ಅಮೆರಿಕದ ಹೊರಗೆ ತಯಾರಾದ ಸಿನಿಮಾಗಳಿಗೆ ಶೇ. 100 ಸುಂಕ: ಟ್ರಂಪ್ ಘೋಷಣೆ

Date:

ಅಮೆರಿಕದ ಹೊರಗೆ ನಿರ್ಮಾಣವಾಗುವ ಎಲ್ಲ ಚಿತ್ರಗಳ ಮೇಲೂ ಶೇ. 100 ರಷ್ಟು ಸುಂಕವನ್ನು ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಟ್ರೂತ್‌ ಸೋಷಿಯಲ್‌ನಲ್ಲಿ ಘೋಷಿಸಿದ್ದಾರೆ.

- Advertisement -

ಅಮೆರಿಕದ ಚಲನಚಿತ್ರ ಉದ್ಯಮವನ್ನು ಇತರ ರಾಷ್ಟ್ರಗಳು ಕಸಿದುಕೊಂಡಿವೆ ಎಂದು ಟ್ರಂಪ್ ಆರೋಪಿಸಿದರು. ನಮ್ಮ ಸಿನಿಮಾ ತಯಾರಿಕಾ ವ್ಯವಹಾರವನ್ನು ಬೇರೆ ರಾಷ್ಟ್ರಗಳು ಕದ್ದುಕೊಂಡಿವೆ. ಇದು ಮಗುವಿನಿಂದ ಕ್ಯಾಂಡಿ ಕಸಿದುಕೊಳ್ಳುವಂತಹದ್ದಾಗಿದೆ, ಎಂದು ಅವರು ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದಕ್ಕೂ ಮುನ್ನ ಮೇ ತಿಂಗಳಲ್ಲಿ ಟ್ರಂಪ್ ವಾಣಿಜ್ಯ ಇಲಾಖೆ ಹಾಗೂ ಅಮೆರಿಕ ವಾಣಿಜ್ಯ ಪ್ರತಿನಿಧಿಗಳಿಗೆ (USTR) ಈ ದಂಡ ಸುಂಕದ ಪ್ರಕ್ರಿಯೆಯನ್ನು ಆರಂಭಿಸಲು ಸೂಚಿಸಿದ್ದರು. ಆ ವೇಳೆಗೆ ಅವರು, “ಅಮೆರಿಕದ ಸಿನಿಮಾ ಉದ್ಯಮ ಅತ್ಯಂತ ವೇಗವಾಗಿ ಸಾಯುತ್ತಿದೆ” ಎಂದು ಎಚ್ಚರಿಕೆ ನೀಡಿದ್ದರು.

ಇದು ಕೇವಲ ಆರ್ಥಿಕ ವಿಚಾರವಲ್ಲ, ರಾಷ್ಟ್ರೀಯ ಭದ್ರತೆಗೂ ಸಂಬಂಧಿಸಿದೆ ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ. ಇದು ಸಂದೇಶ ಹಾಗೂ ಪ್ರಚಾರದ ವಿಷಯವೂ ಆಗಿದೆ. ನಾವು ಮತ್ತೆ ಸಿನಿಮಾಗಳನ್ನು ಅಮೆರಿಕದಲ್ಲೇ ನಿರ್ಮಿಸಬೇಕಾಗಿದೆ ಎಂದು ಒತ್ತಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹಿಂದುಳಿದ ವರ್ಗಗಳ ಹಿತಕ್ಕೆ ಕೊಳ್ಳಿ ಇಡಲು ಹೊರಟ ಬಿಜೆಪಿ

