ತೈವಾನ್‌ | 25 ವರ್ಷಗಳಲ್ಲೇ ಅತ್ಯಂತ ಪ್ರಬಲ ಭೂಕಂಪ; ನಾಲ್ವರು ಸಾವು, ಸುನಾಮಿ ಎಚ್ಚರಿಕೆ

Date:

ತೈವಾನ್‌ನಲ್ಲಿ ಬುಧವಾರ 7.2 ತೀವ್ರತೆಯ ಭೂಕಂಪ ಸಂಭವಿಸಿದ್ದು ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ. 25 ವರ್ಷಗಳಲ್ಲೇ ಅತ್ಯಂತ ಪ್ರಬಲ ಭೂಕಂಪ ಇದಾಗಿದ್ದು ಕಟ್ಟಡಗಳ ಅಡಿಪಾಯ ಅಲ್ಲಾಡಿದೆ, ಕೆಲವು ಕಟ್ಟಡಗಳು ಕುಸಿದಿದೆ. ದಕ್ಷಿಣ ಜಪಾನ್ ಮತ್ತು ಫಿಲಿಪೈನ್ಸ್ ದ್ವೀಪಗಳಿಗೆ ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ.

- Advertisement -

ಕೆಲವು ಜನರು ಭೂಕಂಪದಿಂದಾಗಿ ಕಟ್ಟದಲ್ಲಿಯೇ ಸಿಲುಕಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ. ನಾಲ್ವರು ಸಾವನ್ನಪ್ಪಿದ್ದು, ಸುಮಾರು 60ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದೆ ಎಂದು ವರದಿಯಾಗಿದೆ. ಇನ್ನು ಜಪಾನ್‌ನ ಹವಾಮಾನ ಸಂಸ್ಥೆಯು ಸಣ್ಣ ಸುನಾಮಿ ಅಲೆಗಳು ಓಕಿನಾವಾದ ದಕ್ಷಿಣ ಪ್ರಾಂತ್ಯದ ಭಾಗಗಳನ್ನು ತಲುಪಿದೆ ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ?  ಮಹಾರಾಷ್ಟ್ರ, ಅರುಣಾಚಲ ಪ್ರದೇಶದಲ್ಲಿ ಎರಡು ಬಾರಿ ಭೂಕಂಪ

ತೈವಾನ್ ಸಮಯ 10:14 ರ ಸುಮಾರಿಗೆ ಅಧಿಕಾರಿಗಳು ನಾಗರಿಕರಿಗೆ ತುರ್ತು ಸಂದೇಶ ಕಳುಹಿಸಿದ್ದಾರೆ. “ಭೂಕಂಪದಿಂದ ಉಂಟಾದ ಸುನಾಮಿ ಕ್ರಮೇಣ ತೈವಾನ್ ಕರಾವಳಿಯನ್ನು ತಲುಪಿದೆ” ಎಂದು ಈ ಸಂದೇಶವು ಹೇಳಿದೆ.

” ಕರಾವಳಿ ಪ್ರದೇಶಗಳಲ್ಲಿನ ಜನರು ಜಾಗರೂಕರಾಗಿರಲು ಮತ್ತು ಕಟ್ಟುನಿಟ್ಟಾದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಿ. ಸುನಾಮಿ ಅಲೆ ದಿಢೀರ್ ಎದ್ದರೆ ಉಂಟಾಗುವ ಅಪಾಯಗಳ ಬಗ್ಗೆ ಗಮನವಿರಲಿ” ಎಂದು ಎಚ್ಚರಿಕೆ ಸಂದೇಶದಲ್ಲಿ ತಿಳಿಸಲಾಗಿದೆ.

ಫಿಲಿಪೈನ್ಸ್ ಭೂಕಂಪನ ಏಜೆನ್ಸಿಯು ಹಲವಾರು ಪ್ರಾಂತ್ಯಗಳ ಕರಾವಳಿ ಪ್ರದೇಶಗಳಲ್ಲಿನ ನಿವಾಸಿಗಳಿಗೆ ಎಚ್ಚರಿಕೆಯನ್ನು ನೀಡಿದೆ. ಎತ್ತರದ ಪ್ರದೇಶಕ್ಕೆ ಸ್ಥಳಾಂತರವಾಗುವಂತೆ ತಿಳಿಸಿದೆ. ಇನ್ನು ಶಾಂಘೈನಲ್ಲಿ ಭೂಕಂಪದ ಅನುಭವವಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಇನ್ನು ತೈಪೆ ನಗರ ಸರ್ಕಾರವು ಹಾನಿಯ ಯಾವುದೇ ವರದಿಯಾಗಿಲ್ಲ ಎಂದಿದೆ. ಆದರೆ ವಿದ್ಯುತ್ ಆಪರೇಟರ್ ತೈಪವರ್ ತೈವಾನ್‌ನಲ್ಲಿ ಇನ್ನೂ 87,000 ಕ್ಕೂ ಹೆಚ್ಚು ಮನೆಗಳಲ್ಲಿ ವಿದ್ಯುತ್ ಇಲ್ಲ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...