ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೋ ಮೇಲೆ ಭೀಕರ ಗುಂಡಿನ ದಾಳಿ: ಪರಿಸ್ಥಿತಿ ಚಿಂತಾಜನಕ

Date:

ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೋ ಮೇಲೆ ಭೀಕರ ಗುಂಡಿನ ದಾಳಿ ನಡೆದಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿದೆ.

“ದಾಳಿಯಿಂದ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಧಾನಿ ಬ್ರಾಟಿಸ್ಲಾವಾದ ಈಶಾನ್ಯಕ್ಕೆ ಸುಮಾರು 150 ಕಿಲೋಮೀಟರ್ ದೂರದಲ್ಲಿರುವ ಹ್ಯಾಂಡ್ಲೋವಾ ನಗರದಲ್ಲಿ ಈ ಘಟನೆ ನಡೆದಿದೆ. ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ” ಎಂದು ವರದಿ ತಿಳಿಸಿದೆ.

ಮಾಧ್ಯಮ ವರದಿಗಳ ಪ್ರಕಾರ, ರಷ್ಯಾದ ಪರ ಪ್ರಧಾನಿ ಅವರು ಕ್ಯಾಬಿನೆಟ್ ಸಭೆ ನಡೆಸುತ್ತಿದ್ದ ಹೌಸ್ ಆಫ್ ಕಲ್ಚರ್ ಹೊರಗೆ ಗುಂಡಿನ ದಾಳಿ ನಡೆದಿದೆ. ಪಿಎಂ ಫಿಕೋ ಹೌಸ್‌ನ ಹೊರಗೆ ಜನರೊಂದಿಗೆ ಮಾತನಾಡುತ್ತಿದ್ದರು. ಈ ವೇಳೆ ಗುಂಡಿನ ದಾಳಿ ನಡೆದಿದ್ದು, ಇದರ ವಿಡಿಯೋಗಳು ಕೂಡ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಗುಂಡು ತಗುಲಿ ಗಾಯಗೊಂಡಿರುವ ಪ್ರಧಾನಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿದ್ದ ಪತ್ರಕರ್ತರ ಪ್ರಕಾರ, ಹಲವಾರು ಗುಂಡಿನ ಶಬ್ದಗಳು ಕೇಳಿಬಂದವು. ಗುಂಡು ಹಾರಿಸಿದ ಆರೋಪಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕ್ರೂರ ದಾಳಿಯಿಂದ ಆಘಾತಕ್ಕೊಳಗಾಗಿದ್ದೇನೆ ಎಂದು ಸ್ಲೋವಾಕಿಯಾದ ಅಧ್ಯಕ್ಷ ಜುಝಾನಾ ಸಪುಟೋವಾ ಹೇಳಿದ್ದಾರೆ.

ಗುಂಡು ತಗುಲಿದ ಬಳಿಕ ಭದ್ರತಾ ಸಿಬ್ಬಂದಿ ಪ್ರಧಾನಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಸುದ್ದಿ ಸಂಸ್ಥೆ NEXTA ಈ ವೀಡಿಯೊವನ್ನು ಹಂಚಿಕೊಂಡಿದೆ. ರಾಬರ್ಟ್ ಫಿಕೊ ಮೇಲಿನ ದಾಳಿಯ ನಂತರ, ಪ್ರಧಾನ ಮಂತ್ರಿಯ ಭದ್ರತಾ ಸಿಬ್ಬಂದಿ ಅವರನ್ನು ತಮ್ಮ ಬೆಂಗಾವಲು ಪಡೆ ಆಸ್ಪತ್ರೆಗೆ ಕರೆದೊಯ್ದರು.

ಸ್ಲೋವಾಕ್ ಮಾಧ್ಯಮದಿಂದ ಪಡೆದ ಆರಂಭಿಕ ಮಾಹಿತಿಯ ಪ್ರಕಾರ, ಫಿಕೊಗೆ ಹಲವಾರು ಬಾರಿ ಗುಂಡು ಹಾರಿಸಲಾಯಿತು. ಒಂದು ಗುಂಡು ಹೊಟ್ಟೆಗೆ ಹೊಕ್ಕಿದ್ದರೆ, ತಲೆಗೆ ಒಂದು ಗುಂಡು ಹೊಕ್ಕಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದೆ.

ಸ್ಥಳೀಯ ಟಿವಿ ಚಾನೆಲ್ ಮಾರ್ಕಿಜಾ ವರದಿ ಮಾಡಿರುವ ಪ್ರಕಾರ ದಾಳಿಕೋರನನ್ನು ಖಾಸಗಿ ಭದ್ರತಾ ಕಂಪನಿಯೊಂದ ಮಾಜಿ ಉದ್ಯೋಗಿ ಹಾಗೂ ಕವನ ಸಂಕಲನವೊಂದರ ಕರ್ತೃ 71 ವರ್ಷದ ಜುರಾಜ್ ಸಿಂಟುಲಾ ಎಂದು ತಿಳಿಸಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಂಡನ್‌ನಲ್ಲಿ ಭಾರತೀಯ ಮೂಲದ ಮಹಿಳೆಯ ಹತ್ಯೆ

ಲಂಡನ್‌ನ ಬರ್ಂಟ್ ಓಕ್‌ನಲ್ಲಿ 66 ವರ್ಷದ ಭಾರತೀಯ ಮೂಲದ ಬ್ರಿಟಿಷ್ ಪ್ರಜೆಯನ್ನು 22...

ಭಾರತ ಮತ್ತು ಇರಾನ್ ನಡುವೆ ಬಂದರು ಒಪ್ಪಂದ; ಭಾರತದ ಪಾಲಿಗೆ ದೊಡ್ಡ ವ್ಯವಹಾರ

ಭಾರತದ ತೈಲ ವ್ಯಾಪಾರದಲ್ಲಿ ಯಾವುದೇ ಅಡೆತಡೆ ಉಂಟಾದರೆ, ಅದು ತೈಲದ ಖರೀದಿ...

‘ಚಂದ್ರ’ ಉಪಗ್ರಹದಲ್ಲಿ ಮೊದಲ ರೈಲ್ವೆ ನಿಲ್ದಾಣ ಸ್ಥಾಪಿಸಲು ‘ನಾಸಾ’ ಯೋಜನೆ

ಅಮೆರಿಕದ ಬಾಹ್ಯಾಕಾಶ ಸಂಸ್ಥೆ ರಾಷ್ಟ್ರೀಯ ವೈಮಾನಿಕ ಮತ್ತು ಬಾಹ್ಯಾಕಾಶ ಮಂಡಳಿ(ನಾಸಾ) ಚಂದ್ರನ...