‘ಅವರು ಸಹ ಭಾರತದಂತೆ ಶತ್ರುಗಳು’: 90 ಮಂದಿ ಪಿಒಕೆ ಪ್ರತಿಭಟನಾಕಾರರ ಹತ್ಯೆ ಸಮರ್ಥಿಸಿದ ಪಾಕ್ ಸಚಿವ

Date:

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ನಡೆಯುತ್ತಿರುವ ಪ್ರತಿಭಟನೆಗಳನ್ನು ಹತ್ತಿಕ್ಕಲು ಪಾಕಿಸ್ತಾನ ಸರ್ಕಾರವು ಹಿಂಸಾತ್ಮಕ ಮಾರ್ಗ ಹಿಡಿದಿರುವ ಬೆನ್ನಲ್ಲೇ, ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್ ಪ್ರತಿಭಟನಾಕಾರರನ್ನು ‘ಭಾರತದಂತಹ ಶತ್ರುಗಳು’ ಎಂದು ಕರೆದು ವಿವಾದ ಸೃಷ್ಟಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ ಪಿಒಕೆಯ ರಾವಲಕೋಟ್ ಪ್ರದೇಶದಲ್ಲಿ ಪಾಕಿಸ್ತಾನಿ ಪಡೆಗಳು ಕನಿಷ್ಠ 32 ಕಾಶ್ಮೀರಿ ಪ್ರತಿಭಟನಾಕಾರರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆಯ ನಡುವೆಯೇ ಈ ಹೇಳಿಕೆ ಹೊರಬಿದ್ದಿದೆ. “ನಾನು ಆಜಾದ್ ಕಾಶ್ಮೀರದ ಪ್ರತಿಭಟನಾಕಾರರನ್ನು ಭಾರತದ ವರ್ಗದಲ್ಲೇ ಇರಿಸುತ್ತೇನೆ ಮತ್ತು ಅವರನ್ನು ಭಾರತದಂತೆಯೇ ಶತ್ರುಗಳು ಎಂದು ಪರಿಗಣಿಸುತ್ತೇನೆ” ಎಂದು ಅವರು ಹೇಳಿರುವ ವಿಡಿಯೊ ‘ಎಕ್ಸ್’ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -

ಜೂನ್ 5 ರಿಂದ ಪಿಒಕೆಯಲ್ಲಿ ಭುಗಿಲೆದ್ದಿರುವ ಅಶಾಂತಿ ಮತ್ತು ಪ್ರತಿಭಟನೆಗಳಲ್ಲಿ ಈವರೆಗೆ 90ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೀರ್‌ಪುರ್ ನಗರದಲ್ಲಿ ಪಾಕಿಸ್ತಾನಿ ಭದ್ರತಾ ಸಿಬ್ಬಂದಿಯು ನಾಗರಿಕರ ಮೇಲೆ ಬಹಿರಂಗವಾಗಿ ಗುಂಡು ಹಾರಿಸುತ್ತಿರುವ ಮತ್ತು ಆನಂತರ ಮೃತದೇಹಗಳನ್ನು ತಮ್ಮ ವಾಹನಗಳಿಗೆ ತುಂಬುತ್ತಿರುವ ಹಲವು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರಸ್ತೆಗಳಲ್ಲಿ ಮೃತದೇಹಗಳು ಮತ್ತು ಬಿದ್ದಿರುವ ಬೈಕ್‌ಗಳ ದೃಶ್ಯಗಳು ಪಾಕ್ ಪಡೆಗಳ ದೌರ್ಜನ್ಯಕ್ಕೆ ಸಾಕ್ಷಿಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಈ ಗುಂಡಿನ ದಾಳಿಯಲ್ಲಿ ಮೃತಪಟ್ಟವರಲ್ಲಿ ಹೆಚ್ಚಿನವರು ‘ಜಾಯಿಂಟ್ ಅವಾಮಿ ಆಕ್ಷನ್ ಕಮಿಟಿ’ (ಜೆಎಎಸಿ) ಸಂಘಟನೆಗೆ ಸೇರಿದ ಕಾರ್ಯಕರ್ತರಾಗಿದ್ದಾರೆ. ಈ ಪ್ರದೇಶದಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಪ್ರಶ್ನಿಸಿದ್ದಕ್ಕಾಗಿ ಇಸ್ಲಾಮಾಬಾದ್ ಈ ಸಂಘಟನೆಯನ್ನು ನಿಷೇಧಿಸಿದೆ. ಭದ್ರತಾ ಪಡೆಗಳ ಗುಂಡೇಟಿಗೆ ಬಲಿಯಾದವರಲ್ಲಿ ಜೆಎಎಸಿ ಸ್ಥಾಪಕ ಸದಸ್ಯ ಉಮರ್ ನಜೀರ್ ಅವರ ಕಿರಿಯ ಸಹೋದರ ಉಸ್ಮಾನ್ ನಜೀರ್ ಕೂಡ ಸೇರಿದ್ದಾರೆ. ಮಾನವ ಹಕ್ಕುಗಳ ಉಲ್ಲಂಘನೆ ಖಂಡಿಸಿ ಅಪಾರ ಸಂಖ್ಯೆಯಲ್ಲಿ ಸ್ಥಳೀಯರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.

