ಇರಾನ್ ಮೇಲಿನ ದಾಳಿ ನಿಲ್ಲಿಸಿದ ಟ್ರಂಪ್; ಯುದ್ಧ ಅಂತ್ಯಕ್ಕೆ ‘ತ್ವರಿತ ಒಪ್ಪಂದ’ದ ಷರತ್ತು!

Date:

ತಿಂಗಳುಗಳಿಂದ ಮುಂದುವರೆದಿದ್ದ ಇರಾನ್ ಮೇಲಿನ ದಾಳಿಯನ್ನು‌ ಸ್ಥಗಿತಗೊಳಿಸಲು ಅಮೆರಿಕ-ಇಸ್ರೇಲ್ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಸ್ಥಗಿತಗೊಳಿಸಿದ್ದಾರೆ. ಯುದ್ಧಕ್ಕೆ ಕೊನೆಹಾಡಲು ತ್ವರಿತ ಒಪ್ಪಂದಕ್ಕೆ ಇರಾನ್ ಮುಂದಾಗಬೇಕು, ಇಲ್ಲದಿದ್ದರೆ ಮತ್ತೆ ದಾಳಿ ಆರಂಭಿಸುತ್ತೇವೆ ಎಂದು ಟ್ರಂಪ್ ಬೆದರಿಕೆ ಹಾಕಿದ್ದಾರೆ.

- Advertisement -

ಈ ಬಗ್ಗೆ ‘ಟ್ರುತ್’ ಸೋಷಿಯಲ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಟ್ರಂಪ್, “ಮಧ್ಯಪ್ರಾಚ್ಯದ ಸೌಹಾರ್ದ ದೇಶಗಳ ವಿನಂತಿಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ಅಮೆರಿಕ ಪಡೆಗಳು ಇರಾನ್ ವಿರುದ್ಧ ದಾಳಿ ನಡೆಸಲು ಸಂಪೂರ್ಣವಾಗಿ ಸಿದ್ಧವಾಗಿದ್ದವು. ಆದರೆ, ಜಗತ್ತಿನ ಒಳಿತಿಗಾಗಿ ಹಾಗೂ ಸಮೃದ್ಧ ಇರಾನ್‌ನ ಭವಿಷ್ಯದ ಹಿತದೃಷ್ಟಿಯಿಂದ ದಾಳಿಯನ್ನು ರದ್ದುಗೊಳಿಸಲು ಒಪ್ಪಿಕೊಂಡಿದ್ದೇನೆ. ಆದರೆ, ಇದಕ್ಕೆ ಶೀಘ್ರವೇ ಒಪ್ಪಂದ ಏರ್ಪಡಬೇಕು ಎಂಬ ಷರತ್ತಿದೆ” ಎಂದು ಬರೆದುಕೊಂಡಿದ್ದಾರೆ.

“ಸಂಘರ್ಷದಿಂದಾಗಿ ಬಂದ್ ಆಗಿರುವ ಅಂತರರಾಷ್ಟ್ರೀಯ ಪ್ರಮುಖ ನೌಕಾ ಮಾರ್ಗವಾದ ‘ಹೊರ್ಮುಜ್ ಜಲಸಂಧಿ’ಯನ್ನು ತಕ್ಷಣವೇ ಪೂರ್ಣ ಪ್ರಮಾಣದಲ್ಲಿ ತೆರೆಯಬೇಕು. ಇರಾನ್ ತನ್ನ ಪರಮಾಣು ಶಸ್ತ್ರಾಸ್ತ್ರ ಬೆದರಿಕೆಯನ್ನು ಸಂಪೂರ್ಣವಾಗಿ ಕೊನೆಗೊಳಿಸಬೇಕು” ಎಂದು ಷರತ್ತನ್ನು ಟ್ರಂಪ್ ಮುಂದಿಟ್ಟಿದ್ದಾರೆ.

ಈ ಒಪ್ಪಂದಕ್ಕೆ ಇಸ್ರೇಲ್ ಕೂಡ ಸಂಪೂರ್ಣ ಸಮ್ಮತಿ ಸೂಚಿಸಿದೆ ಎಂದು ಟ್ರಂಪ್ ತಿಳಿಸಿದ್ದಾರೆ.

ಅಂದಹಾಗೆ, ಫೆಬ್ರವರಿ 28 ರಿಂದ ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ನಡೆಯುತ್ತಿದ್ದು, ತೈಲ ಸಂಸ್ಕರಣಾಗಾರಗಳು ಹಾಗೂ ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಲು ಅಮೆರಿಕ ಯೋಜನೆ ರೂಪಿಸಿತ್ತು. ಇದರಿಂದಾಗಿ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿದ್ದು, ಅಮೆರಿಕದ ಮುಂಬರುವ ಅಧ್ಯಕ್ಷೀಯ ಮಧ್ಯಂತರ ಚುನಾವಣೆ ಮೇಲೆಯೂ ಇದು ಪರಿಣಾಮ ಬೀರುವ ಆತಂಕವಿತ್ತು.

ವರದಿಗಳ ಪ್ರಕಾರ, ಸೌದಿ ಅರೇಬಿಯಾದ ಯುವರಾಜ (ಕ್ರೌನ್ ಪ್ರಿನ್ಸ್) ಮೊಹಮ್ಮದ್ ಬಿನ್ ಸಲ್ಮಾನ್ ಅವರು ಶನಿವಾರ ಟ್ರಂಪ್ ಅವರೊಂದಿಗೆ ದೂರವಾಣಿ ಕರೆ ಮಾಡಿ, ಯುದ್ಧ ತೀವ್ರಗೊಳ್ಳದಂತೆ ಹಾಗೂ ದಾಳಿಯಿಂದ ಹಿಂದೆ ಸರಿಯುವಂತೆ ವಿನಂತಿಸಿಕೊಂಡಿದ್ದರು. ಈ ಆತಂಕ ಮತ್ತು ವಿನಂತಿಗಳ ಬೆನ್ನಲ್ಲೇ ಟ್ರಂಪ್ ತಮ್ಮ ಸೇನಾ ಕಾರ್ಯಾಚರಣೆಯ ನಿರ್ಧಾರವನ್ನು ಸ್ಥಗಿತಗೊಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ ಶಕ್ತಿಗೆ ಕತ್ತರಿ

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ...

ಮೋದಿಯ ಮೋಸದ UPI ಶುಲ್ಕ ನೀತಿ; ತೀವ್ರ ವಿರೋಧದ ನಡುವೆಯೂ ಜಾರಿಗೆ ಮುಂದಾದ ಕೇಂದ್ರ

₹2,000ಕ್ಕಿಂತ ಹೆಚ್ಚಿನ UPI ವಹಿವಾಟುಗಳಿಗೆ ಪ್ರಸ್ತಾಪಿಸಿರುವ ಶೇ 0.4ರಷ್ಟು ಮರ್ಚೆಂಟ್ ಡಿಸ್ಕೌಂಟ್...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಪ್ರಜಾಪ್ರಭುತ್ವದ ಅಣಕ: ಪಕ್ಷಾಂತರಕ್ಕಾಗಿ ಶಾಸಕರ ರಾಜೀನಾಮೆ ಮತ್ತು ಮರು ಸ್ಪರ್ಧೆಗೆ ಮದ್ರಾಸ್ ಹೈಕೋರ್ಟ್ ಕಿಡಿ

ಚುನಾವಣೆಯಲ್ಲಿ ಗೆದ್ದ ಕೆಲವೇ ದಿನಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷಾಂತರಗೊಂಡು...