ಸ್ವಿಡ್ಜರ್‌ಲ್ಯಾಂಡ್‌ | ರೆಸಾರ್ಟ್‌ನಲ್ಲಿ ಭೀಕರ ಬೆಂಕಿ ಅವಘಡ; 40 ಮಂದಿ ಸಾವು

Date:

ಸ್ವಿಡ್ಜರ್‌ಲ್ಯಾಂಡ್‌ನ ಕ್ರಾನ್ಸ್-ಮೊಂಟಾನಾದ ಐಷಾರಾಮಿ ‘ಆಲ್ಪೈನ್ ಸ್ಕೀ ರೆಸಾರ್ಟ್’ ಬಾರ್‌ನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಸುಮಾರು 40 ಮಂದಿ ಸಾವನ್ನಪ್ಪಿದ್ದಾರೆ. 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

- Advertisement -

ಗುರುವಾರ, ಬಾರ್‌ನಲ್ಲಿ ಹೊಸ ವರ್ಷಾಚರಣೆ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ, ಸ್ಪೋಟ ಸಂಭವಿಸಿದ್ದು, ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ಸ್ವಿಸ್‌ ತಿಳಿಸಿದ್ದಾರೆ. ರಕ್ಷಣಾ ಮತ್ತು ತುರ್ತು ಕಾರ್ಯಾಚರಣೆಗಳು ನಡೆಯುತ್ತಿದ್ದು, ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ವಲಯವೆಂದು ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸುಮಾರು 10 ಹೆಲಿಕಾಪ್ಟರ್‌ಗಳು, 40 ಆಂಬ್ಯುಲೆನ್ಸ್‌ಗಳು ಹಾಗೂ 150 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಇಟಾಲಿಯನ್ ವಿದೇಶಾಂಗ ಸಚಿವಾಲಯವು, “ಸುಮಾರು 40 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಗಂಭೀರ ಸುಟ್ಟಗಾಯಗಳಿಂದಾಗಿ, ಮೃತರನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ. ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ” ಎಂದು ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.

“ಬೆಂಕಿಯನ್ನು ನಂದಿಸಲು ಸಿಬ್ಬಂದಿಗಳು ಯತ್ನಿಸುತ್ತಿದ್ದಾರೆ. ಯಾವುದೇ ದಾಳಿಯ ಶಂಕೆ ಇಲ್ಲ. ದುರ್ಘಟನೆಯು ಬಾರ್‌ನಲ್ಲಿ ಸಂಭವಿಸಿರುವ ಸ್ಪೋಟದಿಂದ ಘಟಿಸಿದೆ. ಇದನ್ನು ಭಯೋತ್ಪಾದಕ ದಾಳಿಯೆಂದು ಪರಿಗಣಿಸಲಾಗಿಲ್ಲ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರಿ ವೇಳೆಯಲ್ಲೂ ರವಿ; ಸೂರ್ಯನ ಬೆಳಕು ಮಾರಾಟ ಮಾಡಲು ಅಮೆರಿಕ-ಭಾರತ ಸಹಭಾಗಿತ್ವ: ಏನಿದು ಯೋಜನೆ?

ವಿಜ್ಞಾನ ಕಲ್ಪನೆಗಳಿಗಿಂತಲೂ ಮಿಗಿಲಾದ ಅಪರೂಪದ ಯೋಜನೆಯೊಂದು ಈಗ ಜಾಗತಿಕ ಇಂಧನ ಕ್ಷೇತ್ರದಲ್ಲಿ...

ಸೌದಿ ಅರಾಮ್ಕೊ ಪ್ರಧಾನ ಕಚೇರಿ ಮೇಲೆ ದಾಳಿ: ಮತ್ತೆ ಪುಟಿದೆದ್ದರೇ ಹೂತಿ ಬಂಡುಕೋರರು?

ಯೆಮನ್‌ನ ಹೂತಿ ಬಂಡುಕೋರರು ಸೌದಿ ಅರೇಬಿಯಾದ ಧಹ್ರಾನ್‌ನಲ್ಲಿರುವ ತೈಲ ದೈತ್ಯ ಕಂಪನಿ...

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...