ಇಮ್ರಾನ್ ಖಾನ್‌ರನ್ನು ಆಸ್ಪತ್ರೆಗೆ ಸ್ಥಳಾಂತರಿಸಿ: ಪಾಕ್‌ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

Date:

ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ, ಅವರನ್ನು ತಕ್ಷಣವೇ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಪಾಕಿಸ್ತಾನದ ಸುಪ್ರೀಂ ಕೋರ್ಟ್ ಮಂಗಳವಾರ ಸರ್ಕಾರಕ್ಕೆ ಆದೇಶಿಸಿದೆ. ಈ ಮೂಲಕ ಅವರ ಕುಟುಂಬಸ್ಥರು ಹಾಗೂ ‘ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್’ (ಪಿಟಿಐ) ಪಕ್ಷದ ದೀರ್ಘಕಾಲದ ಬೇಡಿಕೆಗೆ ನ್ಯಾಯಾಲಯ ಸಮ್ಮತಿ ಸೂಚಿಸಿದೆ.

- Advertisement -

​73 ವರ್ಷದ ಇಮ್ರಾನ್ ಖಾನ್ ಅವರನ್ನು ಮುಂದಿನ 48 ಗಂಟೆಗಳ ಒಳಗಾಗಿ ಇಸ್ಲಾಮಾಬಾದ್‌ನ ‘ಶಿಫಾ ಇಂಟರ್‌ನ್ಯಾಷನಲ್ ಹಾಸ್ಪಿಟಲ್’ಗೆ ದಾಖಲಿಸಬೇಕು ಮತ್ತು ಸೆಪ್ಟೆಂಬರ್ 16ರ ವರೆಗೆ ಆಸ್ಪತ್ರೆಯಲ್ಲೇ ಇರಿಸಿ ಸೂಕ್ತ ವೈದ್ಯಕೀಯ ನಿಗಾ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ ಎಂದು ಖಾನ್ ಅವರ ವಕ್ತಾರ ನಯೀಮ್ ಹೈದರ್ ಪಂಜುತಾ ತಿಳಿಸಿದ್ದಾರೆ. ಈ ಆದೇಶವನ್ನು ಸ್ವಾಗತಿಸಿರುವ ಪಿಟಿಐ ವಕ್ತಾರ ಜುಲ್ಫಿಕರ್ ಬುಖಾರಿ, “ಈ ಆದೇಶ ಇನ್ನಷ್ಟು ಮುಂಚಿತವಾಗಿಯೇ ಬರಬೇಕಿತ್ತು. ಇದರಿಂದ ಅವರ ಕಣ್ಣಿನ ದೃಷ್ಟಿ ಹಾಗೂ ಒಟ್ಟಾರೆ ಆರೋಗ್ಯ ಮತ್ತಷ್ಟು ಹದಗೆಡುವುದು ತಪ್ಪುತ್ತಿತ್ತು. ವೈದ್ಯರು ಸಂಪೂರ್ಣ ತೃಪ್ತಿ ವ್ಯಕ್ತಪಡಿಸುವವರೆಗೆ ಅವರು ಆಸ್ಪತ್ರೆಯಲ್ಲೇ ಮುಂದುವರಿಯಬೇಕು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

