ಬಾಹ್ಯಾಕಾಶದಿಂದ ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ಶುಭಾಂಶು ಶುಕ್ಲಾ; ಕ್ಯಾಲಿಫೋರ್ನಿಯಾ ಕಡಲ ತೀರದಲ್ಲಿ ಸ್ಪ್ಲಾಷ್‌ಡೌನ್

Date:

ಆಕ್ಸಿಯಮ್‌-4 ಬಾಹ್ಯಾಕಾಶ ಕಾರ್ಯಾಚರಣೆಯು ತನ್ನ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್‌) ವಾಸ್ತವ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಭೂಮಿಗೆ ಮರಳಿದೆ. ಭಾರತೀಯ ಗಗನಯಾತ್ರಿ ಗ್ರೂಪ್‌ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ನೇತೃತ್ವದ ಆಕ್ಸಿಯಮ್-‌4 ಸಿಬ್ಬಂದಿಯನ್ನು ಹೊತ್ತ ಸ್ಪೇಸ್‌ ಎಕ್ಸ್‌ನ ಡ್ರ್ಯಾಗನ್‌ ಕ್ಯಾಪ್ಸೂಲ್‌, ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಯಾನ್‌ ಡಿಯಾಗೋ ಕರಾವಳಿಯಲ್ಲಿ ಯಶಸ್ವಿಯಾಗಿ ಇಳಿದಿದೆ.

- Advertisement -

ಜುಲೈ 14 ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಬೇರ್ಪಟ್ಟ ನಂತರ ಶುಭಾಂಶು ಶುಕ್ಲಾ ನೇತೃತ್ವದ ತಂಡವು ಈಗ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಕರಾವಳಿಯ ಪೆಸಿಫಿಕ್ ಮಹಾಸಾಗರದಲ್ಲಿ ಸ್ಪ್ಲ್ಯಾಷ್‌ಡೌನ್ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಭಾರತೀಯ ಕಾಲಮಾನ ಮಧ್ಯಾಹ್ನ 2:30ಕ್ಕೆ ಡ್ರ್ಯಾಗನ್ ಕ್ಯಾಪ್ಸುಲ್ ಪ್ರವೇಶಿಸಿ, ಸಂಜೆ 4:35ಕ್ಕೆ ಅನ್‌ಡಾಕಿಂಗ್ (ಬೇರ್ಪಡಿಸುವಿಕೆ) ಪ್ರಕ್ರಿಯೆ ಯಶಸ್ವಿಯಾಗಿತ್ತು. ಒಟ್ಟು 22.5 ಗಂಟೆಗಳ ಪ್ರಯಾಣ ಬಳಿಕ ಇಂದು ಮಧ್ಯಾಹ್ನ 3ಕ್ಕೆ ಪೆಸಿಫಿಕ್ ಮಹಾಸಾಗರದ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ ಸ್ಪ್ಲ್ಯಾಷ್‌ ಡೌನ್ ಯಶಸ್ವಿಯಾಗಿದ್ದು, ಸುರಕ್ಷಿತವಾಗಿ ಶುಭಾಂಶು ಶುಕ್ಲಾ ಹಾಗೂ ಇನ್ನುಳಿದ ಮೂವರು ಗಗನಯಾತ್ರಿಗಳು ಭೂಮಿಗೆ ಬಂದಿಳಿದಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾನೂನು ಅಸ್ತ್ರವಾಗದಿರಲಿ, ಬಡವರ ಬಗ್ಗೆ ವಿವೇಚನೆಯಿಂದ ಬಳಸಲಿ

ಕ್ಯಾಪ್ಸುಲ್ ಲ್ಯಾಂಡ್ ಆಗುವ ಮುನ್ನ ಅದರ ವೇಗ ನಿಯಂತ್ರಿಸಿ ಪ್ಯಾರಾಚೂಟ್ ಮೂಲಕ ಸಮುದ್ರದಲ್ಲಿ ಸ್ಪ್ಲ್ಯಾಷ್‌ ಡೌನ್ ಮಾಡಲಾಯಿತು. ಕ್ಯಾಪ್ಸುಲ್ ಲ್ಯಾಂಡ್ ಆಗಿ 2 ಗಂಟೆಗಳ ಅದನ್ನು ಓಪನ್ ಮಾಡುವುದಿಲ್ಲ. ಆನಂತರ ಸ್ಟ್ರೇಚರ್‌ನಲ್ಲಿ ಮಲಗಿಸಿ ಕರೆತಂದು ವೈದ್ಯಕೀಯ ತಪಾಸಣೆ ಮಾಡಿ ಕ್ವಾರಂಟೈನ್ ಮಾಡಲಾಗುತ್ತದೆ. ಗಗನಯಾತ್ರಿಗಳಿಗೆ ಭೂಮಿಯ ಗುರುತ್ವಾಕರ್ಷಣೆಗೆ ಹೊಂದಿಕೊಳ್ಳಲು 7 ದಿನಗಳ ವಿಶ್ರಾಂತಿಯ ಅವಶ್ಯಕತೆಯಿರುತ್ತದೆ.

ಜೂ.25ರಂದು ಆಕ್ಸಿಯಂ-4 ಮಿಷನ್ ಮೂಲಕ ಭಾರತದ ಶುಭಾಂಶು ಶುಕ್ಲಾ, ಅಮೆರಿಕ ಮಹಿಳಾ ಗಗನಯಾತ್ರಿ ಪೆಗ್ಗಿ ವಿಟ್ಸನ್, ಹಂಗೇರಿಯ ಟಿಬೋರ್ ಕಾಪು ಹಾಗೂ ಪೋಲೆಂಡ್ ಗಗನಯಾತ್ರಿ ಸ್ಲಾವೋಸ್ಜ್ ಉಜ್ನಾನ್‌ಸ್ಕಿ ನಾಲ್ವರು ಗಗನಯಾತ್ರಿಗಳು ಅಂತರಿಕ್ಷ ಯಾನಕ್ಕೆ ತೆರಳಿದ್ದರು. ಬಾಹ್ಯಾಕಾಶದಲ್ಲಿ 18 ದಿನಗಳ ಕಾಲ ಉಳಿದು ಹಲವಾರು ವೈಜ್ಞಾನಿಕ ಪ್ರಯೋಗಗಳನ್ನು ಮಾಡಿದ್ದು, ಎಲ್ಲ ಪರೀಕ್ಷೆಗಳು ಯಶಸ್ವಿಯಾಗಿವೆ ಎನ್ನಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದ | ಚುನಾವಣಾ ಆಯೋಗಕ್ಕೆ INDIA ವಿಪಕ್ಷಗಳ ಘೇರಾವ್; ರಾಹುಲ್‌, ಪ್ರಿಯಾಂಕಾ ಸೇರಿ ಹಲವರು ವಶಕ್ಕೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಅಕ್ರಮಗಳ...

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...