ಕಾಶ್ಮೀರ ಉಗ್ರರ ದಾಳಿಯನ್ನು ಖಂಡಿಸಿದ ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ

Date:

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ವಿಶ್ವದ ಹಲವು ದೇಶಗಳು ಖಂಡಿಸಿವೆ. ಭಯೋತ್ಪಾದಕ ಘಟನೆ ಮತ್ತು ಅಮಾಯಕ ಜನರ ಸಾವಿನ ಬಗ್ಗೆ ಅಮೆರಿಕ, ಚೀನಾ ಮತ್ತು ಬ್ರಿಟನ್ ಸೇರಿದಂತೆ ಹಲವಾರು ದೇಶಗಳು ದುಃಖ ವ್ಯಕ್ತಪಡಿಸಿವೆ. ಅದೇ ಸಮಯದಲ್ಲಿ, ಈಗ ಅಫ್ಘಾನಿಸ್ತಾನದಲ್ಲಿ ಅಧಿಕಾರದಲ್ಲಿರುವ ತಾಲಿಬಾನ್‌ ಸರ್ಕಾರ ಕೂಡ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ಘಟನೆಯನ್ನು ಖಂಡಿಸಿದೆ.

- Advertisement -

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ಘಟನೆಗೆ ಸಂಬಂಧಿಸಿದಂತೆ ಅಫ್ಘಾನಿಸ್ತಾನ ವಿದೇಶಾಂಗ ಸಚಿವಾಲಯದ ವಕ್ತಾರ ಅಬ್ದುಲ್ ಕಹಾರ್ ಬಾಲ್ಖಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. “ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿಯನ್ನು ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್‌ನ ವಿದೇಶಾಂಗ ಸಚಿವಾಲಯ ಬಲವಾಗಿ ಖಂಡಿಸುತ್ತದೆ ಮತ್ತು ಮೃತ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸುತ್ತದೆ. ಇಂತಹ ಘಟನೆಗಳು ಪ್ರಾದೇಶಿಕ ಭದ್ರತೆ ಮತ್ತು ಸ್ಥಿರತೆಯನ್ನು ಖಚಿತಪಡಿಸಿಕೊಳ್ಳುವ ಪ್ರಯತ್ನಗಳನ್ನು ನಾಶಗೊಳಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸುದ್ದಿ ಓದಿದ್ದೀರಾ? ಉಗ್ರನ ರೈಫಲ್‌ ಕಸಿದುಕೊಳ್ಳಲು ಹೋಗಿ ಗುಂಡೇಟಿಗೆ ಸಾವಿಗೀಡಾದ ಕುದುರೆ ರೈಡರ್‌ ಸೈಯದ್ ಹುಸೇನ್

ಪಹಲ್ಗಾಮ್‌ನಲ್ಲಿ ಪಾಕಿಸ್ತಾನಿ ಭಯೋತ್ಪಾದಕರ ದಾಳಿಯ ನಂತರ ಕೇಂದ್ರ ಸರ್ಕಾರ ಪಾಕ್‌ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಸಿಂಧೂ ನದಿ ನೀರು ಒಪ್ಪಂದವನ್ನು ತಡೆಹಿಡಿಯಲಾಗಿದೆ. ಅಟಾರಿ ಗಡಿಯಲ್ಲಿರುವ ಸಮಗ್ರ ಚೆಕ್ ಪೋಸ್ಟ್ ಮುಚ್ಚುವಿಗೆ ಮತ್ತು ರಾಯಭಾರ ಕಚೇರಿಗಳ ಒಟ್ಟಾರೆ ಸಿಬ್ಬಂದಿ ಸಂಖ್ಯೆಯನ್ನು ಕಡಿತಗೊಳಿಸಲು ನಿರ್ಧರಿಸಲಾಗಿದೆ.

ಇದರೊಂದಿಗೆ, ಪಾಕಿಸ್ತಾನಿ ನಾಗರಿಕರು 48 ಗಂಟೆಗಳ ಒಳಗೆ ಭಾರತವನ್ನು ತೊರೆಯುವಂತೆ ಆದೇಶಿಸಲಾಗಿದೆ. ಹಾಗೆಯೇ ಪಾಕಿಸ್ತಾನಿ ನಾಗರಿಕರ ವೀಸಾಗಳನ್ನು ನಿಲ್ಲಿಸಲಾಗಿದೆ. ಇದಲ್ಲದೆ, ರಾಯಭಾರಿ ಕಚೇರಿಯಲ್ಲಿರುವ ಉದ್ಯೋಗಿಗಳ ಸಂಖ್ಯೆಯನ್ನು 55 ರಿಂದ 30 ಕ್ಕೆ ಇಳಿಸಲಾಗಿದ್ದು, ಈ ನಿರ್ಧಾರವು ಮೇ 1 ರಿಂದ ಜಾರಿಗೆ ಬರಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...