ತಂದೆ ಅಯತೊಲ್ಲಾ ಖಮೇನಿ ಅಂತ್ಯಕ್ರಿಯೆಯಿಂದ ದೂರ ಉಳಿಯಲಿರುವ ಪುತ್ರ ಮೊಜ್ತಬಾ

Date:

ಇರಾನ್‌ನ ಪರಮೋಚ್ಛ ನಾಯಕ ದಿವಂಗತ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಅವರ ಪುತ್ರ ಮೊಜ್ತಬಾ ಖಮೇನಿ ಸಾರ್ವಜನಿಕವಾಗಿ ಪಾಲ್ಗೊಳ್ಳುವ ಸಾಧ್ಯತೆಗಳಿಲ್ಲ. ಇಸ್ರೇಲ್ ಜೊತೆಗಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಭದ್ರತಾ ಕಾರಣಗಳಿಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಭಾರತದಲ್ಲಿರುವ ಇರಾನ್‌ನ ಪರಮೋಚ್ಛ ನಾಯಕರ ಪ್ರತಿನಿಧಿ ಅಯತೊಲ್ಲಾ ಹಕೀಮ್ ಇಲಾಹಿ ತಿಳಿಸಿದ್ದಾರೆ.

- Advertisement -

‘ಇಂಡಿಯಾ ಟುಡೇ’ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಇಲಾಹಿ, ನವದೆಹಲಿಯಿಂದ ಟೆಹರಾನ್‌ಗೆ ತೆರಳುವ ಮುನ್ನ ಈ ವಿಷಯವನ್ನು ಹಂಚಿಕೊಂಡಿದ್ದಾರೆ. “ನಾನು ಕಳೆದ ವಾರ ಇರಾನ್‌ನಲ್ಲಿದ್ದೆ. ಅಲ್ಲಿ ಮೊಜ್ತಬಾ ಅವರನ್ನು ಭೇಟಿಯಾಗಿದ್ದ ಕೆಲವು ಆಪ್ತರೊಂದಿಗೆ ಮಾತನಾಡಿದ್ದೆ. ಮೊಜ್ತಬಾ ಅವರಿಗೆ ಸಾರ್ವಜನಿಕರನ್ನು ಭೇಟಿಯಾಗುವ ಮತ್ತು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ತೀವ್ರ ಇಚ್ಛೆಯಿದೆ. ಆದರೆ, ಪ್ರಸ್ತುತ ಪರಿಸ್ಥಿತಿಯಲ್ಲಿ ಅವರಿಗೆ ಸಂಪೂರ್ಣ ಭದ್ರತೆ ಒದಗಿಸುವುದು ಅತ್ಯಂತ ಅಪಾಯಕಾರಿ ಎಂದು ಭದ್ರತಾ ಪಡೆಗಳು ಎಚ್ಚರಿಸಿವೆ. ಹೀಗಾಗಿ, ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಇತ್ತೀಚಿನ ಯುದ್ಧದ ಆರಂಭಿಕ ಹಂತದಲ್ಲಿ ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತರಾಗಿದ್ದರು. ಇಸ್ಲಾಮಿಕ್ ಗಣರಾಜ್ಯದ 47 ವರ್ಷಗಳ ಇತಿಹಾಸದಲ್ಲಿ ಇದೊಂದು ಅತ್ಯಂತ ಮಹತ್ವದ ಹಾಗೂ ನಿರ್ಣಾಯಕ ಘಟ್ಟವಾಗಿದೆ. ಖಮೇನಿ ಅವರ ನಿಧನದ ಹಿನ್ನೆಲೆಯಲ್ಲಿ ಇರಾನ್‌ನಾದ್ಯಂತ ಶೋಕಾಚರಣೆ ನಡೆಯುತ್ತಿದ್ದು, ಟೆಹರಾನ್, ಖೋಮ್, ಮಶ್ಹದ್‌ ಮತ್ತು ಇರಾಕ್‌ನಲ್ಲಿ ಬೃಹತ್ ಮಟ್ಟದ ಶ್ರದ್ಧಾಂಜಲಿ ಸಭೆ ಹಾಗೂ ಅಂತ್ಯಕ್ರಿಯೆಯ ಮೆರವಣಿಗೆಗಳನ್ನು ಆಯೋಜಿಸಲಾಗಿದೆ. ಈ ಸಮಾರಂಭಗಳು ಇಸ್ಲಾಮಿಕ್ ಗಣರಾಜ್ಯದ ಮೇಲಿನ ಜನರ ನಿಷ್ಠೆ ಮತ್ತು ಕ್ರಾಂತಿಕಾರಿ ಮನೋಭಾವದ ಪ್ರದರ್ಶನವೂ ಆಗಲಿದೆ. ಇಸ್ರೇಲ್‌ನ ಬೆದರಿಕೆಗಳ ನಡುವೆಯೂ ಇರಾನ್ ಈ ಯುದ್ಧದಿಂದ ಮತ್ತಷ್ಟು ಬಲಿಷ್ಠವಾಗಿ ಹೊರಹೊಮ್ಮಿದೆ ಎಂದು ಇಲಾಹಿ ಇದೇ ವೇಳೆ ಪ್ರತಿಪಾದಿಸಿದ್ದಾರೆ.

