ಕರ್ನಾಟಕ ಸಂಘ ಕತಾರ್ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ಸ್ವೀಕಾರ

Date:

ದೋಹಾ, ಕತಾರ್: ಕರ್ನಾಟಕ ಸಂಘ ಕತಾರ್‌ನ 2026–2028 ಅವಧಿಗೆ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ಸ್ವೀಕರಿಸಿದ್ದು, ಕತಾರ್‌ನ ಕನ್ನಡ ಸಮುದಾಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.

- Advertisement -

ಈ ಜವಾಬ್ದಾರಿಯನ್ನು ಅತ್ಯಂತ ನಮ್ರತೆ ಮತ್ತು ಬದ್ಧತೆಯಿಂದ ಸ್ವೀಕರಿಸಿರುವುದಾಗಿ ತಿಳಿಸಿ, ಸಮುದಾಯಕ್ಕೆ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ಗೌರವದ ಸಂಗತಿಯಾಗಿದೆ.ಮುಂದಿನ ಅವಧಿಯಲ್ಲಿ ಕನ್ನಡ ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವುದು, ಸಂಸ್ಕೃತಿಯನ್ನು ಉತ್ತೇಜಿಸುವುದು ಮತ್ತು ಎಲ್ಲರಿಗೂ ಅರ್ಥಪೂರ್ಣ ಅವಕಾಶಗಳನ್ನು ಸೃಷ್ಟಿಸುವುದು ತಮ್ಮ ಗುರಿಯಾಗಿದೆ ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

“ಒಗ್ಗಟ್ಟಿನಿಂದ ಮತ್ತು ಉದ್ದೇಶಪೂರ್ವಕವಾಗಿ ನಾವು ಮುಂದೆ ಸಾಗಿದರೆ, ಇನ್ನಷ್ಟು ಮೈಲಿಗಲ್ಲುಗಳನ್ನು ಸಾಧಿಸಬಹುದು,” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ನಿಕಟ ಪೂರ್ವ ಅಧ್ಯಕ್ಷರಾದ ರವಿ ಶೆಟ್ಟಿ ಹಾಗೂ ಆಡಳಿತ ಸಮಿತಿ (2024–2026) ಅವರ ಸೇವೆ ಮತ್ತು ಕೊಡುಗೆಗಳನ್ನು ಅವರು ಕೃತಜ್ಞತೆಯಿಂದ ಸ್ಮರಿಸಿದರು. ಅವರ ಶ್ರಮದಿಂದ ಸಂಘದ ಅಭಿವೃದ್ದಿಗೆ ಬಲವಾದ ಅಡಿಪಾಯ ನಿರ್ಮಾಣವಾಗಿದೆ ಎಂದು ಹೇಳಿದರು.

ಸಂಘದ ಎಲ್ಲಾ ಪೂರ್ವ ಅಧ್ಯಕ್ಷರಾದ ಸತೀಶ್ ದೇಶಪಾಂಡೆ, ನಾಗರಾಜ್, ಪ್ರಕಾಶ್ ಬಾಬು, ಕೆ. ಪ್ರಭಾಕರ್, ಅರವಿಂದ ಪಾಟೀಲ, ಅರುಣ್ ಕುಮಾರ್ ಕೆ.ಎಂ., ವಿ.ಎಸ್. ಮನ್ನಂಗಿ, ದೀಪಕ್ ಶೆಟ್ಟಿ, ಎಚ್.ಕೆ. ಮಧು, ವೆಂಕಟ್ ರಾವ್, ಮೈರ್ಪಾಡಿ ನಾಗೇಶ್ ರಾವ್, ಸಂಜಯ ಕುದರಿ, ಮಹೇಶ್ ಗೌಡ ಹಾಗೂ ರವಿ ಶೆಟ್ಟಿ ಅವರ ಸೇವೆಯನ್ನು ಅವರು ಸ್ಮರಿಸಿ ಪ್ರಶಂಸಿಸಿದರು.

ಸಂಘದ ಎಲ್ಲಾ ಸಮಿತಿ ಸದಸ್ಯರು, ಸಮುದಾಯ ಮುಖಂಡರು ಮತ್ತು ಸದಸ್ಯರ ನಿರಂತರ ಸೇವೆ ಹಾಗೂ ಸಮರ್ಪಣೆಯನ್ನು ಅವರು ಶ್ಲಾಘಿಸಿದರು.

ಕರ್ನಾಟಕ ಸಂಘ ಕತಾರ್ ಭಾರತೀಯ ರಾಯಭಾರ ಕಚೇರಿಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಹಾಯಕ ಸಂಸ್ಥೆಯಾಗಿದ್ದು, ಕತಾರ್‌ನ ಕನ್ನಡಿಗರ ಪ್ರಮುಖ ವೇದಿಕೆಯಾಗಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಪಿಐ ಪ್ರತಿಭಟನೆ

ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸುವ ಮೂಲಕ ಸಿಪಿಐ, ಮುಖ್ಯ ಚುನಾವಣಾ...

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ ಅಡ್ಡಿಯಾಗುತ್ತದೆ?

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ....

ಟಾಟಾ ಸಮೂಹ ನಾಶಕ್ಕೆ ಯತ್ನ; ಉದ್ಯಮಿಗಳ ಮೌನದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಟಾಟಾ ಸಮೂಹದಲ್ಲಿ ನಡೆಯುತ್ತಿರುವ ಆಂತರಿಕ ಬಿಕ್ಕಟ್ಟಿನ ಬೆನ್ನಲ್ಲೇ, ಉಪ್ಪಿನಿಂದ ಹಿಡಿದು ಸಾಫ್ಟ್‌ವೇರ್‌ವರೆಗೆ...

ನ.20ರಿಂದ ದೆಹಲಿಯಲ್ಲಿ SCO ಸಭೆ; ಹದಗೆಟ್ಟಿರುವ ಸಂಬಂಧದ ನಡುವೆಯೇ ಪಾಕ್‌ ಸಚಿವರಿಗೆ ಭಾರತದ ಆಹ್ವಾನ

ಆಪರೇಷನ್ ಸಿಂಧೂರ್ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಸೇನಾ ಸಂಘರ್ಷ...