ಆದರೆ ತಜ್ಞರ ಅಭಿಪ್ರಾಯದಲ್ಲಿ ಈ ನೀತಿ ಹಾಲಿವುಡ್‌ಗೆ ತೊಂದರೆಯನ್ನು ಉಂಟುಮಾಡುವ ಸಾಧ್ಯತೆ ಇದೆ. ಡಿಸ್ನಿ, ಪ್ಯಾರಮೌಂಟ್, ವಾರ್ನರ್ ಬ್ರದರ್ಸ್ ಮುಂತಾದ ಅಮೆರಿಕ ಸ್ಟುಡಿಯೋಗಳು ಖರ್ಚು ಕಡಿಮೆ ಮಾಡಲು ಅನೇಕ ಬಾರಿ ವಿದೇಶಗಳಲ್ಲಿ ಚಿತ್ರೀಕರಣ ಮಾಡುತ್ತವೆ. ಈಗಾಗಲೇ ಕೋವಿಡ್ ನಂತರ ಚೇತರಿಸಿಕೊಳ್ಳುತ್ತಿರುವ ಈ ಕಂಪನಿಗಳಿಗೆ ಹೆಚ್ಚುವರಿ ಹೊರೆ ಬೀಳಬಹುದು ಎಂದು ವಿಶ್ಲೇಷಕರು ತಿಳಿಸಿದ್ದಾರೆ.

ಚೀನಾದೊಂದಿಗೆ ಹೆಚ್ಚುತ್ತಿರುವ ವ್ಯಾಪಾರ ಗದ್ದಲದ ನಡುವೆ ಈ ನಿರ್ಧಾರ ಹೊರಬಿದ್ದಿದ್ದು ಗಮನಾರ್ಹ. ಚೀನಾ ಜಗತ್ತಿನ ದ್ವಿತೀಯ ಅತಿದೊಡ್ಡ ಚಿತ್ರ ಮಾರುಕಟ್ಟೆಯಾಗಿದ್ದು, ಇದರ ಪರಿಣಾಮ ವ್ಯಾಪಕವಾಗಬಹುದೆಂದು ತಜ್ಞರು ಸೂಚಿಸಿದ್ದಾರೆ.

ಸೋಮವಾರದ ಘೋಷಣೆಯ ನಂತರ ನೆಟ್‌ಫ್ಲಿಕ್ಸ್, ವಾರ್ನರ್ ಬ್ರದರ್ಸ್, ಡಿಸ್ಕವರಿ ಮುಂತಾದ ಮನರಂಜನಾ ಕಂಪನಿಗಳ ಷೇರು ಮಾರುಕಟ್ಟೆ ವಹಿವಾಟಿನಲ್ಲಿ ಇಳಿಕೆಯಾಗಿದ್ದವು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಭಾರತದ ನಿಜವಾದ ಬಾಸ್ ಅಂಬಾನಿಯೇ’: ಸ್ಟಾರ್‌ಲಿಂಕ್ ಸೇವೆಗೆ ಅನುಮತಿ ವಿಳಂಬದ ಬಗ್ಗೆ ಎಲಾನ್ ಮಸ್ಕ್ ಪ್ರಶ್ನೆ

ವಾಷಿಂಗ್ಟನ್‌ ಡಿಸಿ/ನವದೆಹಲಿ: ಭಾರತದಲ್ಲಿ ತನ್ನ ಸ್ಟಾರ್‌ಲಿಂಕ್ (Starlink) ಉಪಗ್ರಹ ಆಧಾರಿತ ಇಂಟರ್ನೆಟ್...

2026ರ ನೊಬೆಲ್ ಸಾಹಿತ್ಯ ಪ್ರಶಸ್ತಿ: ಕೆನಡಾದ ಖ್ಯಾತ ಕವಯಿತ್ರಿ ‘ಆನ್ ಕಾರ್ಸನ್’ ಮುಡಿಗೇರಿದ ಗರಿ

ಸಾಹಿತ್ಯ ಲೋಕದ ಅತ್ಯಂತ ಪ್ರತಿಷ್ಠಿತ ಗೌರವವಾದ 2026ನೇ ಸಾಲಿನ 'ನೊಬೆಲ್ ಸಾಹಿತ್ಯ...