ಇನ್ನು, ಈ ಮಹತ್ವದ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಇರಾನ್ ಸರ್ಕಾರವು ಭಾರತದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ಅವರಿಗೆ ಆಹ್ವಾನ ನೀಡಿತ್ತು. ಕಾಂಗ್ರೆಸ್ ಪಕ್ಷದ ಪ್ರತಿನಿಧಿಯಾಗಿ ಸಲ್ಮಾನ್ ಖುರ್ಷಿದ್ ಅವರು ಟೆಹರಾನ್‌ಗೆ ತೆರಳಲಿದ್ದು, ಖರ್ಗೆ ಅವರ ಶೋಕಸಂದೇಶದ ಪತ್ರವನ್ನು ಅಲ್ಲಿನ ಆಡಳಿತಕ್ಕೆ ಹಸ್ತಾಂತರಿಸಲಿದ್ದಾರೆ.

ಈ ಭೇಟಿಯ ಕುರಿತು ಪ್ರತಿಕ್ರಿಯಿಸಿರುವ ಖುರ್ಷಿದ್, “ಭಾರತ ಮತ್ತು ಇರಾನ್ ನಡುವೆ ದೀರ್ಘಕಾಲದ ಐತಿಹಾಸಿಕ ಬಾಂಧವ್ಯವಿದೆ. ಅಟಲ್ ಬಿಹಾರಿ ವಾಜಪೇಯಿ ಅವರ ಕಾಲದಲ್ಲಿ ಪಾಕಿಸ್ತಾನದೊಂದಿಗಿನ ಬಿಕ್ಕಟ್ಟಿನ ಸಂದರ್ಭದಲ್ಲಿ ನಾವು ಜಿನೀವಾಗೆ ತೆರಳಿದ್ದಾಗ ಇರಾನ್ ನಮಗೆ ಬಹಿರಂಗವಾಗಿ ಬೆಂಬಲ ನೀಡಿತ್ತು. ಅಲ್ಲದೆ, ಇತ್ತೀಚಿನ ಸಂಘರ್ಷದ ವೇಳೆಯೂ ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಇರಾನ್ ನೆರವಾಗಿತ್ತು. ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ಭಾರತದ ಬಾಂಧವ್ಯದ ಬಗ್ಗೆ ಇರಾನ್ ಎಂದಿಗೂ ದೂರು ನೀಡಿಲ್ಲ. ಹೀಗಾಗಿ, ಕಷ್ಟದ ಕಾಲದಲ್ಲಿ ಇರಾನ್‌ನಂತಹ ಮಿತ್ರರಾಷ್ಟ್ರದ ದುಃಖದಲ್ಲಿ ಭಾಗಿಯಾಗುವುದು ಹಾಗೂ ಅವರ ಬೆಂಬಲಕ್ಕೆ ನಿಲ್ಲುವುದು ನಮ್ಮ ಕರ್ತವ್ಯ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ ಮೋದಿ ಸರ್ಕಾರ?

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ...

ಶಿವಮೊಗ್ಗ | ಇಂದಿನಿಂದ ಭದ್ರಾ ಜಲಾಶಯದ ಎರಡೂ ನಾಲೆಗೆ ನೀರು ಬಿಡಲು ತೀರ್ಮಾನ

ಭದ್ರಾ ಜಲಾಶಯದ ಎಡ ಮತ್ತು ಬಲದಂಡೆ ನಾಲೆಗಳಿಗೆ ನೀರು ಬಿಡಲು ಆಗ್ರಹಿಸಿ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ ಹಿಂದಿನ ತರ್ಕವೇನು?

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ...

ECI ಅಫಿಡವಿಟ್‌ನಲ್ಲಿ ‘ಮತ ಕಳವು’ ಆರೋಪಕ್ಕೆ ಉತ್ತರವಿಲ್ಲ: ‘ಸುಪ್ರೀಂ’ಗೆ 48 ಪ್ರಶ್ನೆಗಳನ್ನಿಟ್ಟ ಕಾಂಗ್ರೆಸ್

'ಮತಗಳ ಕಳವು' (ವೋಟ್ ಚೋರಿ) ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು...