ಮಲೇಷ್ಯಾ | ಲ್ಯಾಂಡಿಂಗ್ ವೇಳೆ ಲಘು ವಿಮಾನ ಪತನ: 10 ಮಂದಿ ಸಾವು

Date:

ಮಲೇಷ್ಯಾ ದ ಸೆಂಟ್ರಲ್ ಸೆಲಂಗೋರ್ ರಾಜ್ಯದಲ್ಲಿ ಲಘು ವಿಮಾನವೊಂದು ಲ್ಯಾಂಡಿಂಗ್ ಮಾಡುವ ವೇಳೆ ಕಾರು ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿಮಾನದಲ್ಲಿದ್ದ 8 ಮಂದಿ ಹಾಗೂ ಇಬ್ಬರು ಚಾಲಕರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಪೊಲೀಸ್ ಮುಖ್ಯಸ್ಥರು ತಿಳಿಸಿದ್ದಾರೆ.

ವಿಮಾನ ಅಪಘಾತದಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, ಒಬ್ಬರು ಮೋಟಾರ್ ಸೈಕಲ್ ಚಾಲಕ, ಇನ್ನೊಬ್ಬರು ಕಾರು ಚಾಲಕ ಮತ್ತು ವಿಮಾನದಲ್ಲಿದ್ದ 8 ಜನ ಸೇರಿದಂತೆ ಒಟ್ಟು 10 ಜನರು ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ.

ಮಲೇಷ್ಯಾ ನಾಗರಿಕ ವಿಮಾನಯಾನ ಪ್ರಾಧಿಕಾರ ನೀಡಿರುವ ಹೇಳಿಕೆಯಲ್ಲಿ, ವಿಮಾನ ಪತನಗೊಂಡ ಸಂದರ್ಭ 6 ಮಂದಿ ಪ್ರಯಾಣಿಕರು ಮತ್ತು ಇಬ್ಬರು ವಿಮಾನ ಸಿಬ್ಬಂದಿ ವಿಮಾನದಲ್ಲಿದ್ದರು ಎಂದು ತಿಳಿಸಿದೆ. ಅಲ್ಲದೇ ಘಟನೆಯ ಬಳಿಕ ಸುರಕ್ಷತಾ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿಮಾನವು ಏರ್ ಟ್ರಾಫಿಕ್ ಕಂಟ್ರೋಲ್ ಟವರ್‌ನೊಂದಿಗೆ ಸಂಪರ್ಕವನ್ನು ಕಡಿದುಕೊಂಡು ಹೆದ್ದಾರಿಯಲ್ಲಿ ಮೋಟಾರ್ ಬೈಕ್ ಮತ್ತು ಕಾರಿಗೆ ಡಿಕ್ಕಿ ಹೊಡೆದಿದೆ. ನಾಗರಿಕ ವಿಮಾನಯಾನ ಪ್ರಾಧಿಕಾರ ಈ ಕುರಿತು ಪ್ರತಿಕ್ರಿಯಿಸಿದ್ದು, ವಿಮಾನ ಲಂಕಾವಿಯಿಂದ ಹೊರಟು ರಾಜಧಾನಿ ಕೌಲಾಲಂಪುರ ಬಳಿಯಿರುವ ಸೆಲಂಗೋರ್‌ನ ಸುಲ್ತಾನ್ ಅಬ್ದುಲ್ ಅಜೀಜ್ ಷಾ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬುಡಕಟ್ಟು ಪ್ರಾಬಲ್ಯದ 5 ಜಿಲ್ಲೆಗಳಿಗೆ ಪ್ರತ್ಯೇಕ ಆಡಳಿತಾತ್ಮಕ ಹುದ್ದೆ ನೀಡಿ: ಪ್ರಧಾನಿಗೆ 10 ಕುಕಿ ಶಾಸಕರ ಪತ್ರ

ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೊರಾಜ್‌ಮನ್ ಮಹಮೂದ್ ಮಾತನಾಡಿ, ವಿಮಾನವು ಸುಬಾಂಗ್ ಏರ್ ಟ್ರಾಫಿಕ್ ಕಂಟ್ರೋಲ್ ಟವರ್‌ನೊಂದಿಗೆ ಮಧ್ಯಾಹ್ನ 2.47ಕ್ಕೆ ಮೊದಲ ಸಂಪರ್ಕವನ್ನು ಸಾಧಿಸಿದ್ದು, 2.48ಕ್ಕೆ ಲ್ಯಾಂಡಿಂಗ್ ಆಗಲು ಸೂಚನೆ ನೀಡಲಾಗಿತ್ತು ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೋ ಮೇಲೆ ಭೀಕರ ಗುಂಡಿನ ದಾಳಿ: ಪರಿಸ್ಥಿತಿ ಚಿಂತಾಜನಕ

ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೋ ಮೇಲೆ ಭೀಕರ ಗುಂಡಿನ ದಾಳಿ ನಡೆದಿದ್ದು,...

ಲಂಡನ್‌ನಲ್ಲಿ ಭಾರತೀಯ ಮೂಲದ ಮಹಿಳೆಯ ಹತ್ಯೆ

ಲಂಡನ್‌ನ ಬರ್ಂಟ್ ಓಕ್‌ನಲ್ಲಿ 66 ವರ್ಷದ ಭಾರತೀಯ ಮೂಲದ ಬ್ರಿಟಿಷ್ ಪ್ರಜೆಯನ್ನು 22...

ಭಾರತ ಮತ್ತು ಇರಾನ್ ನಡುವೆ ಬಂದರು ಒಪ್ಪಂದ; ಭಾರತದ ಪಾಲಿಗೆ ದೊಡ್ಡ ವ್ಯವಹಾರ

ಭಾರತದ ತೈಲ ವ್ಯಾಪಾರದಲ್ಲಿ ಯಾವುದೇ ಅಡೆತಡೆ ಉಂಟಾದರೆ, ಅದು ತೈಲದ ಖರೀದಿ...