ಅಮೆರಿಕದ ನೂತನ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕರಿಸಿದ ಕ್ಷಣವೇ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕವನ್ನು ಹಿಂತೆಗೆದುಕೊಳ್ಳುವ ಆದೇಶಕ್ಕೆ ಸಹಿ ಹಾಕಿದರು.
ಕೊರೊನಾ ಸಮಯದಲ್ಲಿ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆ ಮೇಲೆ ತೀವ್ರ ದಾಳಿ ನಡೆಸುತ್ತಿದ್ದರು. ಶ್ವೇತ ಭವನದಲ್ಲಿ ಆದೇಶಕ್ಕೆ ಸಹಿ ಹಾಕಿದ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆಯು ಅಮೆರಿಕದ ವಿರುದ್ಧ ಪಕ್ಷಪಾತ ಮಾಡುತ್ತಿದೆ. ಇಲ್ಲಿ ಚೀನಾಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ನಮಗೆ ಮೋಸ ಮಾಡಿದೆ ಎಂದು ಹೇಳಿದ್ದರು.
ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ಯಾರಿಸ್ ಹವಾಮಾನ ಒಪ್ಪಂದದಿಂದ ಅಮೆರಿಕ ಹಿಂದೆ ಸರಿಯುವುದಾಗಿ ಟ್ರಂಪ್ ಘೋಷಿಸಿದ್ದರು. ಅಧ್ಯಕ್ಷ ಟ್ರಂಪ್ ಮತ್ತೊಮ್ಮೆ ಅಮೆರಿಕವನ್ನು ಪ್ಯಾರಿಸ್ ಹವಾಮಾನ ಒಪ್ಪಂದದಿಂದ ಹಿಂದೆಗೆದುಕೊಳ್ಳಲಿದ್ದಾರೆ ಎಂದು ಶ್ವೇತಭವನವು ಹೇಳಿಕೆ ನೀಡಿದೆ. ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳ ನಂತರ ಕ್ಯಾಪಿಟಲ್ ಒನ್ ಅರೆನಾದಲ್ಲಿ ತಮ್ಮ ಮೊದಲ ಕಾರ್ಯಕಾರಿ ಆದೇಶಗಳಿಗೆ ಸಹಿ ಹಾಕಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ರೋಹಿತ್ ಕಾಯ್ದೆ’ ಜಾರಿಗಾಗಿ ಆಗಬೇಕಿದೆ ‘ಜನಾಂದೋಲನ’
ಪ್ರಮಾಣವಚನ ಸ್ವೀಕರಿಸಿದ ಸುಮಾರು ಎಂಟು ಗಂಟೆಗಳ ನಂತರ ಹೊರಡಿಸಿದ ಕಾರ್ಯನಿರ್ವಾಹಕ ಆದೇಶದಲ್ಲಿ, ಕೋವಿಡ್ 19 ಸಾಂಕ್ರಾಮಿಕ ರೋಗವನ್ನು ವಿಶ್ವ ಆರೋಗ್ಯ ಸಂಸ್ಥೆ ತಪ್ಪಾಗಿ ನಿರ್ವಹಿಸುವುದು ಮತ್ತು ತುರ್ತಾಗಿ ಅಗತ್ಯವಿರುವ ಸುಧಾರಣೆಗಳನ್ನು ಅಳವಡಿಸಿಕೊಳ್ಳದಿರುವುದು ಸೇರಿದಂತೆ ಹಲವಾರು ಕಾರಣಗಳನ್ನು ಟ್ರಂಪ್ ಉಲ್ಲೇಖಿಸಿದ್ದಾರೆ.
ಈ ಸಮಯದಲ್ಲಿ, ಪ್ಯಾರಿಸ್ ಹವಾಮಾನ ಒಪ್ಪಂದದಿಂದ ಹಿಂದೆ ಸರಿಯಲು ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಲಾಯಿತು. ಅಧ್ಯಕ್ಷ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕವನ್ನು ಹಿಂತೆಗೆದುಕೊಳ್ಳಲು ತ್ವರಿತ ಕ್ರಮಗಳನ್ನು ತೆಗೆದುಕೊಂಡರು.
ಇದಕ್ಕೂ ಮುನ್ನ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸಮಾರಂಭ ನಡೆಯಿತು. ಸಮಾರಂಭದಲ್ಲಿ ವಿಶ್ವದ ಬೃಹತ್ ತಂತ್ರಜ್ಞಾನ ಕಂಪನಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು (ಸಿಇಒಗಳು) ಉಪಸ್ಥಿತರಿದ್ದರು.