​ಇಮ್ರಾನ್ ಖಾನ್ ಅವರ ವೈದ್ಯಕೀಯ ವರದಿಗಳು ತೀವ್ರ ಆತಂಕಕಾರಿಯಾಗಿವೆ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಆರಿಫ್ ಆಲ್ವಿ ಕಳವಳ ವ್ಯಕ್ತಪಡಿಸಿದ್ದಾರೆ. ಜೈಲಿನಲ್ಲಿನ ನಿರಂತರ ಏಕಾಂತ ವಾಸದಿಂದಾಗಿ ಖಾನ್ ಅವರಲ್ಲಿ ತೀವ್ರ ಆತಂಕ (ಆ್ಯಂಕ್ಸೈಟಿ), ಅಧಿಕ ರಕ್ತದೊತ್ತಡ ಹಾಗೂ ಎದೆಬಡಿತದಲ್ಲಿ ವ್ಯತ್ಯಯಗಳು (ಪಾಲ್ಪೀಟೇಶನ್ಸ್) ಕಾಣಿಸಿಕೊಂಡಿವೆ. ಅವರ ಹೃದಯ ಬಡಿತದ ಮೇಲೆ ನಿಗಾ ಇಡಲು 24 ಗಂಟೆಗಳ ‘ಹೋಲ್ಟರ್ ಮಾನಿಟರ್’ ಪರೀಕ್ಷೆಯ ಅಗತ್ಯವಿದ್ದು, ಸ್ವತಂತ್ರ ವೈದ್ಯರ ತಂಡದ ಅಡಿಯಲ್ಲಿ ತಕ್ಷಣವೇ ಆಸ್ಪತ್ರೆ ವಾತಾವರಣದಲ್ಲಿ ಚಿಕಿತ್ಸೆ ನೀಡದಿದ್ದರೆ ಆರೋಗ್ಯಕ್ಕೆ ಸರಿಪಡಿಸಲಾಗದ ಹಾನಿಯಾಗುವ ಸಾಧ್ಯತೆಯಿದೆ ಎಂದು ಆಲ್ವಿ ಎಚ್ಚರಿಸಿದ್ದಾರೆ.

​ಕಳೆದ ಏಳು ತಿಂಗಳಿನಿಂದ ಕುಟುಂಬ ಸದಸ್ಯರು, ವಕೀಲರು ಅಥವಾ ವೈದ್ಯರಿಗೆ ಇಮ್ರಾನ್ ಅವರನ್ನು ಭೇಟಿ ಮಾಡಲು ಅನುಮತಿ ನೀಡಿರಲಿಲ್ಲ ಎಂದು ಅವರ ಪುತ್ರರಾದ ಸುಲೈಮಾನ್ ಖಾನ್ ಮತ್ತು ಖಾಸಿಮ್ ಖಾನ್ ಇತ್ತೀಚೆಗೆ ಆರೋಪಿಸಿದ್ದರು.

​2022ರಲ್ಲಿ ಅವಿಶ್ವಾಸ ನಿರ್ಣಯದ ಮೂಲಕ ಅಧಿಕಾರ ಕಳೆದುಕೊಂಡ ಬಳಿಕ, ಇಮ್ರಾನ್ ಖಾನ್ ವಿರುದ್ಧ ಸರ್ಕಾರಿ ಉಡುಗೊರೆಗಳ ದುರುಪಯೋಗ ಸೇರಿದಂತೆ ಹಲವು ರಾಜಕೀಯ ಪ್ರೇರಿತ ಮೊಕದ್ದಮೆಗಳನ್ನು ಹೂಡಲಾಗಿತ್ತು. ಈ ಹಿನ್ನೆಲೆಯಲ್ಲಿ ಆಗಸ್ಟ್ 2023ರಿಂದ ಅವರು ಜೈಲುವಾಸ ಅನುಭವಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು ಸಾಧ್ಯವೇ?

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ ಪಯಣ?

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ...

ಶಿರಹಟ್ಟಿ | ಸಮುದಾಯ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಐಇಸಿ ಸಂಯೋಜಕರ ಭೇಟಿ, ಪರಿಶೀಲನೆ

ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಕೋಗನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಮಡುವು...

ನೀವು ಆ ಕುರ್ಚಿಗೆ ಅರ್ಹರಲ್ಲ: ಸಿಜೆಐ ವಿರುದ್ಧ ಆಕ್ರೋಶಗೊಂಡ ವಕೀಲನಿಗೆ ಸುಪ್ರೀಂ ನ್ಯಾಯಾಂಗ ನಿಂದನೆ ನೋಟಿಸ್

ತೆರೆದ ನ್ಯಾಯಾಲಯದ ಕಲಾಪದ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್...