‘ಸ್ಟಾಪ್, ಸ್ಟಾಪ್, ಸ್ಟಾಪ್’: ಕ್ಷಣಾರ್ಧದಲ್ಲಿ ತಪ್ಪಿದ ಮತ್ತೊಂದು ವಿಮಾನ ದುರಂತ; ವಿಡಿಯೋ ನೋಡಿ

Date:

ದಕ್ಷಿಣ ಕೊರಿಯಾದಲ್ಲಿ ಭಾನುವಾರ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಸುಮಾರು 175 ಮಂದಿ ಸಾವನ್ನಪ್ಪಿದ ಘಟನೆ ಇಡೀ ಜಗತ್ತನ್ನು ದಂಗಾಗಿಸಿದೆ. ಆ ಘಟನೆ ಮಾಸುವ ಮುನ್ನವೇ ಸಂಭವಿಸಬಹುದಾಗಿದ್ದ ಮತ್ತೊಂದು ವಿಮಾನ ದುರಂತ ಕ್ಷಣಾರ್ಧದಲ್ಲಿ ತಪ್ಪಿದೆ. ವಿಮಾನದಲ್ಲಿದ್ದ ಪ್ರಯಾಣಿಕರು ಆಘಾತಕ್ಕೊಳಗಾಗಿ, ನಿಟ್ಟುಸಿರು ಬಿಟ್ಟಿದ್ದಾರೆ.

- Advertisement -

ಅಮೆರಿಕದ ಲಾಸ್ ಏಂಜಲೀಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಂಭವಿಸಬಹುದಾಗಿದ್ದ ಅಪಘಾತವು ಕೆಲವೇ ಸೆಕೆಂಡುಗಳ ಅಂತರದಲ್ಲಿ ತಪ್ಪಿದೆ. ಗೊನ್ಜಾಗಾ ವಿಶ್ವವಿದ್ಯಾಲಯದ ಬಾಸ್ಕೆಟ್‌ಬಾಲ್ ತಂಡವನ್ನು ಹೊತ್ತೊಯ್ಯುತ್ತಿದ್ದ ವಿಮಾನಕ್ಕೆ ಡೆಲ್ಟಾ ಏರ್‌ಲೈನ್ಸ್ ವಿಮಾನವು ಡಿಕ್ಕಿಯಾಗುವ ಸಂಭವವಿತ್ತು. ಏರ್ ಟ್ರಾಫಿಕ್ ಕಂಟ್ರೋಲರ್‌ಗಳು ತುರ್ತು ಸೂಚನೆಯೊಂದಿಗೆ ‘ಸ್ಟಾಪ್, ಸ್ಟಾಪ್, ಸ್ಟಾಪ್!’ ಎಂದು ಕರೆಕೊಟ್ಟಿದ್ದು, ಕೂಡಲೇ ಕ್ರೀಡಾಪಟುಗಳಿದ್ದ ವಿಮಾನವನ್ನು ನಿಲ್ಲಿಸಲಾಗಿದೆ. ಅಪಘಾತವನ್ನು ತಪ್ಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕ್ರೀಡಾಪಟುಗಳನ್ನು ಹೊತ್ತೊಯ್ಯುತ್ತಿದ್ದ ಗೊನ್ಜಾಗಾದ ‘ಚಾರ್ಟರ್ಡ್ ಕೀ ಲೈಮ್ ಏರ್ ಫ್ಲೈಟ್ 563’ ರನ್‌ವೇಗೆ ಅಡ್ಡಲಾಗಿ ಪ್ರವೇಶಿಸಿದೆ. ಅದೇ ವೇಳೆಗೆ ಅಟ್ಲಾಂಟಾಗೆ ಹೊರಟಿದ್ದ ಡೆಲ್ಟಾ ಏರ್‌ಲೈನ್ಸ್‌ನ ‘ಏರ್‌ಬಸ್ A321’ ವಿಮಾನ ಟೇಕ್‌ಆಫ್‌ ಆಗಲು ರನ್‌ವೇನಲ್ಲಿ ತೆರಳುತ್ತಿತ್ತು. ಕೂಡಲೇ ಏರ್‌ ಟ್ರಾಪಿಕ್ ಕಂಟ್ರೋಲರ್‌ಗಳು ತುರ್ತು ಸೂಚನೆ ನೀಡಿದ್ದು, ‘ಏರ್ ಫ್ಲೈಟ್ 563’ಅನ್ನು ತಕ್ಷಣ ನಿಲ್ಲಿಸಲಾಗಿದೆ.

ಘಟನೆಯ ವಿಡಿಯೋ ವೈರಲ್ ಆಗಿದೆ. ಡೆಲ್ಟಾ ವಿಮಾನವು ಆಕಾಶಕ್ಕೆ ಹಾರುವ ಕೆಲವೇ ಸೆಕೆಂಡುಗಳ ಮೊದಲು ಖಾಸಗಿ ಜೆಟ್ ಹಠಾತ್ತನೆ ರನ್‌ವೇಗೆ ಬರುತ್ತಿರುವುದು ಸೆರೆಯಾಗಿದೆ. ವಿಮಾನಯಾನದ ಅಧಿಕಾರಿಯೊಬ್ಬರು ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದು, “ನನ್ನ ಸುದೀರ್ಘ ವರ್ಷಗಳ ಕೆಲಸದಲ್ಲಿ, ವಿಮಾನಗಳನ್ನು ವೀಕ್ಷಿಸುವಾಗ ಏರ್ ಟ್ರಾಫಿಕ್ ಕಂಟ್ರೋಲರ್‌ಗಳು ‘ಸ್ಟಾಪ್, ಸ್ಟಾಪ್, ಸ್ಟಾಪ್’ ಎಂದು ಕೂಗುವುದನ್ನು ಈವರೆಗೆ ನಾನು ಕೇಳಿರಲಿಲ್ಲ. ಇದೇ ಮೊದಲು ಇಂತಹ ಘಟನೆ ನಡೆದಿದೆ” ಎಂದು ಹೇಳಿದ್ದಾರೆ.

ಫೆಡರಲ್ ಏವಿಯೇಷನ್ ​​​​ಅಡ್ಮಿನಿಸ್ಟ್ರೇಷನ್ (ಎಫ್‌ಎಎ) ಘಟನೆಯ ಬಗ್ಗೆ ತನಿಖೆ ಪ್ರಾರಂಭಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...