ಟಿಬೆಟ್‌ನಲ್ಲಿ ಭೀಕರ ಭೂಕಂಪ: 16 ಸಾವು, ನೂರಾರು ಮನೆಗಳು ನೆಲಸಮ

Date:

ಟಿಬೆಟ್‌ನ ಉತ್ತರದ ಪರ್ವತ ಪ್ರದೇಶದಲ್ಲಿ ಗುರುವಾರ ತಡರಾತ್ರಿ ಭೀಕರ ಭೂಕಂಪ ಸಂಭವಿಸಿದೆ.‌ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ. 54 ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ನೂರಾರು ಮನೆಗಳು ಧರೆಗುರುಳಿವೆ.

- Advertisement -

ಕಳೆದ ಐದು ವರ್ಷಗಳಲ್ಲಿ ಈ ಪ್ರದೇಶದಲ್ಲಿ ಸಂಭವಿಸಿದ ಅತ್ಯಂತ ಪ್ರಬಲ ಭೂಕಂಪವಿದು ಎಂದು ತಜ್ಞರು ಹೇಳಿದ್ದಾರೆ. ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 7.0 ಎಂದು ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ, ಸ್ಥಳೀಯ ಕಾಲಮಾನ ರಾತ್ರಿ 10.33ಕ್ಕೆ ಭೂಕಂಪ ಸಂಭವಿಸಿದೆ. ಟಿಬೆಟ್‌ನ ನಾಗ್ಚು ನಗರದ ಪೂರ್ವ-ಈಶಾನ್ಯಕ್ಕೆ 191 ಕಿಲೋಮೀಟರ್ ದೂರದಲ್ಲಿ ಇದರ ಕೇಂದ್ರಬಿಂದು ಪತ್ತೆಯಾಗಿದೆ. ಭೂಮಿಯ ಮೇಲ್ಮೈಯಿಂದ ಸುಮಾರು 18 ಕಿಲೋಮೀಟರ್ ಆಳದಲ್ಲಿ ಕಂಪನ ಸಂಭವಿಸಿದ್ದು, ಇದರ ಪ್ರಭಾವದಿಂದ ಸುಮಾರು 300 ಕಿಲೋಮೀಟರ್ ದೂರದಲ್ಲಿರುವ ಟಿಬೆಟ್‌ನ ರಾಜಧಾನಿ ಲಹಾಸಾದಲ್ಲೂ ಕಂಪನದ ಅನುಭವವಾಗಿದೆ. ಮುಖ್ಯ ಭೂಕಂಪದ ಬಳಿಕ 4.3ರಿಂದ 5.2 ತೀವ್ರತೆಯ ಕನಿಷ್ಠ ಏಳು ಸಣ್ಣಪುಟ್ಟ ಭೂಕಂಪನಗಳು ಸಂಭವಿಸಿರುವುದಾಗಿ ವರದಿಯಾಗಿದೆ.

ಈ ಭೀಕರ ಭೂಕಂಪದಿಂದಾಗಿ ಒಟ್ಟು 339 ಮನೆಗಳು ಮತ್ತು ಜಾನುವಾರುಗಳಿಗಾಗಿ ನಿರ್ಮಿಸಿದ್ದ 20 ಕೊಟ್ಟಿಗೆಗಳು ಕುಸಿದುಬಿದ್ದಿವೆ. ಅಲ್ಲದೆ, ಭೂಕಂಪದ ತೀವ್ರತೆಗೆ ಬಂಡೆಗಳು ಉರುಳಿಬಿದ್ದ ಪರಿಣಾಮ ನಾಗ್ಚು ಬಳಿ ರಾಷ್ಟ್ರೀಯ ಹೆದ್ದಾರಿ 317ರಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.

ನಾಗ್ಚು ಪ್ರದೇಶದ ಕೆಲವು ಭಾಗಗಳಲ್ಲಿ ದೂರಸಂಪರ್ಕ ವ್ಯವಸ್ಥೆ ಕೂಡ ಅಸ್ತವ್ಯಸ್ತಗೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಭೂಕಂಪ ಪೀಡಿತ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಸಂತ್ರಸ್ತರ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ನಡೆಸುತ್ತಿದೆ. 1,600ಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ, ಪೊಲೀಸರು ಹಾಗೂ ಅಗ್ನಿಶಾಮಕ ದಳದವರನ್ನು ನಿಯೋಜಿಸಲಾಗಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯುವ ಕೆಲಸ ನಡೆಯುತ್ತಿದೆ. ರಕ್ಷಣಾ ಕಾರ್ಯಾಚರಣೆ ಹಾಗೂ ವೈದ್ಯಕೀಯ ನೆರವಿಗೆ ಅಗತ್ಯವಿರುವ ಎಲ್ಲ ರೀತಿಯ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಂತ್ರಸ್ತರ ನೆರವಿಗಾಗಿ 1,000 ತಾತ್ಕಾಲಿಕ ವಸತಿ ಘಟಕಗಳು, ಸುಮಾರು 3,000 ಡೇರೆಗಳು, ಹಾಸಿಗೆಗಳು, ಕೈದೀಪಗಳು ಹಾಗೂ ಚಳಿಗಾಲಕ್ಕೆ ಅಗತ್ಯವಿರುವ ಉಡುಪುಗಳನ್ನು ಪ್ರದೇಶಕ್ಕೆ ರವಾನಿಸಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ: ಪ್ರೇಮ ವಿವಾಹದ ದ್ವೇಷಕ್ಕೆ ಯುವಕನ ಕುಟುಂಬದ ಮೇಲೆ ಮಾರಣಾಂತಿಕ ದಾಳಿ

ಪ್ರೀತಿಸಿ ಮದುವೆಯಾಗಿದ್ದ ಕಾರಣಕ್ಕೆ ಯುವಕನ ಕುಟುಂಬದ ಮೇಲೆ ಯುವತಿಯ ಕಡೆಯವರು ಮಾರಕಾಸ್ತ್ರಗಳಿಂದ...

ದಾಖಲೆಯ ರನ್ ಬೆನ್ನತ್ತಿದ ಭಾರತಕ್ಕೆ ಜಯ: ನ್ಯೂಜಿಲೆಂಡ್ ವಿರುದ್ಧ ಮಿಂಚಿದ ಸಂಜು ಸ್ಯಾಮ್ಸನ್

ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡವು ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು ಇಳಿಕೆ: ಯಾವೆಲ್ಲ ಔಷಧಿ ಅಗ್ಗ? ಪಡೆಯುವ ವಿಧಾನ ಹೇಗೆ?

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ...

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...