“ಮೀರ್‌ಪುರದಲ್ಲಿ ಸಾರ್ವಜನಿಕರಾದ ಐವರನ್ನು ಬಲಿದಾನ ಮಾಡಲಾಗಿದೆ. ರಾವಲಕೋಟ್‌ನಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನಗೊಂಡಿದ್ದು, ಶಾಂತಿಯುತ ಸಾರ್ವಜನಿಕರ ಮೇಲೆ ಭದ್ರತಾ ಪಡೆಗಳು ಶೆಲ್ ದಾಳಿ ಮತ್ತು ಗುಂಡಿನ ದಾಳಿ ನಡೆಸುತ್ತಿವೆ” ಎಂದು ಜೆಎಎಸಿ ತನ್ನ ಸಾಮಾಜಿಕ ಜಾಲತಾಣದಲ್ಲಿ ಆರೋಪಿಸಿದೆ. ಮೀರ್‌ಪುರ್ ಅವಾಮಿ ಆಕ್ಷನ್ ಕಮಿಟಿಯ ಯುವ ಸದಸ್ಯರನ್ನೇ ಗುರಿಯಾಗಿಸಿ ಪಾಕಿಸ್ತಾನಿ ಪೊಲೀಸರು ದಾಳಿ ನಡೆಸುತ್ತಿದ್ದಾರೆ ಎಂದು ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಜೆಎಎಸಿ ಕಾರ್ಯಕರ್ತರು ರಾವಲಕೋಟ್‌ಗೆ ಬಲವಂತವಾಗಿ ಪ್ರವೇಶಿಸಲು ಯತ್ನಿಸುತ್ತಿದ್ದಾರೆ ಎಂಬ ಪಾಕಿಸ್ತಾನಿ ಮಾಧ್ಯಮಗಳ ವರದಿಯನ್ನು ಸಮಿತಿ ತೀವ್ರವಾಗಿ ಖಂಡಿಸಿದೆ. “ನಾವು ಯಾರ ಮನೆಗೂ ಅಕ್ರಮವಾಗಿ ನುಗ್ಗಿಲ್ಲ. ರಾವಲಕೋಟ್ ನಮ್ಮ ನಗರ, ಅದನ್ನು ನೀವು ಅಕ್ರಮವಾಗಿ ಮತ್ತು ಬಲವಂತವಾಗಿ ವಶಪಡಿಸಿಕೊಂಡಿದ್ದೀರಿ. ಶಾಂತಿಯುತ, ನಿರಸ್ತ್ರ ನಾಗರಿಕರ ಮೇಲೆ ಗುಂಡು ಹಾರಿಸಿ ಲೆಕ್ಕವಿಲ್ಲದಷ್ಟು ಜನರನ್ನು ಬಲಿ ಪಡೆದಿದ್ದೀರಿ” ಎಂದು ಪಾಕ್ ಸರ್ಕಾರದ ವಿರುದ್ಧ ಜೆಎಎಸಿ ಕಿಡಿಕಾರಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು...

ಹೊಸನಗರ | ರೂ. 4 ಲಕ್ಷ ಮೌಲ್ಯದ ಸಾಗುವಾನಿ ನಾಟ ವಶ!

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಂದೂರು ಗ್ರಾಮದಲ್ಲಿ...

ಯುಪಿ | ಬ್ರಿಜ್ ಭೂಷಣ್‌ಗೆ ಬಿಜೆಪಿ ಮತ್ತೆ ಮಣೆ; ಚುನಾವಣೆಗೆ ಮುನ್ನ ಟಾಪ್ ಟೀಮ್‌ನಲ್ಲಿ ಸ್ಥಾನ!

ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನ್ಯಾಯಾಲಯದಿಂದ ಖುಲಾಸೆಗೊಂಡ ಕೆಲವೇ ತಿಂಗಳ...