ನ್ಯಾಟೋಗೆ ಅಮೆರಿಕ ಬೆಂಬಲ ಮುಂದುವರಿಕೆ ‘ಹಾಸ್ಯಾಸ್ಪದ’: ಟ್ರಂಪ್

Date:

ನ್ಯಾಟೋ ಒಕ್ಕೂಟದೊಂದಿಗಿನ ಅಮೆರಿಕವು ಏಕಪಕ್ಷೀಯ ಸಂಬಂಧವನ್ನು ಮುಂದುವರಿಸುವುದು ತೀರಾ ‘ಹಾಸ್ಯಾಸ್ಪದ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಜರೆದಿದ್ದಾರೆ. ತಮಗೆ ಆಪತ್ತು ಬಂದಾಗ ಯುರೋಪಿಯನ್ ಮಿತ್ರರಾಷ್ಟ್ರಗಳು ಅಮೆರಿಕದ ಪರವಾಗಿ ನಿಲ್ಲಲಿಲ್ಲ. ಅಮೆರಿಕ-ನ್ಯಾಟೋ ನಡುವಿನ ಸಂಬಂಧವು ಪರಸ್ಪರ ಪೂರಕವಾಗಿಲ್ಲ ಎಂದು ಹೇಳಿದ್ದಾರೆ.

- Advertisement -

ಟರ್ಕಿಯಲ್ಲಿ ಜುಲೈ 8 ಮತ್ತು 9ರಂದು ನಾಟೋ ಶೃಂಗಸಭೆ ನಡೆಯಲಿದೆ. ಸಭೆಗೆ ವೇದಿಕೆ ಸಜ್ಜಾಗುತ್ತಿರುವ ಸಮಯದಲ್ಲಿಯೇ, ನ್ಯಾಟೋ ವಿರುದ್ಧ ಟ್ರಂಪ್ ಕಿಡಿಕಾರಿದ್ದಾರೆ. ತಮ್ಮ ‘ಟ್ರುತ್ ಸೋಷಿಯಲ್’ನಲ್ಲಿ ಪೋಸ್ಟ್‌ ಮಾಡಿರುವ ಟ್ರಂಪ್, “ಅವರು (ನ್ಯಾಟೋ) ನಮಗಾಗಿ ಇರಲೇ ಇಲ್ಲ! ಅಲ್ಲದೆ, ಅಮೆರಿಕ ಮತ್ತು ನಾಟೋ ನಡುವಿನ ಸಂಬಂಧವು ಪರಸ್ಪರ ಪೂರಕವಾಗಿಲ್ಲ. ಅದು ಕೇವಲ ಒಂದು ಕಡೆಯಿಂದ ಮಾತ್ರ ನಡೆಯುತ್ತಿದೆ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು...

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ ಮಹಿಳಾ ಕ್ರೀಡಾಪಟುಗಳ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ಬಡತನ, ಗಾಯದ ನೋವು ಹಾಗೂ ಸಮಾಜದ ಕಟ್ಟುಪಾಡುಗಳನ್ನು ಮೆಟ್ಟಿ ನಿಂತು 14 ಚಿನ್ನದ...

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

ಇರಾನ್ ವಿರುದ್ಧದ ಯುದ್ಧದಲ್ಲಿ ಯುರೋಪಿಯನ್ ರಾಷ್ಟ್ರಗಳು ತಮಗೆ ಬೆಂಬಲ ನೀಡಲಿಲ್ಲವೆಂದು ಪದೇ-ಪದೇ ದೂರುತ್ತಿರುವ ಟ್ರಂಪ್, “ಯುರೋಪ್ ತನ್ನ ಸ್ವಂತ ರಕ್ಷಣೆಯ ಜವಾಬ್ದಾರಿಯನ್ನು ತಾನೇ ವಹಿಸಿಕೊಳ್ಳಬೇಕು” ಎಂದು ಪ್ರತಿಪಾದಿಸುತ್ತಿದ್ದಾರೆ.

