ಚೀನಾ ಮೇಲೆ ಶೇ. 100 ಸುಂಕ ವಿಧಿಸಿದ ಟ್ರಂಪ್‌

Date:

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಚೀನಾದ ಮೇಲೆ ಶೇ 100 ರಷ್ಟು ಹೆಚ್ಚುವರಿ ತೆರಿಗೆ ಹೇರುವುದಾಗಿ ಘೋಷಿಸಿ, ಬೀಜಿಂಗ್‌ರೊಂದಿಗಿನ ವಾಣಿಜ್ಯ ಸಮರವನ್ನು ಮುಂದುವರಿಸಿದ್ದಾರೆ. ಜೊತೆಗೆ, ಚೀನಾದ ಅಧ್ಯಕ್ಷ ಷಿ ಜಿನ್‌ಪಿಂಗ್ ಜೊತೆ ನಿಗದಿಯಾಗಿದ್ದ ಶೃಂಗಸಭೆಯನ್ನು ರದ್ದು ಮಾಡುವ ಸಾಧ್ಯತೆಯನ್ನೂ ಸೂಚಿಸಿದ್ದಾರೆ.

- Advertisement -

ಹೊಸ ಸುಂಕ ನೀತಿಯು ನವೆಂಬರ್ 1 ರಿಂದ ಜಾರಿಗೆ ಬರಲಿದೆ. ಅಪರೂಪದ ಭೂಮಿಯ ಖನಿಜಗಳ ರಫ್ತುಗಳ ಮೇಲೆ ಚೀನಾ ನಿರ್ಬಂಧಗಳನ್ನು ವಿಧಿಸಿದ್ದಕ್ಕೆ ಪ್ರತೀಕಾರವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಖನಿಜಗಳು ಸ್ಮಾರ್ಟ್‌ಫೋನ್‌ಗಳು, ಎಲೆಕ್ಟ್ರಿಕ್ ವಾಹನಗಳು ಮತ್ತು ಮಿಲಿಟರಿ ಉಪಕರಣಗಳ ತಯಾರಿಕೆಗೆ ಅತ್ಯಗತ್ಯ. ಚೀನಾದ ಈ ನಡೆ ‘ಅಸಾಧಾರಣವಾಗಿ ಆಕ್ರಮಣಕಾರಿ’ ಎಂದು ಟ್ರಂಪ್ ಟ್ರೂತ್ ಸೋಶಿಯಲ್‌ನಲ್ಲಿ ಆರೋಪಿಸಿದ್ದಾರೆ. ಈಗಾಗಲೇ ಜಾರಿಯಲ್ಲಿರುವ ಶೇ. 30ರಷ್ಟು ಸುಂಕದ ಜೊತೆಗೆ ಈ ಹೊಸ ಸುಂಕವು ಸೇರ್ಪಡೆಯಾಗಲಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೆಡಿಕಲ್‌ ಮಾಫಿಯಾಗೆ ಅಮಾಯಕ ಮಕ್ಕಳು ಬಲಿ; ಸರ್ಕಾರಗಳೇ ಜವಾಬ್ದಾರಿ

ಚೀನಾದ ಈ ನಡೆ ಹಿನ್ನೆಲೆಯಲ್ಲಿ ಟ್ರಂಪ್ ಅವರು ಈ ತಿಂಗಳ ಕೊನೆಯಲ್ಲಿ ದಕ್ಷಿಣ ಕೊರಿಯಾದಲ್ಲಿ ನಡೆಯಲಿರುವ APEC ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿಯಾಗುವ ತಮ್ಮ ಯೋಜನೆಯನ್ನು ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಜನವರಿಯಲ್ಲಿ ಅಧಿಕಾರಕ್ಕೆ ಮರಳಿದ ನಂತರ ಈ ಇಬ್ಬರೂ ನಾಯಕರ ಮೊದಲ ಭೇಟಿ ಇದಾಗಬೇಕಿತ್ತು. “ಈಗ ಭೇಟಿಯಾಗಲು ಯಾವುದೇ ಕಾರಣವಿಲ್ಲ” ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ.

ಟ್ರಂಪ್ ಅವರ ಈ ಘೋಷಣೆಯು ಮಾರುಕಟ್ಟೆಯಲ್ಲಿ ತಕ್ಷಣದ ಪರಿಣಾಮ ಬೀರಿದ್ದು, ಅಮೆರಿಕದ ಷೇರು ಮಾರುಕಟ್ಟೆಗಳು ಕುಸಿತ ಕಂಡಿವೆ. ನಾಸ್ದಾಕ್‌ ಶೇ. 3.6 ಮತ್ತು ಎಸ್&ಪಿ 500 ಶೇ. 2.7 ರಷ್ಟು ಇಳಿಕೆ ಕಂಡಿವೆ. ಇದೇ ಸಮಯದಲ್ಲಿ, ಅಮೆರಿಕದ ಸಂವಹನ ನಿಯಂತ್ರಕ ಸಂಸ್ಥೆ (FCC) ಕೂಡಾ ನಿಷೇಧಿತ ಚೀನೀ ವಸ್ತುಗಳ ‘ಲಕ್ಷಾಂತರ’ ಪಟ್ಟಿಗಳನ್ನು ಆನ್‌ಲೈನ್ ವೇದಿಕೆಗಳಿಂದ ತೆಗೆದುಹಾಕುವಲ್ಲಿ ಯಶಸ್ವಿಯಾಗಿದೆ ಎಂದು ಘೋಷಿಸಿದೆ. ಈ ಕ್ರಮಗಳು ಉಭಯ ದೇಶಗಳ ನಡುವಿನ ಸಂಬಂಧದಲ್ಲಿ ಉದ್ವಿಗ್ನತೆಯನ್ನು ತೀವ್ರಗೊಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...