ಇರಾನ್‌ನಿಂದ ತೈಲ ಆಮದು ಆರೋಪ: ಭಾರತದ ಆರು ಕಂಪನಿಗಳ ಸೇರಿ 20 ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ

Date:

ಇರಾನ್‌ನಿಂದ ತೈಲ ಮತ್ತು ಪೆಟ್ರೋಕೆಮಿಕಲ್ ಉತ್ಪನ್ನಗಳ ಖರೀದಿಯ ಆರೋಪದ ಮೇಲೆ ಭಾರತದ ಆರು ಕಂಪನಿಗಳು ಸೇರಿದಂತೆ ವಿಶ್ವಾದ್ಯಂತ 20 ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧಗಳನ್ನು ವಿಧಿಸಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

- Advertisement -

ಇರಾನ್‌ ಮೇಲೆ ವಿಧಿಸಲಾಗಿರುವ ಅಮೆರಿಕದ ನಿರ್ಬಂಧಗಳನ್ನು ಉಲ್ಲಂಘಿಸಿ ಈ ಕಂಪನಿಗಳು ಪೆಟ್ರೋಲಿಯಂ ಉತ್ಪನ್ನಗಳ ಖರೀದಿ ಮತ್ತು ವಹಿವಾಟು ನಡೆಸಿವೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ನಿರ್ಬಂಧಕ್ಕೊಳಗಾದ ಭಾರತೀಯ ಕಂಪನಿಗಳೆಂದರೆ ಆಲ್ಕೆಮಿಕಲ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್, ಗ್ಲೋಬಲ್ ಇಂಡಸ್ಟ್ರಿಯಲ್ ಕೆಮಿಕಲ್ಸ್ ಲಿಮಿಟೆಡ್, ಜುಪಿಟರ್ ಡೈ ಕೆಮ್ ಪ್ರೈವೇಟ್ ಲಿಮಿಟೆಡ್, ರಾಮ್ನಿಕ್ಲಾಲ್ ಎಸ್ ಗೊಸಾಲಿಯಾ, ಪರ್ಸಿಸ್ಟೆಂಟ್ ಪೆಟ್ರೋಕೆಮ್ ಪ್ರೈವೇಟ್ ಲಿಮಿಟೆಡ್ ಮತ್ತು ಕಾಂಚನ್ ಪಾಲಿಮರ್ಸ್.

ಆಲ್ಕೆಮಿಕಲ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ 2024ರ ಜನವರಿಯಿಂದ ಡಿಸೆಂಬರ್‌ವರೆಗೆ 84 ಮಿಲಿಯನ್ ಡಾಲರ್‌ಗಿಂತಲೂ ( 736 ಕೋಟಿ ರೂ.) ಹೆಚ್ಚು ಮೌಲ್ಯದ ಇರಾನ್‌ನ ಪೆಟ್ರೋಕೆಮಿಕಲ್ ಉತ್ಪನ್ನಗಳನ್ನು ಆಮದು ಮಾಡಿಕೊಂಡಿದೆ ಎಂದು ಆರೋಪಿಸಲಾಗಿದೆ. ಗ್ಲೋಬಲ್ ಇಂಡಸ್ಟ್ರಿಯಲ್ ಕೆಮಿಕಲ್ಸ್ ಲಿಮಿಟೆಡ್ 2024-2025ರ ಅವಧಿಯಲ್ಲಿ 51 ಮಿಲಿಯನ್ ಡಾಲರ್ (446 ಕೋಟಿ ರೂ.) ಮೌಲ್ಯದ ಮೆಥನಾಲ್ ಸೇರಿದಂತೆ ಇರಾನ್‌ನ ಉತ್ಪನ್ನಗಳನ್ನು ಖರೀದಿಸಿದೆ. ಜುಪಿಟರ್ ಡೈ ಕೆಮ್ ಪ್ರೈವೇಟ್ ಲಿಮಿಟೆಡ್ 49 ಮಿಲಿಯನ್ ಡಾಲರ್ (429 ಕೋಟಿ ರೂ.) ಮೌಲ್ಯದ ಟೊಲ್ಯೂನ್ ಸೇರಿದಂತೆ ಇರಾನಿನ ಉತ್ಪನ್ನಗಳನ್ನು ಆಮದು ಮಾಡಿಕೊಂಡಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾನವೀಯತೆಯ ಪಸೆ ಉಳಿದಿದೆಯೇ ತುಸುವಾದರೂ?

