ಟ್ರಂಪ್ ಪತ್ನಿ ಮೆಲಾನಿಯಾ ಗಡಿಪಾರಿಗೆ ಆಗ್ರಹ: ಅರ್ಜಿಗೆ ಸಾವಿರಾರು ಮಂದಿ ಸಹಿ

Date:

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪತ್ನಿ, ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರನ್ನು ಗಡಿಪಾರು ಮಾಡಬೇಕು ಎಂಬ ಆಗ್ರಹ ಕೇಳಿಬಂದಿದೆ. ಡೊನಾಲ್ಡ್ ಟ್ರಂಪ್ ಅವರ ಗಡಿಪಾರು ನೀತಿಯನ್ನು ಸ್ವಂತ ಕುಟುಂಬದ ಮೇಲೆ ಮೊದಲು ಪ್ರಯೋಗಿಸಬೇಕು, ಕಾನೂನು ಪ್ರಕಾರವಾಗಿ ಅಮೆರಿಕ ಪೌರತ್ವ ಪಡೆದುಕೊಂಡ ಟ್ರಂಪ್ ಪತ್ನಿ ಮೆಲಾನಿಯಾ, ಅವರ ಪೋಷಕರು ಮತ್ತು ಮಗ ಬ್ಯಾರನ್ ಟ್ರಂಪ್ ಅವರನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಲಾಗುತ್ತಿದೆ.

- Advertisement -

ಮೆಲಾನಿಯಾ ಸ್ಲೊವೇನಿಯಾದಲ್ಲಿ 1970ರಲ್ಲಿ ಜನಿಸಿದ್ದು, 1996ರಲ್ಲಿ ಅಮೆರಿಕಕ್ಕೆ ಆಗಮಿಸಿದ್ದಾರೆ. 2001ರಲ್ಲಿ ಗ್ರೀನ್‍ ಕಾರ್ಡ್ ಪಡೆದು, 2006ರಲ್ಲಿ ಅಮೆರಿಕದ ಪೌರತ್ವ ಪಡೆದಿದ್ದಾರೆ. ಬಳಿಕ 2007ರಲ್ಲಿ ಡೊನಾಲ್ಡ್ ಟ್ರಂಪ್‌ ಅವರನ್ನು ವಿವಾಹವಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸಂಬಂಧ ಆನ್‌ಲೈನ್ ಅರ್ಜಿಗೆ ಮೂರು ಸಾವಿರಕ್ಕೂ ಅಧಿಕ ಮಂದಿ ಸಹಿ ಹಾಕಿದ್ದಾರೆ. “ಟ್ರಂಪ್ ಸ್ವಾಭಾವಿಕ ನಾಗರಿಕರನ್ನು ಗಡಿಪಾರು ಮಾಡಲು ಬಯಸುತ್ತಿರುವುದರಿಂದ, ಮೆಲಾನಿಯಾ ಮತ್ತು ಅವರ ಪೋಷಕರು ಮೊದಲು ಹೊರಹೋಗುವುದು ನ್ಯಾಯಯುತ. ಇದಲ್ಲದೆ, ಮೆಲಾನಿಯಾ ಅವರ ಮಗ ಬ್ಯಾರನ್ ಕೂಡಾ ಹೊರಹೋಗುವಂತೆ ಒತ್ತಾಯಿಸಬೇಕು. ಏಕೆಂದರೆ ಅವರ ತಾಯಿಯ ತಾಯಿ ಬೇರೆ ದೇಶದಲ್ಲಿ ಜನಿಸಿದವರು” ಎಂದು ಅರ್ಜಿಯಲ್ಲಿ ಆಗ್ರಹಿಸಲಾಗಿದೆ.

ಇದನ್ನು ಓದಿದ್ದೀರಾ? ‘ವಾಷಿಂಗ್ಟನ್ ಪೋಸ್ಟ್’ ಪತ್ರಿಕೆ ಟ್ರಂಪ್ ಪದತಲಕ್ಕೆ ಜಾರಿದ್ದು ಹೇಗೆ?

“ಇವೆಲ್ಲವೂ ನಿಮ್ಮ ತಾಯಿಯ ತಾಯಿ ಅಮೆರಿಕದಲ್ಲಿ ಜನಿಸಿರಬೇಕು ಎಂಬ ಟ್ರಂಪ್ ಜಾರಿಗೆ ತರುತ್ತಿರುವ ನೀತಿಯ ಭಾಗವಾಗಿದೆ. ಮೆಲಾನಿಯಾ ಅವರ ತಾಯಿ ಬೇರೆಡೆ ಜನಿಸಿದರು ಎಂದು ನಮಗೆ ತಿಳಿದಿದೆ. ಈ ವಿಚಾರದಲ್ಲಿ ಯಾವುದೇ ವಿನಾಯಿತಿ ಇರಬಾರದು. ಮೊದಲ ದೋಣಿಯಲ್ಲಿ ಅಥವಾ ವಿಮಾನದಲ್ಲಿ ಅವರನ್ನು ಕಳುಹಿಸಿ” ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

“ಇದು ನಿಜವಾಗಿಯೂ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ನಿರ್ಧಾರವಾಗಿದ್ದರೆ, ಮೆಲಾನಿಯಾ ದೇಶದಿಂದ ಹೊರಹೋಗಬೇಕು” ಎಂದು ಆಗ್ರಹಿಸಲಾಗಿದೆ. ಮಾರ್ಚ್ 25ರಂದು ಲಾಸ್ ಏಂಜಲೀಸ್‌ನಲ್ಲಿ ನಡೆದ DOGE(Department of Government Efficiency) ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ಟ್ರಂಪ್ ತನಿಖೆ ನಡೆಸಿ ಮೆಲಾನಿಯಾ ಟ್ರಂಪ್ ಅವರನ್ನು ಗಡಿಪಾರು ಮಾಡಬೇಕು ಎಂದು ಡೆಮಾಕ್ರಟಿಕ್ ಕ್ಯಾಲಿಫೋರ್ನಿಯಾ ಪ್ರತಿನಿಧಿ ಮ್ಯಾಕ್ಸಿನ್ ವಾಟರ್ಸ್ ಸೂಚಿಸಿದ್ದರು. ಇದಾದ ಕೆಲವೇ ದಿನಗಳ ನಂತರ ಮೆಲಾನಿಯಾ ಗಡಿಪಾರಿಗೆ ಆಗ್ರಹಿಸಿ ಅಭಿಯಾನ ಆರಂಭವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...