ಇದಕ್ಕೆ ಪೂರಕವಾಗಿ ಅಮೆರಿಕವು ಈಗಾಗಲೇ ನಾಟೋ ಒಕ್ಕೂಟಕ್ಕೆ ನೀಡಿದ್ದ ತನ್ನ ರಕ್ಷಣಾ ಬದ್ಧತೆಗಳನ್ನು ಹಂತ ಹಂತವಾಗಿ ಕಡಿಮೆ ಮಾಡಲು ಮುಂದಾಗಿದೆ ಎಂದಿದ್ದಾರೆ.

ಈ ಲೇಖನ ಓದಿದ್ದೀರಾ?: 20 ವರ್ಷ ಗೆಲ್ಲಿಸಿದವರನ್ನೇ ಬಾಂಗ್ಲಾದೇಶಿಗರು ಎಂದರಾ ಎಚ್‌ಡಿಕೆ?

ತಮ್ಮ ಪೋಸ್ಟ್‌ನಲ್ಲಿ ನಾಟೋ ರಾಷ್ಟ್ರಗಳ ರಕ್ಷಣಾ ವೆಚ್ಚದ ಚಾರ್ಟ್ ಒಂದನ್ನು ಲಗತ್ತಿಸಿರುವ ಟ್ರಂಪ್, ಒಕ್ಕೂಟದ ಇತರ ಸದಸ್ಯ ರಾಷ್ಟ್ರಗಳಿಗೆ ಹೋಲಿಸಿದರೆ ಅಮೆರಿಕವು ಅತ್ಯಂತ ಗರಿಷ್ಠ ಪ್ರಮಾಣದ ಬಜೆಟ್ ಅನ್ನು ನಾಟೋ ರಕ್ಷಣೆಗಾಗಿ ವಿನಿಯೋಗಿಸುತ್ತಿದೆ ಎಂಬುದನ್ನು ಸೂಚಿಸಿದ್ದಾರೆ.

1949ರಲ್ಲಿ ಸ್ಥಾಪನೆಯಾದ ನಾಟೋ ಒಕ್ಕೂಟವು ಅಮೆರಿಕ ನೇತೃತ್ವದ ಪ್ರಬಲ ರಕ್ಷಣಾ ಪಡೆಯಾಗಿ ಮಾರ್ಪಟ್ಟಿದೆ. ಇದು ಯುರೋಪ್‌ನಲ್ಲಿ ಸ್ಥಿರತೆಯನ್ನು ಕಾಯ್ದುಕೊಳ್ಳಲು, ಸೋವಿಯತ್ ಒಕ್ಕೂಟದ ಪ್ರಭಾವವನ್ನು ತಡೆಯಲು ಹಾಗೂ ದಶಕಗಳ ಕಾಲ ಜಾಗತಿಕ ಮಟ್ಟದಲ್ಲಿ ಅಮೆರಿಕವನ್ನು ದೊಡ್ಡ ಶಕ್ತಿಯಾಗಿ ಗುರುತಿಸಲು ಪ್ರಮುಖ ಪಾತ್ರ ವಹಿಸಿತ್ತು. ಪ್ರಸ್ತುತ, ಒಟ್ಟು 32 ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿರುವ ನ್ಯಾಟೋದ ಶೃಂಗಸಭೆಯು ಜುಲೈ 7 ಮತ್ತು 8 ರಂದು ಟರ್ಕಿಯ ರಾಜಧಾನಿ ಅಂಕಾರಾದಲ್ಲಿ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಲ್ಲಿ ಪ್ರಯಾಣಿಕನಿಗೆ ಹೃದಯಾಘಾತ: ಸಮಯಪ್ರಜ್ಞೆ ಮೆರೆದ ಚಾಲಕ

ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ ಪ್ರಯಾಣಿಕನೊಬ್ಬರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು...

ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ...

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು ಮಕ್ಕಳ ಜೀವಕ್ಕೆ ಬೆಲೆ ಇಲ್ಲವೇ?

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ...