ಭಾರತ-ಪಾಕ್ ಸಂಘರ್ಷ ನಿಲ್ಲಿಸಿದ್ದು ನಾನೇ; ಶಾಂತಿಗಾಗಿ ಒಬಾಮಾ ಏನೂ ಮಾಡಿಲ್ಲ, ನೊಬೆಲ್‌ಗೆ ನಾನೇ ಅರ್ಹ: ಟ್ರಂಪ್

Date:

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ನಾನೇ ನಿಲ್ಲಿಸಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಹೇಳಿಕೊಂಡಿದ್ದಾರೆ. “ಇತಿಹಾಸದಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಗೆ ಅರ್ಹರು ನನಗಿಂತ ಬೇರೆ ಯಾರೂ ಇಲ್ಲ. ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ‘ಏನನ್ನೂ ಮಾಡದಿದ್ದರೂ’ ನೊಬೆಲ್ ಪ್ರಶಸ್ತಿಯನ್ನು ಪಡೆದಿದ್ದಾರೆ” ಎಂದು ಟ್ರಂಪ್ ಹೇಳಿದ್ದಾರೆ.

- Advertisement -

ವೆನೆಜುವೆಲಾದ ತೈಲ ನಿಕ್ಷೇಪಗಳಿಗೆ ಸಂಬಂಧಿಸಿದಂತೆ ಶ್ವೇತಭವನದಲ್ಲಿ ತೈಲ ಮತ್ತು ಅನಿಲ ತಜ್ಞರೊಂದಿಗೆ ನಡೆದ ಸಭೆಯಲ್ಲಿ ಟ್ರಂಪ್ ಮಾತನಾಡಿದ್ದಾರೆ. “ಕಳೆದ ವರ್ಷ ಮೇ ತಿಂಗಳಲ್ಲಿ ಭಾರತ-ಪಾಕಿಸ್ತಾನ ಸಂಘರ್ಷದ ಸಮಯದಲ್ಲಿ ಎಂಟು ಜೆಟ್‌ಗಳನ್ನು ಹೊಡೆದುರುಳಿಸಲಾಯಿತು. ಆ ಸಂಘರ್ಷವನ್ನು ನಾನು ನಿಲ್ಲಿಸಿದ್ದೇನೆ. ಜನರು ಟ್ರಂಪ್ ಅವರನ್ನು ಇಷ್ಟಪಡುತ್ತಾರೋ ಅಥವಾ ಇಲ್ಲವೋ… ನೋಡಿ, ನಾನು ಎಂಟು ಯುದ್ಧಗಳನ್ನು ಇತ್ಯರ್ಥಪಡಿಸಿದ್ದೇನೆ” ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಕಳೆದ ವರ್ಷ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ವಾಷಿಂಗ್ಟನ್‌ಗೆ ಭೇಟಿ ನೀಡಿದ್ದರು. ಎರಡು ಪರಮಾಣು ಶಸ್ತ್ರಸಜ್ಜಿತ ನೆರೆಹೊರೆಯವರ (ಭಾರತ-ಪಾಕ್_ ನಡುವಿನ ಸಂಘರ್ಷವನ್ನು ನಿಲ್ಲಿಸಿದ ಕೀರ್ತಿಗಾಗಿ ನನ್ನನ್ನು ಅಭಿನಂದಿಸಿದರು” ಎಂದು ಟ್ರಪ್ ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ತಮಿಳುನಾಡು ಚುನಾವಣೆ | ದಳಪತಿ ವಿಜಯ್ ಸೆಳೆಯಲು ಖೆಡ್ಡಾ ತೋಡಿತೇ ಬಿಜೆಪಿ?

