ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

Date:

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ. ಇರಾನ್‌ನ ಇಂಧನ ನೆಲೆಗಳ ಮೇಲೆ ನಡೆಸಲು ಉದ್ದೇಶಿಸಿದ್ದ ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸೋಮವಾರ ತಾತ್ಕಾಲಿಕವಾಗಿ ಮುಂದೂಡಿದ್ದಾರೆ. ‘ಫಲಪ್ರದ ಮಾತುಕತೆ’ಯ ನೆಪವೊಡ್ಡಿ ಟ್ರಂಪ್ ಮುಖ ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದರೂ, ಇದು ತಮ್ಮ ಎಚ್ಚರಿಕೆಗೆ ಅಮೆರಿಕ ಹೆದರಿ ತೆಗೆದುಕೊಂಡ ನಿರ್ಧಾರ ಎಂದು ಇರಾನ್ ತಿರುಗೇಟು ನೀಡಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

- Advertisement -

​ತಮ್ಮ ‘ಟ್ರುತ್ ಸೋಶಿಯಲ್’ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, “ಮಧ್ಯಪ್ರಾಚ್ಯದಲ್ಲಿನ ದ್ವೇಷವನ್ನು ಸಂಪೂರ್ಣವಾಗಿ ಕೊನೆಗೊಳಿಸುವ ನಿಟ್ಟಿನಲ್ಲಿ ಕಳೆದ 2 ದಿನಗಳಿಂದ ಅಮೆರಿಕ ಮತ್ತು ಇರಾನ್ ನಡುವೆ ಅತ್ಯಂತ ಉತ್ತಮ ಮತ್ತು ಫಲಪ್ರದ ಮಾತುಕತೆಗಳು ನಡೆದಿವೆ. ಈ ರಚನಾತ್ಮಕ ಮಾತುಕತೆಗಳ ಆಧಾರದ ಮೇಲೆ, ಇರಾನ್‌ನ ವಿದ್ಯುತ್ ಮತ್ತು ಇಂಧನ ಮೂಲಸೌಕರ್ಯಗಳ ಮೇಲಿನ ಮಿಲಿಟರಿ ದಾಳಿಯನ್ನು 5 ದಿನಗಳವರೆಗೆ ಮುಂದೂಡಲು ಯುದ್ಧ ಇಲಾಖೆಗೆ ಸೂಚಿಸಿದ್ದೇನೆ” ಎಂದು ಹೇಳಿಕೊಂಡಿದ್ದಾರೆ. ಈ ವಾರವಿಡೀ ನಡೆಯಲಿರುವ ಮಾತುಕತೆಗಳ ಯಶಸ್ಸಿನ ಮೇಲೆ ಮುಂದಿನ ನಿರ್ಧಾರ ನಿಂತಿದೆ ಎಂದೂ ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಅಮೆರಿಕದ ಈ ನಡೆಯನ್ನು ಕಟುವಾಗಿ ಟೀಕಿಸಿರುವ ಕಾಬೂಲ್‌ನಲ್ಲಿರುವ ಇರಾನ್ ರಾಯಭಾರ ಕಚೇರಿಯು, ಇದು ಟ್ರಂಪ್ ಅವರ ‘ಹಿಮ್ಮೆಟ್ಟುವಿಕೆ’ ಎಂದು ವ್ಯಂಗ್ಯವಾಡಿದೆ. “ಇರಾನ್ ಮೇಲೆ ಅಮೆರಿಕ ದಾಳಿ ಮಾಡಿದರೆ ಇಡೀ ಪ್ರದೇಶದ ಇಂಧನ ಮೂಲಸೌಕರ್ಯಗಳನ್ನೇ ನಾಶ ಮಾಡುವುದಾಗಿ ಇಸ್ಲಾಮಿಕ್ ರಿಪಬ್ಲಿಕ್ ಎಚ್ಚರಿಸಿದ ನಂತರ, ಟ್ರಂಪ್ ಹೆದರಿ ಹಿಂದೆ ಸರಿದಿದ್ದಾರೆ” ಎಂದು ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದೆ.

​ಇದರ ನಡುವೆ, ಅಮೆರಿಕದ ಜೊತೆ ನೇರವಾಗಿಯಾಗಲಿ ಅಥವಾ ಮಧ್ಯವರ್ತಿಗಳ ಮೂಲಕವಾಗಲಿ ಯಾವುದೇ ಮಾತುಕತೆಯೇ ನಡೆದಿಲ್ಲ ಎಂದು ಇರಾನ್‌ನ ‘ಫಾರ್ಸ್’ ಸುದ್ದಿ ಸಂಸ್ಥೆ ವರದಿ ಮಾಡಿದೆ.

