ್ರೀ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗುತ್ತಲೇ, ಇಸ್ರೇಲಿ ರಾಯಭಾರ ಕಚೇರಿಯ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಅಲ್ಲದೆ, ಕಚೇರಿ ಒಳಗೆ ನುಗ್ಗಿ, ತಮಗೆ ನೀರು ಮತ್ತು ಸುರಕ್ಷಿತ ಸ್ಥಳಬೇಕು ಎಂದು ಕೇಳಿದ್ದಾಗಿ ವರದಿಯಾಗಿದೆ. ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಇಸ್ರೇಲ್ ರಾಯಭಾರ ಕಚೇರಿಯ ನೌಕರರೊಬ್ಬರು ಭೀಕರ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಇದು ಯೆಹೂದಿಗಳ ವಿರುದ್ಧದ ಭಯೋತ್ಪಾದನಾ ದುಷ್ಕೃತ್ಯವಾಗಿದೆ. ಯಹೂದಿ ಸಮುದಾಯಕ್ಕೆ ಹಾನಿ ಮಾಡಲು ದುಷ್ಕರ್ಮಿಗಳು ಸಂಚು ರೂಪಿಸಿರಬಹುದು ಎಂದು ಶಂಕಿಸಲಾಗಿದೆ. ಅಧಿಕಾರಿಗಳು ಇನ್ನೂ ವಿವರಗಳನ್ನು ನೀಡಿಲ್ಲ. ಶಂಕಿತನ ಗುರುತು ಇನ್ನೂ ಪತ್ತೆಯಾಗಿಲ್ಲ” ಎಂದು ವಿಶ್ವಸಂಸ್ಥೆಯ ಇಸ್ರೇಲ್ ರಾಯಭಾರಿ ಡ್ಯಾನಿ ಡ್ಯಾನನ್ ಹೇಳಿದ್ದಾರೆ.

“ಬುಧವಾರ ಸಂಜೆ ಯಹೂದಿ ವಸ್ತುಸಂಗ್ರಹಾಲಯದ ಬಳಿ ಇಬ್ಬರು ಇಸ್ರೇಲಿ ರಾಯಭಾರ ಕಚೇರಿಯ ನೌಕರರನ್ನು ಗುಂಡಿಕ್ಕಿ ಕೊಲ್ಲಲಾಗಿದೆ” ಎಂದು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...