ಭಾರತದ ಮೇಲೆ 100% ಸುಂಕ ಹೇರುವ ನಿರ್ಧಾರ ರದ್ದು: ಟ್ರಂಪ್

Date:

ರಷ್ಯಾದಿಂದ ತೈಲ ಮತ್ತು ಅನಿಲ ಖರೀದಿಸುತ್ತಿರುವ ಭಾರತ ಸೇರಿದಂತೆ ವಿಶ್ವದ ಪ್ರಮುಖ ದೇಶಗಳ ಮೇಲೆ 100% ಸುಂಕ ಹೇರುವ ನಿರ್ಧಾರದಿಂದ ಟ್ರಂಪ್ ಹಿಂದೆ ಸರಿದಿದ್ದಾರೆ. ‘ಲಿಂಡ್ಸೆ ಓ. ಗ್ರಹಾಂ ಕಾಯ್ದೆ-2026’ರ ಅಡಿಯಲ್ಲಿ ರೂಪಿಸಲಾಗಿದ್ದ ಕಠಿಣ ನಿರ್ಬಂಧಗಳು ಮತ್ತು ಸುಂಕಗಳನ್ನು ಟ್ರಂಪ್ ರದ್ದುಪಡಿಸಿದ್ದಾರೆ.

- Advertisement -

ರಷ್ಯಾದಿಂದ ತೈಲ ಮತ್ತು ಅನಿಲ ಖರೀದಿಸುವ ಭಾರತ, ಚೀನಾದಂತಹ ಪ್ರಮುಖ ದೇಶಗಳ ಉದ್ಯಮಗಳ ಮೇಲೆ 100% ರಷ್ಟು ತಡೆ ಸುಂಕವನ್ನು ಹೇರಲು ಟ್ರಂಪ್ ಆಡಳಿತ ನಿಯಮ ರೂಪಿಸಿತ್ತು. ಅಕ್ಟೋಬರ್ 18ರಂದು ಜಾರಿಗೆ ತರುವುದಾಗಿ ಟ್ರಂಪ್ ಘೋಷಿಸಿದ್ದಾರೆ. ಆದರೆ, ಜಾರಿಗೊಳ್ಳುವ ಒಂದು ದಿನ ಮುಂಚಿತವಾಗಿ, ನಿಯಮವನ್ನು ರದ್ದುಗೊಳಿಸಲಾಗಿದೆ. ಈ ಕುರಿತು ಅಮೆರಿಕ ಕಾಂಗ್ರೆಸ್‌ಗೆ (ಸಂಸತ್ತು) ಪ್ರಮಾಣಪತ್ರವನ್ನೂ ಸಲ್ಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಒಂದು ವೇಳೆ ಈ ಸುಂಕ ಜಾರಿಯಾಗಿದ್ದರೆ ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಮತ್ತು ವಾಣಿಜ್ಯ ಸಂಬಂಧಗಳ ಮೇಲೆ ಗಂಭೀರ ಪರಿಣಾಮ ಬೀರುವ ಭೀತಿಯಿತ್ತು. ಮಾತ್ರವಲ್ಲದೆ, ಅಮೆರಿಕ ಜನರ ಹಿತಾಸಕ್ತಿಗೂ ಕಷ್ಟವಾಗುತ್ತಿತ್ತು. ಸುಂಕದ ಪ್ರಭಾವವು ಅಮೆರಿಕನ್ನರಿಗೆ ಬೆಲೆ ಏರಿಕೆಯ ಹೊರೆ ಹೊರಿಸುತ್ತಿತ್ತು ಎಂದು ಹೇಳಲಾಗಿದೆ.

ಅಮೆರಿಕದಲ್ಲಿ ಶೀಘ್ರದಲ್ಲೇ ನಡೆಯಲಿರುವ ನವೆಂಬರ್ ಮಧ್ಯಂತರ ಚುನಾವಣೆಗಳ ಹಿನ್ನೆಲೆಯಲ್ಲಿ ದೇಶೀಯವಾಗಿ ಇಂಧನ ಬೆಲೆಗಳು ತೀವ್ರವಾಗಿ ಏರಿಕೆಯಾಗುತ್ತಿರುವುದು ಮತ್ತು ಮಧ್ಯಪ್ರಾಚ್ಯದಲ್ಲಿ ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಉದ್ವಿಗ್ನತೆಯಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಉಂಟಾಗಿರುವ ಅಭಾವವೇ ಟ್ರಂಪ್ ಅವರ ಈ ದಿಢೀರ್ ನಿರ್ಧಾರಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.

ರಷ್ಯಾದ ತೈಲದ ಮೇಲೆ ಕಠಿಣ ಸುಂಕ ವಿಧಿಸಿದರೆ ಜಾಗತಿಕವಾಗಿ ತೈಲ ಪೂರೈಕೆ ಕಡಿಮೆಯಾಗಿ, ಅಮೆರಿಕದ ಗ್ರಾಹಕರಿಗೆ ತೈಲ ದರ ಭಾರೀ ದುಬಾರಿಯಾಗುವ ಆತಂಕವಿತ್ತು. ಈ ಆರ್ಥಿಕ ಹೊಡೆತ ಮತ್ತು ರಾಜಕೀಯ ಹಿನ್ನಡೆಯನ್ನು ತಪ್ಪಿಸಲು ಟ್ರಂಪ್ ಆಡಳಿತವು ಸುಂಕ ವಿನಾಯಿತಿ ನೀಡುವ ಹಾದಿ ಹಿಡಿದಿದೆ ಎಂದು ಹೇಳಲಾಗಿದೆ.

ಈ ಪ್ರಮುಖ ಆರ್ಥಿಕ ಬೆಳವಣಿಗೆಗಳ ನಡುವೆಯೇ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ ಅವರು ಭಾರತದ ವಾಣಿಜ್ಯ ರಾಜಧಾನಿ ಮುಂಬೈ ಮತ್ತು ಗುಜರಾತ್‌ನ ಜಾಮ್‌ನಗರಕ್ಕೆ ಭೇಟಿ ನೀಡುತ್ತಿದ್ದಾರೆ. ಜಾಮ್‌ನಗರದಲ್ಲಿ ಜಗತ್ತಿನ ಅತಿ ದೊಡ್ಡ ತೈಲ ಶುದ್ಧೀಕರಣ ಸಂಕೀರ್ಣವನ್ನು ಹೊಂದಿರುವ ‘ರಿಲಯನ್ಸ್ ಇಂಡಸ್ಟ್ರೀಸ್’ ಸಂಸ್ಥೆಯ ಹಿರಿಯ ಅಧಿಕಾರಿಗಳೊಂದಿಗೆ ರೂಬಿಯೋ ಸಭೆ ನಡೆಸಲಿದ್ದಾರೆ. ಈ ಭೇಟಿಯು ಮುಖ್ಯವಾಗಿ ಇಂಧನ ಸಹಕಾರ ಮತ್ತು ತೈಲ ಬೆಲೆ ನಿಯಂತ್ರಣದ ಕಡೆಗೆ ಹೆಚ್ಚಿನ ಗಮನ ಹರಿಸಲಿದೆ ಎಂದು ಭಾರತದಲ್ಲಿರುವ ಅಮೆರಿಕ ರಾಯಭಾರಿ ಸರ್ಜಿಯೋ ಗೋರ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹3 ಲಕ್ಷ ಲಂಚ: ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಚಾಲಕ ಬಂಧನ

ಕೃಷಿಯೇತರ (ಎನ್‌ಎ) ನಿವೇಶನಗಳನ್ನು ವಾಣಿಜ್ಯ ನಿವೇಶನಗಳಾಗಿ ಪರಿವರ್ತಿಸಿಕೊಡಲು ₹3 ಲಕ್ಷ ಲಂಚ...

ಬೀದರ್‌ | ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯಿರಿ: ಜಾಬಾ ಜಗದೀಶ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿದ ಬೆಳೆ ತಳಿಗಳನ್ನು ಬಳಸಿಕೊಳ್ಳುವ ಮೂಲಕ ರೈತರು ಕಡಿಮೆ ಅವಧಿಯಲ್ಲಿ...

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ದೆಹಲಿಯಲ್ಲಿ ‘ತಿರಂಗಾ’ ಪ್ರತಿಭಟನೆಗೆ ತಡೆ: ದೀಪ್ಕೆ, ನೇಹಾ ಬೋರಾ ಸೇರಿ ಸುಮಾರು 150 ಮಂದಿ ವಶಕ್ಕೆ

‘ಲೆಹರಾ ದೋ ತಿರಂಗಾ’ ಪ್ರತಿಭಟನೆ ಮತ್ತು ಸಂಬಂಧಿತ ಪ್ರದರ್ಶನಗಳ ಸಂದರ್ಭದಲ್ಲಿ ಅಭಿಜೀತ್...