​ಅಮೆರಿಕದ ಬೆದರಿಕೆಗೆ ಜಗ್ಗದ ಇರಾನ್
​ಹಾರ್ಮುಜ್ ಜಲಸಂಧಿಯನ್ನು 48 ಗಂಟೆಗಳ ಒಳಗೆ ಸಂಪೂರ್ಣವಾಗಿ ತೆರೆಯದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳನ್ನು ‘ಹೊಡೆದು ಧ್ವಂಸ’ ಮಾಡುವುದಾಗಿ ಕೇವಲ ಒಂದು ದಿನದ ಹಿಂದೆಯಷ್ಟೇ ಟ್ರಂಪ್ ಅಹಂಕಾರದಿಂದ ಎಚ್ಚರಿಕೆ ನೀಡಿದ್ದರು. ಆದರೆ, ಅಮೆರಿಕದ ಈ ಬೆದರಿಕೆಗೆ ಕಿಂಚಿತ್ತೂ ಜಗ್ಗದ ಇರಾನ್, ದಾಳಿ ನಡೆದರೆ ತಕ್ಕ ಶಾಸ್ತಿ ಮಾಡುವುದಾಗಿ ಗುಡುಗಿತ್ತು. ಅಮೆರಿಕದ ಸೇನಾ ನೆಲೆಗಳಿಗೆ ಆಶ್ರಯ ನೀಡಿರುವ ದೇಶಗಳ ಇಂಧನ ಕೇಂದ್ರಗಳೇ ನಮ್ಮ ‘ಕಾನೂನುಬದ್ಧ’ ಗುರಿಯಾಗಲಿವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಹಾಗೂ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಘೇರ್ ಖಲೀಬಾಫ್ ಎಚ್ಚರಿಸಿದ್ದರು. ಅಲ್ಲದೆ, ನಾಶವಾಗಿರುವ ತಮ್ಮ ವಿದ್ಯುತ್ ಸ್ಥಾವರಗಳನ್ನು ಮರುನಿರ್ಮಾಣ ಮಾಡುವವರೆಗೆ ಜಾಗತಿಕ ತೈಲ ಪೂರೈಕೆಯ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿಯೇ ಇಡುವುದಾಗಿ ಟೆಹ್ರಾನ್ ಪಟ್ಟು ಹಿಡಿದಿತ್ತು.

ಇದನ್ನು ಓದಿದ್ದೀರಾ? 900 ಬಿಲಿಯನ್ ಡಾಲರ್ ನಷ್ಟದ ಅಮೆರಿಕ – ಇರಾನ್ ಸಂಘರ್ಷದಲ್ಲಿ ನಿಜಕ್ಕೂ ಗೆದ್ದವರಾರು?

​ಫೆಬ್ರವರಿ 28 ರಿಂದ ಇರಾನ್ ಹಾರ್ಮುಜ್ ಜಲಸಂಧಿಯಲ್ಲಿ ಸಂಚಾರವನ್ನು ಬಂದ್ ಮಾಡಿದೆ. ಇದರಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಗಗನಕ್ಕೇರಿತ್ತು. ಬ್ರೆಂಟ್ ಕಚ್ಚಾ ತೈಲದ ಬೆಲೆ ಭಾನುವಾರ ಬ್ಯಾರೆಲ್‌ಗೆ 119 ಡಾಲರ್ ಮುಟ್ಟಿ, ನಂತರ 110 ಡಾಲರ್ ಆಸುಪಾಸಿನಲ್ಲಿತ್ತು. ಆದರೆ, ಇರಾನ್‌ ಎದುರು ತಲೆಬಾಗಿ ಅಮೆರಿಕ ದಾಳಿ ಮುಂದೂಡಿದ ಬೆನ್ನಲ್ಲೇ ತೈಲ ಬೆಲೆ ಶೇ. 13 ರಷ್ಟು ದಿಢೀರ್ ಕುಸಿತ ಕಂಡು, ಕೊನೆಗೆ ಶೇ. 6.5 ರಷ್ಟು ಇಳಿಕೆಯೊಂದಿಗೆ 104 ಡಾಲರ್‌ಗೆ ತಲುಪಿದೆ.

​ಅಮೆರಿಕವು ಮೇಲ್ನೋಟಕ್ಕೆ ರಾಜತಾಂತ್ರಿಕತೆಯ ನಾಟಕವಾಡುತ್ತಿದ್ದರೂ, ಅದರ ಮಿತ್ರರಾಷ್ಟ್ರ ಇಸ್ರೇಲ್ ಮೂಲಕ ತನ್ನ ಕುತಂತ್ರ ಮುಂದುವರಿಸಿದೆ. ಟ್ರಂಪ್ ಪೋಸ್ಟ್ ಮಾಡಿದ ಸ್ವಲ್ಪ ಸಮಯದಲ್ಲೇ, ಇಸ್ರೇಲ್ ಸೇನೆಯು ಟೆಹ್ರಾನ್‌ನ ಹೃದಯಭಾಗದಲ್ಲಿ ದಾಳಿ ನಡೆಸುತ್ತಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಅಮೆರಿಕ ಮತ್ತು ಇಸ್ರೇಲ್‌ನ ಈ ಜಂಟಿ ದಾಳಿಗಳಿಗೆ ಪ್ರತಿಯಾಗಿ ಇರಾನ್ ಕೂಡ ಇಸ್ರೇಲ್ ಮತ್ತು ಕೊಲ್ಲಿಯ ಗುರಿಗಳ ಮೇಲೆ 400 ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ಹಗರಣ | ಅಮಾನತಿನಲ್ಲಿರುವ ಐಎಎಸ್‌ ಗಂಗ್ವಾರ್‌ಗೆ ಜಾಮೀನು ನಿರಾಕರಣೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ...

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಮಂಗಳೂರು | ಕಾರಿಡಾರ್‌ ಗೋಡೆ ಕುಸಿದು ಐವರು ವಿದ್ಯಾರ್ಥಿಗಳಿಗೆ ಗಾಯ, ಓರ್ವ ಗಂಭೀರ

ಮಂಗಳೂರಿನ ಪಾಂಡೇಶ್ವರ ಸಮೀಪದ ಎಮ್ಮೆಕೆರೆ ಕ್ರಾಸ್ ಬಳಿಯ ರಾಮಲಕ್ಷ್ಮೀ ಹಾಲ್ ಸಭಾಭವನದಲ್ಲಿ...

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...