ಸಿರಿಯಾ ಅಧ್ಯಕ್ಷ ಪ್ರಯಾಣಿಸುತ್ತಿದ್ದ ವಿಮಾನ ಪತನ ಶಂಕೆ; ಮೃತಪಟ್ಟಿರುವ ಸಾಧ್ಯತೆ?

Date:

ಸಿರಿಯಾ ಅಧ್ಯಕ್ಷ ಬಶರ್ ಅಲ್ ಅಸ್ಸಾದ್ ಅವರು ಡಮಾಸ್ಕಸ್‌ನಿಂದ ಪಲಾಯನ ಮಾಡಲು ಯತ್ನಸಿದ್ದು, ಅವರ ವಿಮಾನವು ಪತನವಾಗಿದೆ ಎಂದು ಹೇಳಲಾಗುತ್ತಿದೆ. ಅಸ್ಸಾದ್ ಅವರು ಬದುಕಿದ್ದಾರೆಯೇ ಅಥವಾ ಮೃತಪಟ್ಟಿದ್ದಾರೆಯೇ ಎಂಬ ಬಗ್ಗೆ ಆಂತಕ ವ್ಯಕ್ತವಾಗಿದೆ.

- Advertisement -

ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿರಬಹುದು ಅಥವಾ ವಿಮಾನವನ್ನು ಹೊಡೆದು ಉರುಳಿಸಿರಬಹುದು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಬಂಡುಕೋರರು ಸಿರಿಯಾ ರಾಜಧಾನಿ ಡಮಾಸ್ಕಸ್‌ಅನ್ನು ವಶಕ್ಕೆ ಪಡೆದಿದ್ದಾರೆ. ಹೀಗಾಗಿ, ಸಿರಿಯಾ ಅಧ್ಯಕ್ಷ ಅಸ್ಸಾದ್ ಅವರು ಡಮಾಸ್ಕಸ್‌ನಿಂದ ಪಲಾಯನ ಮಾಡಲು ಮುಂದಾಗಿದ್ದರು. ಅವರ ಪ್ರಯಾಣಿಸುತ್ತಿದ್ದ ಸಿರಿಯನ್ ಏರ್ ವಿಮಾನವು ಡಮಾಸ್ಕಸ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿದ್ದು, ಆರಂಭದಲ್ಲಿ ಸಿರಿಯಾದ ಕರಾವಳಿ ಪ್ರದೇಶದ ಕಡೆಗೆ ಹೋಗುತ್ತಿತ್ತು. ಆದರೆ, ಹಠಾತ್ತನೆ ಮಾರ್ಗವನ್ನು ಬದಲಾಯಿಸಿದೆ. ಹೋಮ್ಸ್ ನಗರದ ಬಳಿ ಕಣ್ಮರೆಯಾಗಿದೆ” ಎಂದು Flightradar24.com ವರದಿ ಮಾಡಿದೆ.

ಈ ಬೆಳವಣಿಗೆಯು ವಿಮಾನವು ಪತನವಾಗಿದೆಯೇ? ಅಥವಾ ಹೊಡೆದುರುಳಿಸಲಾಗಿದೆಯೇ? ಅಸ್ಸಾದ್ ಅವರ ಬದುಕಿದ್ದಾರೆಯೇ, ಇಲ್ಲವೇ ಎಂಬ ಅನುಮಾನಗಳನ್ನು ಹುಟ್ಟುಹಾಕಿದೆ. ಹಲವಾರು ವದಂತಿಗಳು ಹರಿದಾಡುತ್ತಿವೆ. ಆದರೆ, ಸಿರಿಯಾದ ಅಧಿಕಾರಿಗಳು ಈ ಬಗ್ಗೆ ಯಾವುದೇ ರೀತಿಯ ಸ್ಪಷ್ಟನೆಯನ್ನು ನೀಡಿಲ್ಲ.

ಅಸ್ಸಾದ್ ಮೃತಪಟ್ಟಿರುವ ಸಾಧ್ಯತೆ ಹೆಚ್ಚಿದೆ ಎಂದು ಸಿರಿಯನ್ ಮೂಲಗಳು ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಈ ನಡುವೆ ಅಸ್ಸಾದ್ ಪ್ರಯಾಣಿಸುತ್ತಿದ್ದ ವಿಮಾನ ಪತನಗೊಂಡಿರುವ ದೃಶ್ಯವೆಂದು ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹಡಿದಾಡುತ್ತಿವೆ. ಆದರೆ, ಅಸ್ಸಾದ್ ಪ್ರಯಾಣಿಸುತ್ತಿದ್ದ ವಿಮಾನ ತಪನಗೊಂಡಿರುವ ಬಗ್ಗೆ ಇನ್ನೂ ಖಾತ್ರಿಯಾಗಿಲ್ಲ. ಆ ಘಟನೆಯ ಯಾವುದೇ ವಿಡಿಯೋಗಳು ದೊರೆತಿಲ್ಲ ಎಂದು ಫ್ಯಾಕ್ಟ್‌ಚೆಕ್‌ ಸಂಸ್ಥೆಗಳು ವರದಿ ಮಾಡಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...