ನಾನು ಏನೇ ಮಾಡಿದರೂ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ: ಟ್ರಂಪ್

Date:

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ-ಪಾಕಿಸ್ತಾನ ಸಂಘರ್ಷದ ಸಮಯದಲ್ಲಿ ಮಧ್ಯಸ್ಥಿಕೆ ವಹಿಸಿದ್ದೇನೆ. ಜೊತೆಗೆ, ಜಗತ್ತಿನಾದ್ಯಂತ ವಿವಿಧ ಸಂಘರ್ಷಗಳಲ್ಲಿ ಮಧ್ಯಸ್ಥಿಕೆ ವಹಿಸಲು ಪ್ರಯತ್ನಿಸಿದ್ದೇನೆ. ಆದರೂ, ನನ್ನ ಪ್ರಯತ್ನಗಳಿಗಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಷಾದ ವ್ಯಕ್ತಪಡಿಸಿದ್ದಾರೆ.

- Advertisement -

ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಘೋಷಣೆಯಲ್ಲಿ ಟ್ರಂಪ್ ನಿರ್ಣಾಯಕ ಪಾತ್ರ ವಹಿಸಿದ್ದಕ್ಕಾಗಿ, ಅವರ ರಾಜತಾಂತ್ರಿಕ ಹಸ್ತಕ್ಷೇಪ ಮತ್ತು ಉತ್ತಮ ನಾಯಕತ್ವವನ್ನು ಉಲ್ಲೇಖಿಸಿ ಟ್ರಂಪ್‌ಗೆ 2026ರ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕೆಂದು ಶಿಫಾರಸು ಮಾಡಲು ಪಾಕಿಸ್ತಾನ ಸರ್ಕಾರ ನಿರ್ಧರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಬಗ್ಗೆ ವರದಿಯಾದ ಬೆನ್ನಲ್ಲೇ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿರುವ ಟ್ರಂಪ್, “ನಾನು ಏನೇ ಮಾಡಿದರೂ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ” ಎಂದು ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ಥಾನ ನಡುವಿನ ಕದನ ವಿರಾಮ ಘೋಷಣೆಯಲ್ಲಿ ತಾವು ಮಧ್ಯಸ್ಥಿಕೆ ವಹಿಸಿದ್ದಾಗ ಪುನರುಚ್ಛರಿಸಿದ್ದಾರೆ.

“ಕಾಂಗೋ ಮತ್ತು ರುವಾಂಡಾ ನಡುವೆಯೂ ಅತ್ಯುತ್ತಮ ಒಪ್ಪಂದವನ್ನು ಮಾಡಿಸುವಲ್ಲಿ ಯಶಸ್ವಿಯಾಗಿದ್ದೇವೆ. ಆ ಎರಡೂ ರಾಷ್ಟ್ರಗಳ ಪ್ರತಿನಿಧಿಗಳು ಒಪ್ಪಂದದ ದಾಖಲೆಗಳಿಗೆ ಸಹಿ ಹಾಕಲು ವಾಷಿಂಗ್ಟ್‌ನ್‌ಗೆ (ಅಮೆರಿಕ) ಬರುತ್ತಾರೆ. ಇದು ಆಫ್ರಿಕಾಗೆ ಶ್ರೇಷ್ಠ ದಿನ, ಸ್ಪಷ್ಟವಾಗಿ ಹೇಳಬೇಕೆಂದರೆ, ಇಡೀ ಜಗತ್ತಿಗೆ ಶ್ರೇಷ್ಠ ದಿನ” ಎಂದು ಟ್ರಂಪ್ ಬಣ್ಣಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಅಮೆರಿಕದ ಟ್ರಂಪ್ ಎಂಬ ಹುಚ್ಚನೂ, ಇರಾನಿನ ಇಸ್ಲಾಮಿಕ್ ಖಮೇನಿಯೂ: ಏನಾಗಲಿದೆ ಮಧ್ಯ ಪ್ರಾಚ್ಯ?

ಆದಾಗ್ಯೂ, ನಾನು ಎಷ್ಟೇ ಸಂಘರ್ಷಗಳನ್ನು ತಡೆಯಲು ಪ್ರಯತ್ನಗಳನ್ನು ಮಾಡಿದರೂ, ನನ್ನ ಪ್ರಯತ್ನಕ್ಕೆ ಉದಾತ್ತ ಬಹುಮಾನ ದೊರೆಯುವುದಿಲ್ಲ. ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ, ಸೆರ್ಬಿಯಾ ಮತ್ತು ಕೊಸೊವೊ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಕೊಡುವುದಿಲ್ಲ” ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.

“ಈಜಿಪ್ಟ್ ಮತ್ತು ಇಥಿಯೋಪಿಯಾ ನಡುವಿನ ಶಾಂತಿ ಕಾಪಾಡಿದ್ದಕ್ಕಾಗಿ ನೊಬೆಲ್ ಶಾಂತಿ ಪ್ರಶಸ್ತಿ ದೊರೆಯುವುದಿಲ್ಲ. ಮಧ್ಯಪ್ರಾಚ್ಯದಲ್ಲಿ ಅಬ್ರಹಾಂ ಒಪ್ಪಂದಗಳನ್ನು ಮಾಡಿದ್ದಕ್ಕಾಗಿ ತನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ” ಎಂದು ಟ್ರಂಪ್ ಬೇಸರ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...