ನ್ಯೂಯಾರ್ಕ್‌ | 4.8 ತೀವ್ರತೆಯ ಭೂಕಂಪನದ ವೇಳೆ ಅಲುಗಾಡಿದ ‘ಸ್ಟ್ಯಾಚ್ಯೂ ಆಫ್ ಲಿಬರ್ಟಿ’ ಪ್ರತಿಮೆ!

Date:

Advertisements

ಶುಕ್ರವಾರ(ಏ.5)ರ ಬೆಳಗ್ಗೆ ನ್ಯೂಜೆರ್ಸಿಯಲ್ಲಿ 4.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಈ ವೇಳೆ ‘ಸ್ಟ್ಯಾಚ್ಯೂ ಆಫ್ ಲಿಬರ್ಟಿ’ ಪ್ರತಿಮೆಯು ಕಂಪಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಭೂಕಂಪನದ ಕೇಂದ್ರ ಬಿಂದುವು ನ್ಯೂಜೆರ್ಸಿಯ ಕ್ಯಾಲಿಫೋನ್ ಆಗಿತ್ತು. ಬೆಳಿಗ್ಗೆ 10:23ರ ಸುಮಾರಿಗೆ ಭೂಮಿ ಕಂಪಿಸಿತ್ದೆತು. ಈ ವೇಳೆ ‘ಸ್ಟ್ಯಾಚ್ಯೂ ಆಫ್ ಲಿಬರ್ಟಿ’ ಪ್ರತಿಮೆಯು ಕಂಪಿಸಿದೆ @EarthCam ಟ್ವಿಟರ್​​ ಖಾತೆಯಲ್ಲಿ ಭೂಕಂಪನದ ವಿಡಿಯೋವನ್ನು ಏಪ್ರಿಲ್​​​​ 5ರಂದು ಹಂಚಿಕೊಳ್ಳಲಾಗಿದ್ದು, ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

‘ಸ್ಟ್ಯಾಚ್ಯೂ ಆಫ್ ಲಿಬರ್ಟಿ’ ಭೂಕಂಪನದ ವೇಳೆ ಕೆಲ ಸೆಕೆಂಡುಗಳ ವರೆಗೆ ಕಂಪಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸರಿಸುಮಾರು 42 ಮಿಲಿಯನ್ ಜನರಿಗೆ ಭೂಮಿ ಕಂಪಿಸಿದ ಅನುಭವ ಉಂಟಾಗಿದೆ ಎಂದು ವರದಿಯಾಗಿದೆ.

Advertisements

ವಾಷಿಂಗ್ಟನ್ ಡಿಸಿಯಿಂದ ನ್ಯೂಯಾರ್ಕ್-ಕೆನಡಾ ಗಡಿಯವರೆಗೆ ಭೂಮಿ ಕಂಪಿಸಿರುವುದಾಗಿ ಅಮೆರಿಕದ ಭೂಕಂಪನ ಕೇಂದ್ರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭೂಮಿಯ ಅಲುಗಾಡುವಿಕೆಯು ಕೆಲವು ಸೆಕೆಂಡುಗಳ ಕಾಲ ನಡೆದರೂ, ನ್ಯೂಯಾರ್ಕ್ ನಗರದಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಈ ನಡುವೆ ಚಂಡಮಾರುತದ ವೇಳೆ ಸ್ಟ್ಯಾಚ್ಯೂ ಆಫ್ ಲಿಬರ್ಟಿಗೆ ಮಿಂಚು ಕೂಡ ಬಡಿದಿದೆ. ಆ ಮಿಂಚು ಪ್ರತಿಮೆಯ ಕೈಯ್ಯಲ್ಲಿರುವ ಟಾರ್ಚಿಗೆ ಬಡಿದಿದೆ. ಈ ದೃಶ್ಯವನ್ನು ಛಾಯಾಗ್ರಾಹಕ ಡಾನ್ ಮಾರ್ಟಿನ್ ಎಂಬವರು ಸೆರೆ ಹಿಡಿದಿದ್ದು, ಅವರು ಕ್ಲಿಕ್ ಮಾಡಿದ ಫೋಟೋ ಕೂಡ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

Download Eedina App Android / iOS

X