‘ಇದು ನಮ್ಮ ಯುದ್ಧವಲ್ಲ’: ಹಾರ್ಮುಜ್ ಬಿಕ್ಕಟ್ಟಿನ ಕುರಿತು ಬ್ರಿಟನ್ ಪ್ರಧಾನಿ

Date:

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ ಬ್ರಿಟನ್ ಭಾಗಿಯಾಗುವುದಿಲ್ಲ ಎಂದು ಯುನೈಟೆಡ್ ಕಿಂಗ್‌ಡಮ್ ಪ್ರಧಾನಿ ಕೀರ್ ಸ್ಟಾರ್ಮರ್ ಬುಧವಾರ ಪುನರುಚ್ಚರಿಸಿದ್ದಾರೆ. ‘ಇದು ನಮ್ಮ ಯುದ್ಧವಲ್ಲ’ ಮತ್ತು ಅದರಲ್ಲಿ ಸೇರುವುದು ನಮ್ಮ ರಾಷ್ಟ್ರೀಯ ಹಿತಾಸಕ್ತಿಯಲ್ಲಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

- Advertisement -

ಹಾರ್ಮುಜ್ ಜಲಸಂಧಿಯನ್ನು ಇರಾನ್ ಮುಚ್ಚಿರುವುದರಿಂದ ಜಾಗತಿಕ ಇಂಧನ ಪೂರೈಕೆಯಲ್ಲಿ ಬಿಕ್ಕಟ್ಟು ಉಂಟಾಗಿದೆ. ಜಲಸಂಧಿಯನ್ನು ತೆರೆಯುವ ಕುರಿತು ಚರ್ಚಿಸಲು ಮತ್ತು ಇರಾನ್‌ಅನ್ನು ಒತ್ತಾಯಿಸಲು ಬ್ರಿಟನ್ ಈ ವಾರದ ಕೊನೆಯಲ್ಲಿ ಸುಮಾರು 35 ದೇಶಗಳ ಸಭೆ ಆಯೋಜಿಸಲಿದೆ ಎಂದು ಸ್ಟಾರ್ಮರ್ ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಡೌನಿಂಗ್ ಸ್ಟ್ರೀಟ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಅಂತಾರಾಷ್ಟ್ರೀಯ ಸಭೆಯು ನೌಕಾಯಾನದ ಸ್ವಾತಂತ್ರ್ಯವನ್ನು ಮರುಸ್ಥಾಪಿಸಲು, ಸಿಲುಕಿಕೊಂಡಿರುವ ಹಡಗುಗಳು ಮತ್ತು ನಾವಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹಾಗೂ ಅಗತ್ಯ ಸರಕುಗಳ ಚಲನೆಯನ್ನು ಪುನರಾರಂಭಿಸಲು ನಾವು ಮಾಡಬಹುದಾದ ಎಲ್ಲ ಕಾರ್ಯಸಾಧ್ಯತೆಗಳು, ರಾಜತಾಂತ್ರಿಕ ಮತ್ತು ರಾಜಕೀಯ ಕ್ರಮಗಳನ್ನು ಚರ್ಚಿಸಲಿದೆ” ಎಂದು ಹೇಳಿದ್ದಾರೆ.

ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವಿನ ಯುದ್ಧದ ಕುರಿತು ಮಾತನಾಡಿದ ಅವರು, “ಇದು ನಮ್ಮ ಯುದ್ಧವಲ್ಲ” ಎಂಬುದನ್ನು ಮತ್ತೆ ಹೇಳಿದ್ದಾರೆ. “ಈ ಸಂಘರ್ಷದಲ್ಲಿ ಬ್ರಿಟನ್ ಭಾಗಿಯಾಗುವುದಿಲ್ಲ. ಆ ಯುದ್ಧದಲ್ಲಿ, ನಮ್ಮ ರಾಷ್ಟ್ರೀಯ ಹಿತಾಸಕ್ತಿಯೂ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ನನ್ನ ಮತ್ತು ಇತರರ ಮೇಲೆ ಎಷ್ಟೇ ಒತ್ತಡ ಇರಲಿ, ಎಷ್ಟೇ ಗದ್ದಲವಿರಲಿ, ನಾನು ತೆಗೆದುಕೊಳ್ಳುವ ಎಲ್ಲ ನಿರ್ಧಾರಗಳಲ್ಲಿ ಬ್ರಿಟನ್‌ನ ರಾಷ್ಟ್ರೀಯ ಹಿತಾಸಕ್ತಿಯನ್ನು ನೋಡುತ್ತೇವೆ. ಅದಕ್ಕಾಗಿಯೇ ಇದು ನಮ್ಮ ಯುದ್ಧವಲ್ಲ ಅಥವಾ ನಾವು ಅದರಲ್ಲಿ ಸಿಲುಕಿಕೊಳ್ಳುವುದಿಲ್ಲ ಎಂಬುದನ್ನು ನಾನು ಸ್ಪಷ್ಟವಾಗಿ ಹೇಳಿದ್ದೇನೆ” ಎಂದು ಅವರು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಮಧ್ಯಪ್ರಾಚ್ಯದಲ್ಲಿ ಶಾಂತಿ ಮರುಸ್ಥಾಪನೆಗೆ ಚೀನಾ – ಪಾಕಿಸ್ತಾನದ 5 ಅಂಶಗಳ ಮಹತ್ವದ ಪ್ರಸ್ತಾವನೆ

“ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮತ್ತು ಪ್ರಮುಖ ವ್ಯಾಪಾರ ಮಾರ್ಗಗಳನ್ನು ಪುನಃ ತೆರೆಯಲು ಬ್ರಿಟನ್ ಸಕ್ರಿಯವಾಗಿ ರಾಜತಾಂತ್ರಿಕ ಪ್ರಯತ್ನಗಳನ್ನು ನಡೆಸುತ್ತಿದೆ. ಆ ನಿಟ್ಟಿನಲ್ಲಿ, ನಮಗೆ ಲಭ್ಯವಿರುವ ಪ್ರತಿಯೊಂದು ರಾಜತಾಂತ್ರಿಕ ಮಾರ್ಗಗಳನ್ನು ನಾವು ಅನ್ವೇಷಿಸುತ್ತಿದ್ದೇವೆ. ಬ್ರಿಟಿಷ್ ಅಧಿಕಾರಿಗಳು ಈಗಾಗಲೇ ಜಿ7 ಪಾಲುದಾರರು ಮತ್ತು ಪ್ರಾದೇಶಿಕ ಮಿತ್ರರಾಷ್ಟ್ರಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಈಗ, ನೌಕಾ ಸುರಕ್ಷತೆಗಾಗಿ 35 ರಾಷ್ಟ್ರಗಳನ್ನು ಬ್ರಿಟನ್ ಒಗ್ಗೂಡಿಸುತ್ತಿದೆ” ಎಂದು ಸ್ಟಾರ್ಮರ್ ಹೇಳಿದ್ದಾರೆ.

ವ್ಯಾಪಕ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದ ಸ್ಟಾರ್ಮರ್, “ಈ ಸಂಘರ್ಷವು ನಮ್ಮ ದೇಶದ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ. ಆದರೆ, ಆರ್ಥಿಕ ಕುಸಿತವನ್ನು ನಿಭಾಯಿಸಲು ಬ್ರಿಟನ್ ಸಿದ್ಧವಾಗಿದೆ” ಎಂದಿದ್ದಾರೆ.

ನ್ಯಾಟೋ ಒಕ್ಕೂಟವು ‘ಕಾಗದದ ಹುಲಿ’ ಎಂದಿರುವ ಟ್ರಂಪ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸ್ಟಾರ್ಮರ್, “ನ್ಯಾಟೋ ಒಕ್ಕೂಟವು ನಿರ್ಣಾಯಕವಾಗಿದೆ. ನ್ಯಾಟೋ ಜಗತ್ತು ಕಂಡ ಅತ್ಯಂತ ಪರಿಣಾಮಕಾರಿ ಮಿಲಿಟರಿ ಒಕ್ಕೂಟ. ಇದು ದಶಕಗಳಿಂದ ನಮ್ಮನ್ನು ಸುರಕ್ಷಿತವಾಗಿರಿಸಿದೆ. ಈ ಒಕ್ಕೂಟಕ್ಕೆ ಬ್ರಿಟನ್ ಸಂಪೂರ್ಣವಾಗಿ ಬದ್ಧವಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌: ಯಾಕೀ ವಿವಾದ?

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ....

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...