ಭಾರತದ ಸರಕುಗಳ ಆಮದಿನ ಮೇಲೆ ಶೇಕಡ 50ರಷ್ಟು ಸುಂಕ ವಿಧಿಸಿದ ಡೊನಾಲ್ಡ್ ಟ್ರಂಪ್

Date:

Advertisements

ರಷ್ಯಾದಿಂದ ತೈಲ ಖರೀದಿ ಮಾಡುತ್ತಿರುವ ಕಾರಣಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಮೇಲೆ ಹೆಚ್ಚುವರಿ ಶೇಕಡ 25ರಷ್ಟು ಸುಂಕವನ್ನು ವಿಧಿಸುವ ಆದೇಶ ಹೊರಡಿಸಿದ್ದಾರೆ. ಅಂದರೆ ಇನ್ನು ಮುಂದೆ ಭಾರತದ ಸರಕುಗಳ ಆಮದು ಮಾಡಿಕೊಳ್ಳುವುದಾದರೆ ಅಮೆರಿಕದಲ್ಲಿ ಶೇಕಡ 50ರಷ್ಟು ಸುಂಕವನ್ನು ವಿಧಿಸಲಾಗುತ್ತದೆ. ಆದೇಶದ ಪ್ರಕಾರ ಈ ಹೊಸ ದರವು 21 ದಿನಗಳಲ್ಲಿ ಅಂದರೆ ಆಗಸ್ಟ್ 27ರಿಂದ ಜಾರಿಗೆ ಬರಲಿದೆ.

ಟ್ರಂಪ್ ಆದೇಶಕ್ಕೆ ಭಾರತದ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯೆ ನೀಡಿದೆ. ರಷ್ಯಾದಿಂದ ಆಮದು ಮಾಡಿಕೊಳ್ಳುವ ಬಗ್ಗೆ ಭಾರತ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. “ಈ ಸುಂಕವು ‘ಅನ್ಯಾಯ, ನ್ಯಾಯಸಮ್ಮತವಲ್ಲ ಮತ್ತು ಅಸಮಂಜಸ’. ಆದ್ದರಿಂದ ಹಲವು ಇತರ ದೇಶಗಳು ತಮ್ಮ ಸ್ವಂತ ರಾಷ್ಟ್ರೀಯ ಹಿತಾಸಕ್ತಿಯಲ್ಲಿ ತೆಗೆದುಕೊಳ್ಳುತ್ತಿರುವ ಕ್ರಮಗಳಿಗಾಗಿ ಭಾರತದ ಮೇಲೆ ಹೆಚ್ಚುವರಿ ಸುಂಕಗಳನ್ನು ವಿಧಿಸಲು ಅಮೆರಿಕ ಮುಂದಾಗಿರುವುದು ಅತ್ಯಂತ ದುರದೃಷ್ಟಕರ. ಭಾರತವು ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ” ಎಂದು ಸಚಿವಾಲಯ ತಿಳಿಸಿದೆ.

ಇದನ್ನು ಓದಿದ್ದೀರಾ? ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್ ಮತ್ತು ಅಮೆರಿಕ: ಏನದು ಎಪ್‌ಸ್ಟೀನ್ ಫೈಲ್ಸ್?

Advertisements

ಇನ್ನು ಈ ಹಿಂದೆ “ರಷ್ಯಾದ ಯುದ್ಧ ಯಂತ್ರದಿಂದ ಉಕ್ರೇನ್‌ನಲ್ಲಿ ಎಷ್ಟು ಜನರು ಕೊಲ್ಲಲ್ಪಡುತ್ತಿದ್ದಾರೆ ಎಂಬುದರ ಬಗ್ಗೆ ಭಾರತಕ್ಕೆ ಕಾಳಜಿ ಇಲ್ಲ” ಎಂದು ಹೇಳಿದ್ದ ಡೊನಾಲ್ಡ್ ಟ್ರಂಪ್, ಸುಂಕಗಳನ್ನು ಹೆಚ್ಚಿಸುವುದಾಗಿ ಎಚ್ಚರಿಸಿದ್ದರು. ಅಲ್ಲದೆ, 25% ಸುಂಕ ವಿಧಿಸಿ ಆದೇಶಿಸಿದ್ದರು. ಇದೀಗ, ಮತ್ತೆ 25% ಸುಂಕ (ಒಟ್ಟು 50%) ವಿಧಿಸಿದ್ದಾರೆ.

ಹೆಚ್ಚುವರಿ ಸುಂಕವು ಜವಳಿ, ರತ್ನಗಳು ಮತ್ತು ಆಭರಣಗಳು, ಆಟೋ ಬಿಡಿಭಾಗಗಳು ಮತ್ತು ಸಮುದ್ರಾಹಾರದಂತಹ ಪ್ರಮುಖ ಭಾರತೀಯ ರಫ್ತುಗಳ ಮೇಲೆ ಮೇಲೆ ಪರಿಣಾಮ ಬೀರುತ್ತದೆ. ಸದ್ಯ ಐಫೋನ್‌ಗಳು ಮತ್ತು ಫಾರ್ಮಾ ಸೇರಿದಂತೆ ಎಲೆಕ್ಟ್ರಾನಿಕ್ಸ್‌ಗೆ ಸುಂಕ ವಿನಾಯಿತಿಯಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ...

Download Eedina App Android / iOS

X