ಮುಳುಗುತ್ತಿರುವ ಬ್ಯಾಂಕಾಕ್: 50 ಜಿಲ್ಲೆಗಳಲ್ಲಿ ‘ವಿಪತ್ತು’ ಘೋಷಣೆ, ಸ್ತಬ್ಧಗೊಂಡ ಜನಜೀವನ

Date:

ಸತತ ಮಳೆಯಿಂದಾಗಿ ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ಅಕ್ಷರಶಃ ಜಲಾವೃತಗೊಂಡಿದ್ದು, ನಗರದ ಎಲ್ಲಾ 50 ಜಿಲ್ಲೆಗಳನ್ನು ‘ಪ್ರವಾಹ ವಿಪತ್ತು ಪೀಡಿತ ಪ್ರದೇಶ’ ಎಂದು ಶನಿವಾರ ಘೋಷಿಸಲಾಗಿದೆ. ಗುರುವಾರ ಮಧ್ಯಾಹ್ನದಿಂದ ಸುರಿಯುತ್ತಿರುವ ಸುಮಾರು 300 ಮಿ.ಮೀ (11.8 ಇಂಚು) ಮಳೆಯಿಂದಾಗಿ ರಸ್ತೆಗಳು ಮುಳುಗಡೆಯಾಗಿದ್ದು, ಕಾಲುವೆಗಳು ತುಂಬಿ ಹರಿಯುತ್ತಿವೆ. ವಿಮಾನ ನಿಲ್ದಾಣಕ್ಕೆ ತೆರಳುವ ಮಾರ್ಗಗಳಿಗೂ ಜಲದಿಗ್ಬಂಧನ ಉಂಟಾಗಿದ್ದು, ಪ್ರವಾಸಿಗರಿಗೆ ಹಾಗೂ ವಿಮಾನ ಪ್ರಯಾಣಿಕರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.

- Advertisement -

​ಗುರುವಾರದಿಂದ ಸರಿಸುಮಾರು 48 ಗಂಟೆಗಳ ಕಾಲ ಬಿಡುವು ನೀಡದೆ ಸುರಿದ ಭಾರಿ ಮಳೆಯಿಂದಾಗಿ ಬ್ಯಾಂಕಾಕ್‌ನ ಕಾಲುವೆಗಳು ವೇಗವಾಗಿ ತುಂಬಿಕೊಂಡಿವೆ. ಇದರಿಂದಾಗಿ ಹಲವು ಬಡಾವಣೆಗಳಲ್ಲಿ ಮನೆಗಳು, ಅಂಗಡಿ-ಮುಂಗಟ್ಟುಗಳು ಹಾಗೂ ರಸ್ತೆಗಳಿಗೆ ನೀರು ನುಗ್ಗಿದೆ. ಶುಕ್ರವಾರ ಕೇವಲ ಮೂರು ಜಿಲ್ಲೆಗಳನ್ನು ವಿಪತ್ತು ಪೀಡಿತ ಎಂದು ಗುರುತಿಸಲಾಗಿತ್ತು. ಆದರೆ ರಸ್ತೆಗಳಲ್ಲಿ ಮೊಣಕಾಲು ಮತ್ತು ತೊಡೆಯ ಮಟ್ಟದ ನೀರು ನಿಂತು ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದ ಕಾರಣ, ಶನಿವಾರ ನಗರದ ಎಲ್ಲಾ 50 ಜಿಲ್ಲೆಗಳಿಗೂ ವಿಪತ್ತು ಘೋಷಣೆಯನ್ನು ವಿಸ್ತರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ...

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಅತ್ಯಂತ ಭೀಕರ ಮತ್ತು ಆಘಾತಕಾರಿ ಷಡ್ಯಂತ್ರವೊಂದು ದೇಶದಾದ್ಯಂತ ಬಹಿರಂಗವಾಗಿದೆ. ಆಡಳಿತರೂಢ ಬಿಜೆಪಿ ಮತ್ತು ಮೋದಿ-ಶಾ ಜೋಡಿಯ ಸೂತ್ರದ ಬೊಂಬೆ ಗ್ಯಾನೇಶ್‌...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್:...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು ಮತ್ತು ಪ್ರಯಾಣಿಕರಿಗೆ ₹5ಕ್ಕೆ ಉಪಹಾರ, ₹10ಕ್ಕೆ ಊಟ ನೀಡುವ ಇಂದಿರಾ ಕ್ಯಾಂಟಿನ್ ಯೋಜನೆ ಜನಸಾಮಾನ್ಯರಿಗೆ ಬಹುದೊಡ್ಡ ಆಸರೆಯಾಗಿದೆ. ಆದರೆ...

