ಪಾಕಿಸ್ತಾನದಲ್ಲಿಯೂ ಆತ್ಮಹತ್ಯಾ ದಾಳಿ; 12 ಮಂದಿ ಸಾವು

Date:

ದೆಹಲಿಯ ಕೆಂಪು ಕೋಟೆ ಕಾರು ಸ್ಪೋಟಗೊಂಡು 13 ಮಂದಿ ಸಾವನ್ನಪ್ಪಿದ್ದಾರೆ. ಇದನ್ನು ಆತ್ಮಹತ್ಯಾ ದಾಳಿ ಎಂದು ಹೇಳಲಾಗಿದ್ದು, ತನಿಖೆ ನಡೆಯುತ್ತಿದೆ. ಇಂಥಹದ್ದೇ ಘಟನೆ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿಯೂ ಮಂಗಳವಾರ ನಡೆದಿದೆ.

- Advertisement -

ಇಸ್ಲಾಮಾಬಾದ್‌ನ ಜಿ-11 ಪ್ರದೇಶದ ನ್ಯಾಯಾಲಯದ ಹೊರಗೆ ಆತ್ಮಹತ್ಯಾ ದಾಳಿ ನಡೆದಿದ್ದು, ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಕ್ಷಣಾ ಅಧಿಕಾರಿಗಳು 12 ಮೃತದೇಹಗಳನ್ನು ವಶಕ್ಕೆ ಪಡೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

“ಸ್ಫೋಟದಲ್ಲಿ ಸಾವನ್ನಪ್ಪಿದ 12 ಮಂದಿಯ ಶವಗಳನ್ನು ಪಿಮ್ಸ್ (ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆ) ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಗಾಯಾಳುಗಳನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಸರ್ಕಾರಿ ಮಾಧ್ಯಮ ‘ಪಾಕಿಸ್ತಾನ್ ಟೆಲಿವಿಷನ್’ (ಪಿಟಿವಿ) ವರದಿ ಮಾಡಿದೆ.

“ಇದು ಆತ್ಮಹತ್ಯಾ ಬಾಂಬ್ ದಾಳಿ ಎಂದು ಶಂಕಿಸಲಾಗಿದೆ. ಬಾಂಬರ್‌ನ ತಲೆ ರಸ್ತೆಯ ಮೇಲೆ ಬಿದ್ದಿರುವುದು ಕಂಡುಬಂದಿದೆ” ಎಂದು ಪಿಟಿವಿ ಹೇಳಿದೆ.

ಸ್ಫೋಟದ ಹೊಣೆಯನ್ನು ಯಾವುದೇ ಗುಂಪು ಅಥವಾ ವ್ಯಕ್ತಿ ಹೊತ್ತುಕೊಂಡಿಲ್ಲ. ಆದರೆ ಪಾಕಿಸ್ತಾನ ಮತ್ತು ಅಫ್ಘಾನ್ ತಾಲಿಬಾನ್ ನಡುವೆ ಸಂಘರ್ಷ ನಡೆಯುತ್ತಿದೆ. ಎರಡೂ ರಾಷ್ಟ್ರಗಳ ನಡುವೆ ಮೂರು ಸುತ್ತಿನ ಶಾಂತಿ ಮಾತುಕತೆಗಳು ನಡೆಯುತ್ತಿವೆ. ಆದರೆ, ಈವರೆಗೆ ಯಾವುದೇ ಒಪ್ಪಂದಕ್ಕೆ ಬರಲು ಸಾಧ್ಯವಾಗಿಲ್ಲ. ಇಂತಹ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...