ಭಾರತ-ಪಾಕ್ ಸಂಘರ್ಷವನ್ನು ನಿಲ್ಲಿಸಿದ್ದು ತಾವೇ ಎಂದು ಟ್ರಂಪ್ ಈವರೆಗೆ ಸುಮಾರು 65ಕ್ಕೂ ಹೆಚ್ಚು ಬಾರಿ ಹೇಳಿಕೊಂಡಿದ್ದಾರೆ. ಅವರು 2025ರ ಮೇ 10ರಂದು ಸಾಮಾಜಿಕ ಮಾಧ್ಯಮದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ದೀರ್ಘ ರಾತ್ರಿಯ ಮಾತುಕತೆ ನಡೆಸಿದ್ದೇನೆ. ಉಭಯ ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಿದ್ದರು. ಇದಾದ, ಕೆಲವೇ ಗಂಟೆಗಳಲ್ಲಿ ಭಾರತ-ಪಾಕ್ ಕದನ ವಿರಾಮ ಘೋಷಿಸಿದವರು. ಅಂದಿನಿಂದಲೂ ಈ ಬಗ್ಗೆ ಟ್ರಂಪ್ ಪದೇ-ಪದೇ ಹೇಳಿಕೊಳ್ಳುತ್ತಿದ್ದಾರೆ. ಟ್ರಂಪ್ ಅವರ ಮಾತನನ್ನು ಭಾರತದ ವಿದೇಶಾಂಗ ಸಚಿವಾಲಯ ನಿರಾಕರಿಸಿದ್ದರೂ, ಮೋದಿ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇನ್ನು, ಟ್ರಂಪ್ ತಾವು 2ನೇ ಅವಧಿಗೆ ಅಧಿಕಾರಕ್ಕೆ ಮರಳಿದ ನಂತರ, ಎಂಟು ತಿಂಗಳೊಳಗೆ ಎಂಟು ಯುದ್ಧಗಳನ್ನು ನಿಲ್ಲಿಸಿದ್ಧೇನೆ. ನಾನು ನಿಲ್ಲಿಸಿರುವ ಪ್ರತಿಯೊಂದು ಯುದ್ಧಕ್ಕೂ ನನಗೆ ನೊಬೆಲ್ ಪ್ರಶಸ್ತಿ ನೀಡಬೇಕೆಂದು ಟ್ರಂಪ್ ಹೇಳುತ್ತಲೇ ಇದ್ದಾರೆ. 2009ರಲ್ಲಿ ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕೆಲವೇ ತಿಂಗಳುಗಳಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ಪಡೆದ ಬರಾಕ್ ಒಬಾಮಾ ಅವರನ್ನು ಟ್ರಂಪ್ ಟೀಕಿಸಿದ್ದಾರೆ. “ಅವರಿಗೆ ಏಕೆ ಪ್ರಶಸ್ತಿ ಸಿಕ್ಕಿತು ಎಂಬುದು ಗೊತ್ತಿಲ್ಲ. ಅವರು ಶಾಂತಿಗಾಗಿ ಏನನ್ನೂ ಮಾಡಿಲ್ಲ” ಎಂದಿದ್ದಾರೆ.

“ಇತಿಹಾಸದಲ್ಲಿ ನೊಬೆಲ್ ಪ್ರಶಸ್ತಿಯನ್ನು ಪಡೆಯಬಹುದಾದವರಲ್ಲಿ ನನಗಿಂತ ಮಿಗಿಲಾದ ವ್ಯಕ್ತಿ ಯಾರೂ ಇಲ್ಲ. ಒಬಾಮಾ ಕೆಟ್ಟ ಅಧ್ಯಕ್ಷ” ಎಂದು ಟ್ರಂಪ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಕ್ಷ ಶತಾಯುಷಿಗಳ ದೇಶ ಜಪಾನ್! ದೀರ್ಘಾಯಸ್ಸಿನ ಗುಟ್ಟೇನು?

ಬದುಕಿನ ಇಳಿಜಾರಿನಲ್ಲೂ ಯೌವನದ ಉತ್ಸಾಹ, ನೂರು ವರ್ಷವಾದರೂ ಕುಗ್ಗದ ಆರೋಗ್ಯ... ಇದು...

ಅಮೆರಿಕ: ಟ್ರಂಪ್ ಆಡಳಿತದ ವಿವಾದಾತ್ಮಕ ಪೋಸ್ಟರ್ ಬೆನ್ನಲ್ಲೇ ಸಿಖ್ ಟ್ರಕ್ ಚಾಲಕನಿಗೆ ಚಾಕು ಇರಿತ

ಅಮೆರಿಕದ ವಯೋಮಿಂಗ್‌ನಲ್ಲಿ 28 ವರ್ಷದ ಪಂಜಾಬಿ ಮೂಲದ ಸಿಖ್ ಟ್ರಕ್ ಚಾಲಕನೊಬ್ಬನ...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ ರಾಜಕೀಯ ತಂತ್ರ

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ....

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ...