ಬಾಗ್ರಾಮ್ ವಾಯುನೆಲೆಯನ್ನು ಅಮೆರಿಕಗೆ ವಾಪಸ್‌ ಕೊಡುವಂತೆ ಅಫ್ಘಾನ್‌ಗೆ ಟ್ರಂಪ್ ಒತ್ತಡ

Date:

ಅಫ್ಘಾನಿಸ್ಥಾನದ ಪರ್ವಾನ್ ಜಿಲ್ಲೆಯಲ್ಲಿರುವ ಬಾಗ್ರಾಮ್ ವಾಯುನೆಲೆಯನ್ನು ಅಮೆರಿಕದ ನಿಯಂತ್ರಣಕ್ಕೆ ಮರಳಿ ಕೊಡುವಂತೆ ಅಫ್ಘಾನಿಸ್ತಾನವನ್ನು ಡೊನಾಲ್ಡ್‌ ಟ್ರಂಪ್ ಇತ್ತಾಯಿಸಿದ್ದಾರೆ. ಅಫ್ಘಾನ್‌ನ ತಾಲಿಬಾನ್ ಆಡಳಿತವು ತಮ್ಮ ಮಾತು ಕೇಳದಿದ್ದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆಯನ್ನೂ ಹಾಕಿದ್ದಾರೆ.

- Advertisement -

ಇತ್ತೀಚೆಗೆ, ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅಮೆರಿಕವು ಬಾಗ್ರಾಮ್ ನೆಲೆಯನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿದೆ ಎಂದು ಟ್ರಂಪ್ ಹೇಳಿದ್ದರು. ಇದೀಗ, ತಮ್ಮ ಸಾಮಾಜಿಕ ಮಾಧ್ಯಮ ಟ್ರೂತ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ವಾಯುನೆಲೆಯನ್ನು ಅಮೆರಿಕದ ನಿಯಂತ್ರಣಕ್ಕೆ ವಾಪಸ್‌ ಕೊಡುವಂತೆ ಅಫ್ಘಾನ್‌ಅನ್ನು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

2021ರ ಆಗಸ್ಟ್‌ನಲ್ಲಿ ಅಫ್ಘಾನ್‌ಅನ್ನು ತಾಲಿಬಾನ್ ವಶಕ್ಕೆ ಪಡೆದುಕೊಂಡಿತು. ಅಂದಿನಿಂದ, ಅಲ್ಲಿರುವ ಅಮೆರಿಕನ್ ಶಸ್ತ್ರಾಸ್ತ್ರ ತಾಣಗಳು ಮತ್ತು ಬಾಗ್ರಾಮ್ ವಾಯುನೆಲೆಯು ತಾಲಿಬಾನ್ ಆಡಳಿತದ ವಶದಲ್ಲಿದೆ. ಬಾಗ್ರಾಮ್ ವಾಯುನೆಲೆಯನ್ನು ಅಫ್ಘಾನಿಸ್ತಾನದಿಂದ ಅಮೆರಿಕದ ನಿಯಂತ್ರಣಕ್ಕೆ ತೆಗೆದುಕೊಳ್ಳುವಲ್ಲಿ ಜೋ ಬೈಡನ್ ವಿಫಲರಾಗಿದ್ದಾರೆ ಎಂದು ಟ್ರಂಪ್ ದೀರ್ಘಕಾಲದಿಂದ ಟೀಕಿಸುತ್ತಲೇ ಬಂದಿದ್ದಾರೆ. ಇದೀಗ, ತಾಲಿಬಾನ್ ಆಡಳಿತದ ಮೇಲೆ ಒತ್ತಡ ಹಾಕಲು ಟ್ರಂಪ್ ಮುಂದಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌದಿ ಅರಾಮ್ಕೊ ಪ್ರಧಾನ ಕಚೇರಿ ಮೇಲೆ ದಾಳಿ: ಮತ್ತೆ ಪುಟಿದೆದ್ದರೇ ಹೂತಿ ಬಂಡುಕೋರರು?

ಯೆಮನ್‌ನ ಹೂತಿ ಬಂಡುಕೋರರು ಸೌದಿ ಅರೇಬಿಯಾದ ಧಹ್ರಾನ್‌ನಲ್ಲಿರುವ ತೈಲ ದೈತ್ಯ ಕಂಪನಿ...

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...