ಬಾಂಗ್ಲಾದಲ್ಲಿ 5.5 ತೀವ್ರತೆಯ ಭೂಕಂಪ: ಭಾರತದಲ್ಲೂ ಕಂಪನ, ಟೆಸ್ಟ್ ಪಂದ್ಯ ತಾತ್ಕಾಲಿಕ ಸ್ಥಗಿತ

Date:

ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಕೇವಲ 50 ಕಿ.ಮೀ. ದೂರದಲ್ಲಿರುವ ನರ್ಸಿಂಗ್ಡಿಯಲ್ಲಿ ಶುಕ್ರವಾರ ಬೆಳಗ್ಗೆ 10.10ರ ಸುಮಾರಿಗೆ 5.5 ತೀವ್ರತೆಯ ಭೂಕಂಪ ಸಂಭವಿಸಿದೆ. ಅಮೆರಿಕದ ಭೂವೈಜ್ಞಾನಿಕ ಸರ್ವೇ (USGS) ಪ್ರಕಾರ ಈ ಭೂಕಂಪದ ಆಳ ಕೇವಲ 10 ಕಿಲೋಮೀಟರ್‌ನಲ್ಲಿ ಆಗಿದ್ದು, ಆ ಕಾರಣದಿಂದಲೇ ನಡುಕ ಬಹಳ ದೊಡ್ಡ ಪ್ರದೇಶದಲ್ಲಿ ತೀವ್ರವಾಗಿ ಅನುಭವಕ್ಕೆ ಬಂದಿದೆ.

- Advertisement -

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಕೆಲವು ಸೆಕೆಂಡುಗಳ ಕಾಲ ಭೂಮಿ ನಡುಗಿ, ದೊಡ್ಡ ಕಟ್ಟಡಗಳಲ್ಲಿದ್ದ ಸಾವಿರಾರು ಜನರು ಆತಂಕದಿಂದ ಬೀದಿಗಿಳಿದಿದ್ದಾರೆ. ಕೋಲ್ಕತ್ತಾದ ಹಲವು ಭಾಗಗಳಲ್ಲಿ ಜನರು ಮನೆಯಿಂದ ಹೊರಬಂದು ರಸ್ತೆಯಲ್ಲಿ ನಿಂತಿದ್ದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕೂಚ್‌ಬಿಹಾರ್, ಉತ್ತರ ಮತ್ತು ದಕ್ಷಿಣ ದಿನಾಜಪುರ ಸೇರಿದಂತೆ ರಾಜ್ಯದ ಇನ್ನೂ ಹಲವೆಡೆ ಜನರು ಈ ನಡುಕವನ್ನು ಸ್ಪಷ್ಟವಾಗಿ ಅನುಭವಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಈಶಾನ್ಯ ಭಾರತದ ಪ್ರಮುಖ ನಗರಗಳಾದ ಗುಹಾಹಟಿ (ಅಸ್ಸಾಂ), ಅಗರ್ತಲಾ (ತ್ರಿಪುರ) ಮತ್ತು ಶಿಲ್ಲಾಂಗ್ (ಮೇಘಾಲಯ)ಗಳಲ್ಲಿಯೂ ಭೂಕಂಪದ ನಡುಕ ಉಂಟಾಗಿದೆ. ಈ ಪ್ರದೇಶಗಳ ನಿವಾಸಿಗಳು ಕೂಡ ಭಯಭೀತರಾಗಿ ಮನೆಯಿಂದ ಹೊರಬಂದಿದ್ದಾರೆ.

ಇದನ್ನು ಓದಿದ್ದೀರಾ? ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ನಾಯಕ ಶುಭಮನ್‌ ಗಿಲ್‌ ಅಲಭ್ಯ?

ಢಾಕಾದ ಸಿಲ್ಹೆಟ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಬಾಂಗ್ಲಾದೇಶ–ಐರ್ಲೆಂಡ್ ಟೆಸ್ಟ್ ಕ್ರಿಕೆಟ್ ಪಂದ್ಯ ಕೆಲವು ನಿಮಿಷಗಳ ಕಾಲ ತಾತ್ಕಾಲಿಕವಾಗಿ ನಿಂತುಹೋಗಿತ್ತು. ಆಟಗಾರರು ಮತ್ತು ಪ್ರೇಕ್ಷಕರು ಸಣ್ಣ ಗಾಬರಿಗೊಳಗಾದರೂ ಪಂದ್ಯ ಶೀಘ್ರವೇ ಮುಂದುವರಿದಿದೆ.

ನವೆಂಬರ್ 21, 2025ರ ಸಂಜೆಯವರೆಗಿನ ತಾಜಾ ಮಾಹಿತಿ ಪ್ರಕಾರ ಯಾವುದೇ ಪ್ರಾಣಹಾನಿ, ಗಾಯಾಳುಗಳು ಅಥವಾ ಆಸ್ತಿ ಹಾನಿಯ ಬಗ್ಗೆ ವರದಿಯಾಗಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಎಇ | ಅನಿವಾಸಿಗಳ ಕುಟುಂಬಗಳಿಗೆ ಆರ್ಥಿಕ ಭದ್ರತೆ: ಮಹತ್ವಾಕಾಂಕ್ಷಿ ವಿನೂತನ ಯೋಜನೆ ಘೋಷಿಸಲಿದೆ ‘ದುಬೈ ಬ್ಯಾರೀಸ್ 24/7’

ಯುಎಇಯಲ್ಲಿ ನೆಲೆಸಿರುವ ಕರ್ನಾಟಕ ಮೂಲದ ಮುಸ್ಲಿಂ ಸಮುದಾಯದ ಅನಿವಾಸಿಗಳ ಕುಟುಂಬಗಳಿಗೆ ಆರ್ಥಿಕ...

ಗಾಯದ ಗುರುತುಗಳಿಲ್ಲವೆಂದು ಪೋಕ್ಸೋ ಸಂತ್ರಸ್ತೆಗೆ ಪರಿಹಾರ ನಿರಾಕರಿಸುವಂತಿಲ್ಲ: ಅಲಹಾಬಾದ್‌ ಹೈಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದ ವೈದ್ಯಕೀಯ ವರದಿಯಲ್ಲಿ ದೈಹಿಕ ಗಾಯಗಳ ಗುರುತುಗಳು ದಾಖಲಾಗಿಲ್ಲ...