ಹಾವೇರಿ | ಬರದ ಬೇಗೆಯಲ್ಲೂ ಕೈ ಹಿಡಿದ ಮೆಕ್ಕೆಜೋಳ;...

"ಯಾವುದೇ ರಸಗೊಬ್ಬರಗಳನ್ನು ಬಳಸದೇ, ಕೀಟನಾಶಕಗಳನ್ನು ಸಿಂಪಡಿಸದೆಯೇ ಸಹಜ ಸಮೃದ್ಧ ಬೆಳೆ ಬೆಳೆಯುವುದು ಸಾವಯವ ಕೃಷಿಯ ಪವಾಡ" ಎಂದು ಚಂ.ಸು ಪಾಟೀಲ್ ಸಾವಯವ ಕೃಷಿಯ ಅನುಕೂಲಗಳನ್ನು ವಿಶ್ಲೇಷಿಸುತ್ತಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ತೀವ್ರ...

​ಬ್ಯಾಂಕಾಕ್ ಗವರ್ನರ್ ಚಡ್‌ಚಾಟ್ ಸಿಟ್ಟಿಪುಂಟ್ ಪ್ರತಿಕ್ರಿಯಿಸಿ, “ನಗರದ ಪೂರ್ವ ಭಾಗಗಳು ಅತಿ ಹೆಚ್ಚು ಹಾನಿಗೊಳಗಾಗಿವೆ. ನೀರೆತ್ತುವ (ಪಂಪಿಂಗ್) ಕೇಂದ್ರಗಳು ಪೂರ್ಣ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಒಟ್ಟಾರೆ ಪ್ರತಿ ಸೆಕೆಂಡಿಗೆ 1,200 ಘನ ಮೀಟರ್ ನೀರನ್ನು ಹೊರಹಾಕಲಾಗುತ್ತಿದೆ. ಮಳೆ ನಿಂತರೆ ಆರು ಗಂಟೆಗಳಲ್ಲಿ ಪರಿಸ್ಥಿತಿ ಸುಧಾರಿಸಲಿದೆ” ಎಂದು ತಿಳಿಸಿದ್ದಾರೆ. ಪ್ರವಾಹ ನಿರ್ವಹಣೆಗಾಗಿ ಒಂದು ದಶಲಕ್ಷ ಮರಳಿನ ಚೀಲಗಳನ್ನು ಸಿದ್ಧಪಡಿಸಲಾಗಿದ್ದು, ಶಾಲೆಗಳಲ್ಲಿ ತಾತ್ಕಾಲಿಕ ಆಶ್ರಯ ಕೇಂದ್ರಗಳನ್ನು ತೆರೆಯಲಾಗಿದೆ. ಜೀವ ರಕ್ಷಕ ವೈದ್ಯಕೀಯ ಉಪಕರಣಗಳನ್ನು ಅವಲಂಬಿಸಿರುವ ಹಾಸಿಗೆ ಹಿಡಿದ ರೋಗಿಗಳನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಹಾಗೂ ವಾಹನಗಳನ್ನು ಎತ್ತರದ ಪ್ರದೇಶಗಳಿಗೆ ಕೊಂಡೊಯ್ಯಲು ಜನರಿಗೆ ಸಲಹೆ ನೀಡಲಾಗಿದೆ.

​ಥಾಯ್ಲೆಂಡ್ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ನೈರುತ್ಯ ಮುಂಗಾರು ಮತ್ತು ವಾಯುಭಾರ ಕುಸಿತದ ಪ್ರಭಾವದಿಂದಾಗಿ ಬ್ಯಾಂಕಾಕ್ ಹಾಗೂ ಸುತ್ತಮುತ್ತಲಿನ ಪ್ರಾಂತ್ಯಗಳಲ್ಲಿ ಭಾನುವಾರದವರೆಗೂ (ಸೆ.27) ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ದಿಢೀರ್ ಪ್ರವಾಹ ಮತ್ತು ಕಾಲುವೆಗಳು ಉಕ್ಕಿ ಹರಿಯುವ ಅಪಾಯದ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಬ್ಯಾಂಕಾಕ್ ಮಾತ್ರವಲ್ಲದೆ ಕೇಂದ್ರ ಥಾಯ್ಲೆಂಡ್‌ನ 21 ಪ್ರಾಂತ್ಯಗಳಲ್ಲಿ ಒಟ್ಟು 84,000ಕ್ಕೂ ಹೆಚ್ಚು ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂತ್ರಸ್ತ ಪ್ರದೇಶಗಳಲ್ಲಿ ಮೊಬೈಲ್ ಸೆಲ್-ಬ್ರಾಡ್‌ಕಾಸ್ಟ್ ವ್ಯವಸ್ಥೆಯ ಮೂಲಕ ಸರ್ಕಾರ ತುರ್ತು ಎಚ್ಚರಿಕೆ ಸಂದೇಶಗಳನ್ನು ರವಾನಿಸುತ್ತಿದೆ.

