ಭಾರತದ ಮೇಲೆ ನಡೆದ ಮೂರು ದಾಳಿಗಳ ‘ಮಾಸ್ಟರ್‌ಮೈಂಡ್’ ಎಲ್‌ಇಟಿ ಉಗ್ರ ಪಾಕಿಸ್ತಾನದಲ್ಲಿ ಹತ್ಯೆ

Date:

ಭಾರತದಲ್ಲಿ ನಡೆದ ಮೂರು ದೊಡ್ಡ ದಾಳಿಗಳ ಹಿಂದಿನ ‘ಮಾಸ್ಟರ್‌ಮೈಂಡ್’ ಲಷ್ಕರ್-ಎ-ತೈಬಾ (ಎಲ್‌ಇಟಿ) ಪ್ರಮುಖ ಉಗ್ರ ರಜಾವುಲ್ಲಾ ನಿಜಾಮಾನಿ ಅಲಿಯಾಸ್ ಅಬು ಸಯುಲ್ಲಾನ ಹತ್ಯೆಯಾಗಿದೆ. ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಅಪರಿಚಿತ ಬಂದೂಕುಧಾರಿಗಳು ಆತನ ಕೊಲೆ ಮಾಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

- Advertisement -

ಉಗ್ರ ನಿಜಾಮಾನಿಯು ಇಂದು ಮಧ್ಯಾಹ್ನ ಸಿಂಧ್‌ನ ಮಟ್ಲಿಯಲ್ಲಿರುವ ತನ್ನ ನಿವಾಸಿದಿಂದ ಹೊರಬರುವಾಗ ಕ್ರಾಸಿಂಗ್ ಬಳಿ ಅಪರಿಚಿತ ದಾಳಿಕೋರರು ಮಾರಣಾಂತಿಕವಾಗಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ನಿಜಾಮಾನಿ ಪಾಕಿಸ್ತಾನದ ಸರ್ಕಾರ ಒದಗಿಸಿದ ಭದ್ರತೆಯನ್ನು ಪಡೆದಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಪಾಕಿಸ್ತಾನಿ ಸೇನೆಯ ಪ್ರಧಾನ ಕಚೇರಿವರೆಗೂ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಮುಟ್ಟಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಭಾರತದಲ್ಲಿ ಮೂರು ಪ್ರಮುಖ ದಾಳಿಗಳನ್ನು ನಡೆಸುವ ಹಿಂದಿನ ಮಾಸ್ಟರ್‌ ಮೈಂಡ್ ಅಬು ಸಯುಲ್ಲಾ ಆಗಿದ್ದ ಎನ್ನಲಾಗಿದೆ. 2001ರಲ್ಲಿ ರಾಮಪುರದಲ್ಲಿ ಸಿಆರ್‌ಪಿಎಫ್ ಶಿಬಿರದ ಮೇಲೆ ದಾಳಿ, 2005ರಲ್ಲಿ ಬೆಂಗಳೂರಿನಲ್ಲಿ ಭಾರತೀಯ ವಿಜ್ಞಾನ ಕಾಂಗ್ರೆಸ್ ಮೇಲೆ ದಾಳಿ ಮತ್ತು 2006ರಲ್ಲಿ ನಾಗ್ಪುರದಲ್ಲಿ ಆರ್‌ಎಸ್‌ಎಸ್ ಪ್ರಧಾನ ಕಚೇರಿಯ ಮೇಲೆ ದಾಳಿಯ ಹಿಂದಿನ ಈತ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿದೆ.

ಏಪ್ರಿಲ್ 22ರಂದು ಪಾಕಿಸ್ತಾನದ ಉಗ್ರ ಸಂಘಟನೆಯು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದನಾ ದಾಳಿ ನಡೆಸಿ 26 ಪ್ರವಾಸಿಗರನ್ನು ಕೊಂದಿದೆ. ಈ ದಾಳಿ ಹೊಣೆಯನ್ನು ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್‌ಇಟಿ)ದ ಒಂದು ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಹೊತ್ತುಕೊಂಡಿದೆ.

ಈ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಹೆಸರಲ್ಲಿ ದಾಳಿ ನಡೆಸಿವೆ. ನೂರಕ್ಕೂ ಅಧಿಕ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಭಾರತ ಹೇಳಿದೆ. ಅದಾದ ಬಳಿಕ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಅಧಿಕೃತವಾಗಿ ಯುದ್ಧ ಆರಂಭಿಸುವುದಕ್ಕೂ ಮುನ್ನವೇ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದೀಗ ಅಪರಿಚಿತ ಬಂದೂಕುಧಾರಿಗಳು ಭಾರತಕ್ಕೆ ಬೇಕಾಗಿದ್ದ ಉಗ್ರ ಅಬು ಸಯುಲ್ಲಾ ಹತ್ಯೆ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...