ರಾಮ್ನಿಕ್ಲಾಲ್ ಎಸ್ ಗೊಸಾಲಿಯಾ 22 ಮಿಲಿಯನ್ ಡಾಲರ್ ( 192 ಕೋಟಿ ರೂ.) ಮೌಲ್ಯದ ಮೆಥನಾಲ್ ಮತ್ತು ಟೊಲ್ಯೂನ್ ಖರೀದಿಸಿದೆ. ಪರ್ಸಿಸ್ಟೆಂಟ್ ಪೆಟ್ರೋಕೆಮ್ ಪ್ರೈವೇಟ್ ಲಿಮಿಟೆಡ್ 2024ರ ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೆ 14 ಮಿಲಿಯನ್ ಡಾಲರ್ ( 122 ಕೋಟಿ ರೂ.) ಮೌಲ್ಯದ ಮೆಥನಾಲ್ ಆಮದು ಮಾಡಿಕೊಂಡಿದೆ. ಕಾಂಚನ್ ಪಾಲಿಮರ್ಸ್ 1.3 ಮಿಲಿಯನ್ ಡಾಲರ್ (11 ಕೋಟಿ ರೂ.) ಮೌಲ್ಯದ ಇರಾನಿನ ಪಾಲಿಥಿಲೀನ್ ಉತ್ಪನ್ನಗಳನ್ನು ಖರೀದಿಸಿದೆ ಎಂದು ಆರೋಪಿಸಲಾಗಿದೆ.

ಭಾರತವು ಇರಾನ್‌ನೊಂದಿಗೆ ದೀರ್ಘಕಾಲೀನ ವ್ಯಾಪಾರ ಸಂಬಂಧವನ್ನು ಹೊಂದಿದೆ. ಆದರೆ, 2019ರಿಂದ ಅಮೆರಿಕದ ನಿರ್ಬಂಧಗಳಿಂದಾಗಿ ಇರಾನ್‌ನಿಂದ ತೈಲ ಆಮದು ಗಣನೀಯವಾಗಿ ಕಡಿಮೆಯಾಗಿದೆ. ಮೇ 2025ರಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ನಿಂದ ತೈಲ ಮತ್ತು ಪೆಟ್ರೋಕೆಮಿಕಲ್ ಉತ್ಪನ್ನಗಳ ಖರೀದಿಯನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ಎಚ್ಚರಿಕೆ ನೀಡಿದ್ದರು. ಈ ನಿರ್ಬಂಧಗಳನ್ನು ಉಲ್ಲಂಘಿಸುವ ದೇಶಗಳು ಅಥವಾ ಕಂಪನಿಗಳ ಮೇಲೆ ಕಠಿಣ ಕ್ರಮಕ್ಕೆ ಎಚ್ಚರಿಕೆ ನೀಡಲಾಗಿತ್ತು.

ಭಾರತದ ಜೊತೆಗೆ ಟರ್ಕಿ, ಯುಎಇ, ಚೀನಾ ಮತ್ತು ಇಂಡೋನೇಷ್ಯಾದ ಕಂಪನಿಗಳ ಮೇಲೂ ಅಮೆರಿಕ ನಿರ್ಬಂಧ ವಿಧಿಸಿದೆ. ಇರಾನ್‌ನ ಆರ್ಥಿಕ ಕಾರ್ಯಚಟುವಟಿಕೆಗಳನ್ನು ನಿಯಂತ್ರಿಸುವ ಅಮೆರಿಕದ ಒತ್ತಡದ ಭಾಗವಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ. ನಿರ್ಬಂಧಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರದಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...