​ನಗರದ ಪ್ರಮುಖ ರಸ್ತೆಗಳಾದ ಲಾಟ್ ಕ್ರಾಬಾಂಗ್ ಮತ್ತು ವಿಭಾವದಿ ರಂಗ್ಸಿಟ್ ಸಂಪೂರ್ಣ ಜಲಾವೃತಗೊಂಡಿದ್ದು, ವಾಹನಗಳು ಸಿಲುಕಿಕೊಂಡು ಸಂಚಾರ ಅಸ್ತವ್ಯಸ್ತಗೊಂಡಿದೆ. ಬ್ಯಾಂಕಾಕ್‌ನ ಸುವರ್ಣಭೂಮಿ ಮತ್ತು ಡಾನ್ ಮುವಾಂಗ್ ವಿಮಾನ ನಿಲ್ದಾಣಗಳಿಗೆ ತೆರಳುವ ರಸ್ತೆಗಳು ಜಲಾವೃತವಾಗಿರುವುದರಿಂದ, ವಿಮಾನಯಾನದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಹೀಗಾಗಿ ಪ್ರಯಾಣಿಕರು ಸಾಕಷ್ಟು ಮುಂಚಿತವಾಗಿಯೇ ವಿಮಾನ ನಿಲ್ದಾಣಕ್ಕೆ ತೆರಳುವಂತೆ ನಾಗರಿಕ ವಿಮಾನಯಾನ ಪ್ರಾಧಿಕಾರ ಸೂಚಿಸಿದೆ.

​ಇದರ ಜೊತೆಗೆ, ಥಾಯ್ಲೆಂಡ್ ಕೊಲ್ಲಿ ಮತ್ತು ಅಂಡಮಾನ್ ಸಮುದ್ರದಲ್ಲಿ 2 ರಿಂದ 3 ಮೀಟರ್ ಎತ್ತರದ ಬೃಹತ್ ಅಲೆಗಳು ಏಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಹೀಗಾಗಿ ಸಣ್ಣ ದೋಣಿಗಳು ಕಡಲಿಗೆ ಇಳಿಯದಂತೆ ನಿರ್ಬಂಧ ವಿಧಿಸಲಾಗಿದ್ದು, ವಾರಾಂತ್ಯದಲ್ಲಿ ದೋಣಿ ವಿಹಾರ ಅಥವಾ ದ್ವೀಪಗಳ ಪ್ರವಾಸ ಕೈಗೊಳ್ಳುವ ಪ್ರವಾಸಿಗರಿಗೂ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಹಾವಳಿ; 19 ಮಂದಿ ಬಲಿ, 3 ಸಾವಿರ ಬಾಟಲಿ ವಶ

ಕಳ್ಳಭಟ್ಟಿ ಸೇವಿಸಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಾಗಾಲ್ಯಾಂಡ್‌ನಲ್ಲಿ...

‘ಮತದಾನದ ಹಕ್ಕು ಕಸಿಯಲು ಯಾರಿಗೂ ಅಧಿಕಾರವಿಲ್ಲ’: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

"ಈ ದೇಶದಲ್ಲಿ ಹುಟ್ಟಿರುವ ಯಾವುದೇ ನಾಗರಿಕನ ಮತದಾನದ ಹಕ್ಕನ್ನು ಕಸಿಯಲು ಯಾರಿಗೂ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ತನಿಖೆಗೆ ಸುಪ್ರೀಂನಲ್ಲಿ ಅರ್ಜಿ; ಆಯೋಗದ ಡೇಟಾಬೇಸ್‌ ಆಡಿಟ್‌ಗೆ ಮನವಿ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧದ ಆರೋಪಗಳ ತನಿಖೆಗೆ...

ಬಿಡದಿ ರೈತರ ಮೇಲೆ ಪೊಲೀಸ್ ದೌರ್ಜನ್ಯ: ಸಂಯುಕ್ತ ಹೋರಾಟ ಕರ್ನಾಟಕ ತೀವ್ರ ಖಂಡನೆ

ಕಳೆದ ಐದು ದಿನಗಳಿಂದ ಬೈರಮಂಗಲ ವೃತ್ತದಲ್ಲಿ ರಸ್ತೆ ತಡೆ ಹಾಗೂ ಸರಣಿ...