ಹಾರ್ಮುಜ್ ಜಲಸಂಧಿ: ಇರಾನ್–ಒಮಾನ್ ನಡುವೆ ನೂತನ ಹಡಗು ಸಂಚಾರ ಮಾರ್ಗಕ್ಕೆ ಅಂತಿಮ ಒಪ್ಪಂದ!

Date:

ಜಾಗತಿಕ ತೈಲ ಸಾಗಣೆಯ ಪ್ರಮುಖ ನೌಕಾ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸುರಕ್ಷಿತ ಸಂಚಾರಕ್ಕಾಗಿ ಹೊಸ ಪ್ರವೇಶ ಮತ್ತು ನಿರ್ಗಮನ ಮಾರ್ಗಗಳನ್ನು ನಿಗದಿಪಡಿಸಲು ಇರಾನ್ ಹಾಗೂ ಒಮಾನ್ ದೇಶಗಳು ಸುದೀರ್ಘ ಚರ್ಚೆಯ ನಂತರ ಅಂತಿಮ ಒಪ್ಪಂದಕ್ಕೆ ಬಂದಿವೆ.

- Advertisement -

ಇರಾನ್‌ನ ಸಂಧಾನ ತಂಡದ ನಿಕಟ ಮೂಲಗಳನ್ನು ಉಲ್ಲೇಖಿಸಿ ‘ತಸ್ನಿಮ್’ ಸುದ್ದಿ ಸಂಸ್ಥೆ ವರದಿ ಮಾಡಿದ್ದು, ತೀವ್ರ ಸ್ವರೂಪದ ತಾಂತ್ರಿಕ ಹಾಗೂ ರಾಜತಾಂತ್ರಿಕ ಮಾತುಕತೆಗಳ ನಂತರ ಈ ಸಮುದ್ರ ಮಾರ್ಗದ ಸ್ವರೂಪವನ್ನು ಅಂತಿಮಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನೂ ಓದಿ: ‘ಹಾರ್ಮುಜ್ ಜಲಸಂಧಿಗೆ ನನ್ನ ಹೆಸರಿಡಿ’; ಟ್ರಂಪ್ ಬೇಡಿಕೆ

ನೂತನ ವ್ಯವಸ್ಥೆಯ ಪ್ರಕಾರ, ಪರ್ಷಿಯನ್ ಗಲ್ಫ್‌ಗೆ ಪ್ರವೇಶಿಸುವ ಸಮುದ್ರ ಮಾರ್ಗವು ಸಂಪೂರ್ಣವಾಗಿ ಇರಾನ್‌ನ ಪ್ರಾದೇಶಿಕ ಜಲ ಗಡಿಯ ವ್ಯಾಪ್ತಿಯಲ್ಲೇ ಇರಲಿದೆ. ಜಲಸಂಧಿಯಿಂದ ಹೊರಹೋಗುವ ಮಾರ್ಗದ ಒಂದು ಭಾಗವೂ ಇರಾನ್ ಜಲ ಗಡಿಯ ವ್ಯಾಪ್ತಿಗೆ ಒಳಪಡಲಿದೆ.

ನೂತನ ವ್ಯವಸ್ಥೆಯು ಅನುಷ್ಠಾನಕ್ಕೆ ಬರುತ್ತಿದ್ದಂತೆ, ಹಳೆಯ ದಕ್ಷಿಣ ಮಾರ್ಗವನ್ನು ಮುಚ್ಚಲಾಗುತ್ತದೆ. ದಕ್ಷಿಣ ಮಾರ್ಗವನ್ನು ಮುಕ್ತವಾಗಿಡಬೇಕು ಎಂಬ ಅಮೆರಿಕದ ಒತ್ತಡವನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ.

ಹೊಸ ಸಂಚಾರ ಮಾರ್ಗವನ್ನು ನಿಗದಿಪಡಿಸಿರುವುದು ಎಂದರೆ ಹಾರ್ಮುಜ್ ಜಲಸಂಧಿಯನ್ನು ತಕ್ಷಣಕ್ಕೆ ಸಂಪೂರ್ಣವಾಗಿ ತೆರೆಯಲಾಗಿದೆ ಎಂದರ್ಥವಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಜಲಸಂಧಿಯ ಸಂಪೂರ್ಣ ಮರುಆರಂಭಕ್ಕೆ ಇರಾನ್ 7 ಷರತ್ತುಗಳನ್ನು ಅಮೆರಿಕದ ಮುಂದಿಟ್ಟಿದ್ದು, ಅಮೆರಿಕದ ಮುಂದಿನ ನಡವಳಿಕೆಯನ್ನು ಆಧರಿಸಿ ಜಲಸಂಧಿ ತೆರೆಯುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮೂಲಗಳು ಹೇಳಿವೆ.

ಮಸ್ಕತ್‌ನಲ್ಲಿ ನಡೆಯಲಿರುವ ಪ್ರಾದೇಶಿಕ ವಿದೇಶಾಂಗ ಸಚಿವರ ಸಭೆಯಲ್ಲಿ ಈ ಒಪ್ಪಂದದ ಅಂತಿಮ ಕರಾರಿಗೆ ಅಂಕಿತ ಬೀಳಲಿದ್ದು, ಬಳಿಕ ವಿವರಗಳನ್ನು ಅಂತರರಾಷ್ಟ್ರೀಯ ನೌಕಾಯಾನ ಸಂಸ್ಥೆಗೆ (IMO) ಸಲ್ಲಿಸಲಾಗುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...